AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ

ಸಾಕಷ್ಟು ಜನರು ಶೀತ, ಕೆಮ್ಮು, ಕಫ, ಜ್ವರದಂತಹ ಸಮಸ್ಯೆಗಳು ಚಳಿಗಾಲದಲ್ಲಿ ಸಾಮಾನ್ಯವೆಂದು ಪರಿಗಣಿಸುತ್ತಾರೆ. ಸಾಮಾನ್ಯವೆಂದು ನಿರ್ಲಕ್ಷ್ಯಿಸುತ್ತಾ ಹೋದರೆ ನೀವು ನ್ಯುಮೋನಿಯಾಕ್ಕೆ ಗುರಿಯಾಗಬಹುದು. ಅದರಲ್ಲೂ ಮಕ್ಕಳ ಮೇಲೆ ಇದರ ಪರಿಣಾಮ ತೀವ್ರವಾಗಿರುತ್ತದೆ. ನ್ಯುಮೋನಿಯಾದ ಲಕ್ಷಣಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ
Pneumonia
ಅಕ್ಷತಾ ವರ್ಕಾಡಿ
|

Updated on: Dec 31, 2023 | 4:16 PM

Share

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ, ವಿಶೇಷವಾಗಿ ಆಹಾರ ಪದ್ಧತಿ. ನೀವು ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸುತ್ತಾ ಹೋದಂತೆ ವೈರಲ್​​ ಸೋಂಕಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ನ್ಯುಮೋನಿಯಾದ ಅನೇಕ ಪ್ರಕರಣಗಳು ಚಳಿಗಾಲದಲ್ಲಿ ಕಂಡುಬರುತ್ತವೆ ಮತ್ತು ಪರಿಸ್ಥಿತಿಯು ಗಂಭೀರವಾಗಿದ್ದರೆ, ಸಾವಿನ ಅಪಾಯವಿರುತ್ತದೆ. ಚಿಕ್ಕ ಮಕ್ಕಳ ಬಗ್ಗೆ ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬಾರದು ಮತ್ತು ಕೆಲವು ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇವು ನ್ಯುಮೋನಿಯಾದ ಲಕ್ಷಣಗಳಾಗಿರಬಹುದು.

ಚಳಿಗಾಲದಲ್ಲಿ ತಾಪಮಾನ ಕಡಿಮೆಯಾದ ತಕ್ಷಣ, ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗುತ್ತವೆ, ಆದ್ದರಿಂದ ಜಾಗರೂಕರಾಗಿರುವುದು ಉತ್ತಮ. ವಾಸ್ತವವಾಗಿ, ನ್ಯುಮೋನಿಯಾದಲ್ಲಿ, ಶ್ವಾಸಕೋಶದಲ್ಲಿ ಸೋಂಕು ಪ್ರಾರಂಭವಾಗುತ್ತದೆ, ಇದರಿಂದ ಉಸಿರಾಟದ ತೊಂದರೆಗಳು ಉಂಟಾಗುತ್ತವೆ.

ಇದನ್ನೂ ಓದಿ: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಉಸಿರಾಟದ ತೊಂದರೆ:

ನ್ಯುಮೋನಿಯಾ ನಿಮ್ಮ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಕಫದಿಂದಾಗಿ ನೀವು ಎದೆಯಲ್ಲಿ ಬಿಗಿತ ಮತ್ತು ನೋವನ್ನು ಅನುಭವಿಸಿದರೆ,ಅದು ನ್ಯುಮೋನಿಯಾದ ಲಕ್ಷಣವಾಗಿರಬಹುದು.

ಜ್ವರವನ್ನು ನಿರ್ಲಕ್ಷಿಸಬೇಡಿ:

ನ್ಯುಮೋನಿಯಾದ ಆರಂಭಿಕ ರೋಗಲಕ್ಷಣಗಳಲ್ಲಿ ಒಂದು ದೇಹದ ಉಷ್ಣಾಂಶದಲ್ಲಿ ಹಠಾತ್ ಹೆಚ್ಚಳ ಅಥವಾ ಮರುಕಳಿಸುವ ಜ್ವರ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ನಿರ್ಲಕ್ಷಿಸಬೇಡಿ. ದೇಹದ ಉಷ್ಣತೆಯು 100.4 ಡಿಗ್ರಿ ಫ್ಯಾರನ್‌ಹೀಟ್‌ಗಿಂತ ಹೆಚ್ಚಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಇಲ್ಲದಿದ್ದರೆ ಪರಿಸ್ಥಿತಿ ತುಂಬಾ ಗಂಭೀರವಾಗಬಹುದು.

ಹಸಿವಿನ ನಷ್ಟ ಮತ್ತು ಆಯಾಸ:

ನೆಗಡಿ, ಕೆಮ್ಮು, ನೋವಿದ್ದು, ಹಸಿವೆಯಲ್ಲಿ ಬದಲಾವಣೆ ಇದೆ ಅಂದರೆ ತಿನ್ನಲು ಮನಸ್ಸಾಗದಿದ್ದರೆ ಸಾಮಾನ್ಯವೆಂದು ನಿರ್ಲಕ್ಷ್ಯಿಸದಿರಿ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ