Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ಪುರುಷಗಿಂತ ಮಹಿಳೆಯರ ಹೃದಯ ಬಡಿತ ವೇಗವಾಗಿರುತ್ತದೆ; ಸಂಶೋಧನೆ

ಪುರುಷರ ಹೃದಯ ಬಡಿತಕ್ಕೆ ಹೋಲಿಸಿದರೆ ಮಹಿಳೆಯರ ಹೃದಯ ಬಡಿತವು ವೇಗವಾಗಿರುತ್ತದೆ. ಇದಕ್ಕೆ ಕಾರಣವೇನು ಎಂದು ಇಲ್ಲಿ ತಿಳಿದುಕೊಳ್ಳಿ.

Heart Health: ಪುರುಷಗಿಂತ ಮಹಿಳೆಯರ ಹೃದಯ ಬಡಿತ ವೇಗವಾಗಿರುತ್ತದೆ; ಸಂಶೋಧನೆ
ಪುರುಷಗಿಂತ ಮಹಿಳೆಯರ ಹೃದಯ ಬಡಿತ ವೇಗವಾಗಿರುತ್ತದೆImage Credit source: Medanta
Follow us
ಅಕ್ಷತಾ ವರ್ಕಾಡಿ
|

Updated on: Jun 02, 2023 | 6:17 PM

ClevelandClinic.org ನಡೆಸಿದ ಸಂಶೋಧನೆಯೊಂದರ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಸ್ವಲ್ಪ ವೇಗವಾಗಿ ಹೃದಯ ಬಡಿತವನ್ನು ಹೊಂದಿರುತ್ತಾರೆ. ಗರ್ಭಾವಸ್ಥೆ ಮತ್ತು ಋತುಬಂಧ ಎರಡೂ ಹೃದಯದ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತವೆ ಎಂದು ತಿಳಿದುಬಂದಿದೆ. ವಯಸ್ಕ ಮಹಿಳೆಯರಿಗೆ ಸರಾಸರಿ ಹೃದಯ ಬಡಿತವು ಪ್ರತಿ ನಿಮಿಷಕ್ಕೆ 78 ರಿಂದ 82 ಬಡಿತ ಇರುತ್ತದೆ, ಆದರೂ ಸಾಮಾನ್ಯ ವ್ಯಾಪ್ತಿಯು ನಿಮಿಷಕ್ಕೆ 60 ರಿಂದ 100 ಬೀಟ್ಸ್ ನಡುವೆ ಇರುತ್ತದೆ. ಹಾರ್ಮೋನುಗಳು, ವ್ಯಾಯಾಮ ಮತ್ತು ಜೀವನಶೈಲಿಯ ಆಯ್ಕೆಗಳಂತಹ ಬಹು ಅಂಶಗಳು ನಿಮ್ಮ ಹೃದಯ ಬಡಿತದ ಮೇಲೆ ಪರಿಣಾಮ ಬೀರಬಹುದು ಎಂದು ಸಂಶೋಧನೆ ತಿಳಿಸಿದೆ.

ಆದರೆ ಈ ಸಂಶೋಧನೆಗೆ ಸಂಬಂಧಿಸಿದಂತೆ ನೋಯ್ಡಾದ ಶಾರದಾ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಸುಭೇಂದು ಮೊಹಾಂತಿ ಈ ಹೇಳಿಕೆಯನ್ನು ನಿರಾಕರಿಸಿದರು, ಹೃದಯ ಬಡಿತವು ಲಿಂಗಕ್ಕೆ ಸಂಬಂಧಿಸಿಲ್ಲ. ಹೃದಯ ಬಡಿತವು ವ್ಯಕ್ತಿಯ ದೈಹಿಕ ಚಟುವಟಿಕೆಗಳಿಂದ ಬದಲಾವಣೆ ಉಂಟಾಗುತ್ತದೆ ಎಂದು ಡಾ. ಮೊಹಾಂತಿ ಇಂಡಿಯನ್​​ ಎಕ್ಸ್​​ಪ್ರೆಸ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಯಿ ಮತ್ತು ಹಲ್ಲುಗಳಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯಬೇಡ

ಆದರೆ ಮಣಿಪಾಲ್ ಆಸ್ಪತ್ರೆಯ ಸಲಹೆಗಾರ ಡಾ.ರಂಜನ್ ಶೆಟ್ಟಿಯವರ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯ ಹೃದಯ ಬಡಿತ ಸ್ವಲ್ಪ ಹೆಚ್ಚಾಗಿರುತ್ತದೆ ಎಂದು ಹೇಳಿದ್ದಾರೆ. ಪುರುಷ ಮತ್ತು ಮಹಿಳೆಯರ ಹೃದಯಬಡಿತದಲ್ಲಿ 10 ಬಡಿತಗಳ ವರೆಗೆ ವ್ಯಾತಾಸವಿರಬಹುದು ಎಂದು ಹೇಳಿದ್ದಾರೆ. ಉದಾಹರಣೆಗೆ ಹೆರಿಗೆಯ ಸಮಯದಲ್ಲಿ ಅವರ ಹೃದಯ ಬಡಿತವು ಸ್ವಾಭಾವಿಕವಾಗಿ ಹೆಚ್ಚಾಗಿರುತ್ತದೆ. ಆದ್ದರಿಂದ, ಎರಡು ನಿಮಿಷಗಳ ಕಾಲ ವಾಕಿಂಗ್ ಮತ್ತು ನಂತರ ಜಾಗಿಂಗ್ ಅಥವಾ ವ್ಯಾಯಾಮದ ಮೂಲಕ ಪುರುಷರು ಮತ್ತು ಮಹಿಳೆಯರು ನೈಸರ್ಗಿಕವಾಗಿ ತಮ್ಮ ಹೃದಯ ಬಡಿತವನ್ನು ಕಡಿಮೆ ಮಾಡಬಹುದು, ”ಡಾ ಶೆಟ್ಟಿ ತಿಳಿಸಿದ್ದಾರೆ. ಜೊತೆಗೆ ಸುಮಾರು 20 ರಿಂದ 25 ನಿಮಿಷಗಳ ಕಾಲ ವ್ಯಾಯಾಮ, ಯೋಗ ಮತ್ತು ಧ್ಯಾನದ ಸಂಯೋಜನೆಯಲ್ಲಿ ತೊಡಗಿಸಿಕೊಂಡರೆ ಹೃದಯ ಬಡಿತವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?