Women Health: ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಅನಿಯಮಿತ ಮುಟ್ಟಿನ ಸಮಸ್ಯೆಗೆ ಆಳ್ವಿ ಬೀಜ ಉತ್ತಮ ಪರಿಹಾರವಾಗಿದೆ

ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅನಿಯಮಿತ ಮುಟ್ಟಿನ ಸಮಸ್ಯೆಯನ್ನು ನಿಯಂತ್ರಿಸುವುದರಿಂದ ಹಿಡಿದು, ತೂಕ ಇಳಿಸುವವರೆಗೆ ಆಳ್ವಿ ಬೀಜ ಸಹಾಯಕವಾಗಿದೆ.

Women Health: ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಅನಿಯಮಿತ ಮುಟ್ಟಿನ ಸಮಸ್ಯೆಗೆ ಆಳ್ವಿ ಬೀಜ ಉತ್ತಮ ಪರಿಹಾರವಾಗಿದೆ
ಆಳ್ವಿ ಬೀಜ
Follow us
TV9 Web
| Updated By: ganapathi bhat

Updated on: Jul 17, 2021 | 8:06 PM

ಆಳ್ವಿ ಬೀಜಗಳನ್ನು ಪೋಷಕಾಂಶಗಳ ನಿಧಿ ಎಂದು ಪರಿಗಣಿಸಲಾಗುತ್ತದೆ. ಆರೋಗ್ಯ ತಜ್ಞರು ಇದನ್ನು ಸೂಪರ್​ ಫುಡ್​ ಎಂದು ಸೂಚಿಸಿದ್ದಾರೆ. ಆಳ್ವಿ ಬೀಜದಲ್ಲಿ ಫೋಲೇಟ್, ಕಬ್ಬಿಣ, ಫೈಬರ್, ವಿಟಮಿನ್ ಸಿ, ಎ, ಇ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದು ಮಹಿಳೆಯರ ಆರೋಗ್ಯಕ್ಕೆ( Women Health)ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅನಿಯಮಿತ ಮುಟ್ಟಿನ( Periods) ಸಮಸ್ಯೆಯನ್ನು ನಿಯಂತ್ರಿಸುವುದರಿಂದ ಹಿಡಿದು, ತೂಕ ಇಳಿಸುವವರೆಗೆ ಆಳ್ವಿ ಬೀಜ ಸಹಾಯಕವಾಗಿದೆ.

1. ಆಳ್ವಿ ಬೀಜಗಳು ದೇಹದಲ್ಲಿನ ಈಸ್ಟ್ರೊಜೆನ್ ಹಾರ್ಮೋನುಗಳಂತೆ ಕಾರ್ಯನಿರ್ವಹಿಸುವ ಫೈಟೊಕೆಮಿಕಲ್ ಗಳನ್ನು ಹೊಂದಿರುತ್ತವೆ. ನಿಮಗೆ ಯಾವುದೇ ಹಾರ್ಮೋನುಗಳ ಸಮಸ್ಯೆ ಇದ್ದರೆ, ಆಳ್ವಿ ಬೀಜಗಳನ್ನು ಸೇವಿಸುವುದರಿಂದ ಹಾರ್ಮೋನುಗಳು ನಿಯಂತ್ರಿಸಲ್ಪಡುತ್ತವೆ ಮತ್ತು ಅನಿಯಂತ್ರಿತ ಮುಟ್ಟಿನ ಸಮಸ್ಯೆ ದೂರವಾಗುತ್ತದೆ.

2. ಹಾಲುಣಿಸುವ ಮಹಿಳೆಯರಿಗೂ ಆಳ್ವಿ ಬೀಜಗಳಿಂದ ಅನೇಕ ಪ್ರಯೋಜನಗಳಿವೆ. ಹಾಲನ್ನು ಹೆಚ್ಚಿಸಲು ಇದನ್ನು ಸೇವಿಸಬಹುದು. ಮಗುವಿಗೆ ಬೇಕಾದಷ್ಟು ಹಾಲು ಇಲ್ಲದ ಮಹಿಳೆಯರು ಹೆರಿಗೆಯ ನಂತರ, ತಜ್ಞರ ಸಲಹೆಯೊಂದಿಗೆ ಇದನ್ನು ಸೇವಿಸಬಹುದು. ಹೆರಿಗೆಯ ನಂತರ ದೇಹಕ್ಕೆ ಶಕ್ತಿ ನೀಡಲು ಆಳ್ವಿ ಬೀಜಗಳನ್ನು ಬೆಲ್ಲದ ಜತೆಗೆ ಸೇವಿಸುವುದು ಉತ್ತಮ.

3. ಹೆಚ್ಚಿದ ತೂಕವನ್ನು ನಿಯಂತ್ರಿಸಲು ಆಳ್ವಿ ಬೀಜಗಳು ಪರಿಣಾಮಕಾರಿಯಾಗಿದೆ. ಇದರಲ್ಲಿ ಫೈಬರ್ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಆಳ್ವಿ ಬೀಜ ತಿನ್ನುವುದರಿಂದ ದೇಹವು ಹೆಚ್ಚು ಶಕ್ತಿಯನ್ನು ಪಡೆಯುತ್ತದೆ ಮತ್ತು ದೀರ್ಘಕಾಲದವರೆಗೆ ಹಸಿವು ಇರುವುದಿಲ್ಲ. ನೀವು ಅತಿಯಾಗಿ ತಿನ್ನುವುದರಿಂದ ದೂರವಿರಲು ಮತ್ತು ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡಲು ಆಳ್ವಿ ಬೀಜ ಸಹಾಯಕವಾಗಿದೆ.

4. ರಕ್ತಹೀನತೆಯಿಂದ ಬಳಲುತ್ತಿರುವ ಮಹಿಳೆಯರು ಆಳ್ವಿ ಬೀಜ ಸೇವಿಸುವುದು ಉತ್ತಮ. ಆಳ್ವಿ ಬೀಜದಲ್ಲಿ ಕಬ್ಬಿಣಾಂಶವು ಹೇರಳವಾಗಿ ಕಂಡುಬರುತ್ತದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತದೆ.

5. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಳ್ವಿ ಬೀಜ ಸಹಾಯಕವಾಗಿದೆ. ಈ ಬೀಜಗಳಲ್ಲಿ ವಿಟಮಿನ್ ಸಿ, ಎ, ಇ, ಆಂಟಿಆಕ್ಸಿಡೆಂಟ್‌ಗಳು ಮತ್ತು ಫೋಲಿಕ್ ಆಮ್ಲಗಳು ಸಮೃದ್ಧವಾಗಿವೆ. ಆಳ್ವಿ ಬೀಜ ಸೇವಿಸುವುದರಿಂದ ದೇಹವು ಬಲಗೊಳ್ಳುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

6. ಇದು ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಳ್ವಿ ಬೀಜ ತಿನ್ನುವುದರಿಂದ ಚರ್ಮದ ಸಡಿಲತೆ ಕಡಿಮೆಯಾಗುತ್ತದೆ ಮತ್ತು ಚರ್ಮದಲ್ಲಿನ ಸುಕ್ಕು ದೂರವಾಗುತ್ತದೆ. ಕೂದಲು ಉದುರುತ್ತಿದ್ದರೆ ನೀವು ಖಂಡಿತವಾಗಿಯೂ ಆಳ್ವಿ ಬೀಜಗಳನ್ನು ಸೇವಿಸಬೇಕು. ಇದು ಕೂದಲು ಉದುರುವಿಕೆಯ ಎಲ್ಲಾ ಸಮಸ್ಯೆಗಳನ್ನು ತೆಗೆದುಹಾಕುತ್ತದೆ.

ಇದನ್ನೂ ಓದಿ:

Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ

Jaggery Benefits: ಬೆಲ್ಲದ ಔಷಧೀಯ ಗುಣಗಳ ಬಗ್ಗೆ ನೀವು ತಿಳಿದರೆ, ಸಕ್ಕರೆ ಬದಲು ಸಿಹಿಗಾಗಿ ಇದನ್ನೇ ಬಳಸುತ್ತೀರಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ