Women Health: ಗರ್ಭಿಣಿಯರು ಹಾಲು ಕುಡಿಯುವುದರಿಂದ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆ ಹೆಚ್ಚಾಗುತ್ತದೆ; ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ

| Updated By: Skanda

Updated on: Aug 20, 2021 | 6:58 PM

ಹಾಲನ್ನು ಆರೋಗ್ಯಕರ ಆಹಾರ ಎಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಮಹಿಳೆಯ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ಕಡಿಮೆ ಮಾಡುತ್ತದೆ. ಇದು ಮಗುವಿನ ಆರೋಗ್ಯಕ್ಕೂ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

Women Health: ಗರ್ಭಿಣಿಯರು ಹಾಲು ಕುಡಿಯುವುದರಿಂದ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆ ಹೆಚ್ಚಾಗುತ್ತದೆ; ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ
ಸಾಂದರ್ಭಿಕ ಚಿತ್ರ
Follow us on

ಗರ್ಭಾವಸ್ಥೆಯಲ್ಲಿ ದೇಹಕ್ಕೆ ಹೆಚ್ಚಿನ ಪೋಷಕಾಂಶಗಳು ಬೇಕಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪ್ರೋಟೀನ್, ಕಬ್ಬಿಣ ಮತ್ತು ಕ್ಯಾಲ್ಸಿಯಂ ಇತ್ಯಾದಿಗಳ ಕೊರತೆಯನ್ನು ನೀಗಿಸಲು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುವುದು ಸೂಕ್ತ. ಹಾಲನ್ನು ಆರೋಗ್ಯಕರ ಆಹಾರ ಎಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಮಹಿಳೆಯ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ಕಡಿಮೆ ಮಾಡುತ್ತದೆ. ಇದು ಮಗುವಿನ ಆರೋಗ್ಯಕ್ಕೂ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆದರೆ ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಹಾಲು ಕುಡಿದರೆ ಗ್ಯಾಸ್ ಮತ್ತು ಆ್ಯಸಿಡಿಟಿ ಸಮಸ್ಯೆ ಕಾಡತೊಡಗುತ್ತದೆ.

ಗರ್ಭಾವಸ್ತೆಯಲ್ಲಿ ಗ್ಯಾಸ್ ಸಮಸ್ಯೆ ಮತ್ತು ಆ್ಯಸಿಡಿಟಿ ಸಮಸ್ಯೆ ಕಾಡುವುದು ಸಾಮಾನ್ಯ. ಹಾಲು ಸೇವಿಸಿದ ತಕ್ಷಣ ಇದು ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದರ ಜತೆಗೆ ವಾಕರಿಕೆ.. ಈ ರೀತಿಯ ಸಮಸ್ಯೆಗಳು ಕಾಡಬಹುದು. ತಜ್ಞರ ಪ್ರಕಾರ ಗರ್ಭಾವಸ್ಥೆಯಲ್ಲಿ ಗ್ಯಾಸ್ ಸಮಸ್ಯೆ ಹಾರ್ಮೋನುಗಳ ಏರಿಳಿತದಿಂದ ಕಾಣಿಸಿಕೊಳ್ಳುತ್ತದೆ. ಹಾಲು ಸೇವನೆಯ ಮೂಲಕ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿರುತ್ತದೆ.

ಲ್ಯಾಕ್ಟೋಸ್ ಅಂಶದಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಹಾಲನ್ನು ಜೀರ್ಣಿಸಿಕೊಳ್ಳಲು ಕಷ್ವಾಗುತ್ತದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಹಾಲನ್ನು ಸೇವಿಸಬೇಡಿ. ಸ್ವಲ್ಪ ಏನಾದರೂ ತಿಂಬ ಬಳಿಕ ಹಾಲು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಆಹಾರ ಸೇವಿಸಿದ ಅರ್ಧ ಗಂಟೆಯ ನಂತರ ಹಾಲು ಸೇವಿಸಿ.

ಗ್ಯಾಸ್ ಮತ್ತು ಆ್ಯಸಿಡಿಟಿ ಸಮಸ್ಯೆ ಇದ್ದಲ್ಲಿ ಎಂದಿಗೂ ಉಗುರು ಬೆಚ್ಚಗಿನ ಹಾಲನ್ನು ಕುಡಿಯಬೇಡಿ. ಇದು ಇನ್ನಷ್ಟು ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಯಾವಾಗಲೂ ತಣ್ಣನೆಯ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ನಿಮ್ಮ ಹೊಟ್ಟೆಗೆ ತಂಪನ್ನು ನೀಡುತ್ತದೆ. ಇದರಿಂದ ಯಾವುದೇ ರೀತಿಯ ಸಮಸ್ಯೆ ಕಾಡುವುದಿಲ್ಲ.

ನಿಮಗೆ ಇಷ್ಟವಾದಲ್ಲಿ ಏಲಕ್ಕಿ ಪುಡಿಯನ್ನು ಹಾಲಿನ ಜತೆ ಬೆರೆಸಿಕೊಳ್ಳಬಹುದು. ಆದರೆ ಎಂದಿಗೂ ಅರಿಶಿಣ ಹಾಲನ್ನು ಸೇವಿಸಬೇಡಿ.

ಹಾಲು ಕುಡಿದ ತಕ್ಷಣೆವೇ ಮಲಗುವ ಅಭ್ಯಾಸವಿದ್ದರೆ ಇಂದಿನಿಂದಲೇ ಬಿಟ್ಟುಬಿಡಿ. ಇದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಹಾನಿಯುಂಟಾಗುತ್ತದೆ. ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ:

Women Health: ಗರ್ಭಿಣಿಯರಿಗೆ ಬಾಯಿಯಲ್ಲಿ ಕಹಿ ಅನುಭವಕ್ಕೆ ಕಾರಣ ಮತ್ತು ಪರಿಹಾರ ಕ್ರಮಗಳು

Women Health: ಯಾವುದೇ ಡಯಟ್​ ಇಲ್ಲದೇ ತೂಕ ಇಳಿಸಿಕೊಳ್ಳುವುದು ಹೇಗೆ? ಮಹಿಳೆಯರಿಗಾಗಿ ಇಲ್ಲಿದೆ ಸಲಹೆಗಳು

(Women Health Drinking Milk during pregnancy its increase health problem)