AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ತಮ್ಮ ಆರೋಗ್ಯ, ಆಹಾರದ ಬಗ್ಗೆಯೂ ಇರಬೇಕು ಕಾಳಜಿ!

ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಮಹಿಳೆಯರು ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡುವ ಅಗತ್ಯವಿದೆ. ಆಹಾರ ಸೇವನೆ ಜೊತೆಗೆ ಸಮತೋಲಿತ ಆಹಾರ ಸೇವನೆ ಮಾಡುವ ಅವಶ್ಯಕತೆ ಇದೆ. ಸೇವಿಸುವ ಆಹಾರದಲ್ಲಿ ಶೇಕಡಾ 50ರಷ್ಟು ಕಾರ್ಬೋಹೈಡ್ರೇಟ್ಸ್, 30ರಷ್ಟು ಪ್ರೋಟಿನ್, ಮತ್ತು ಶೇಕಡಾ 20ರಷ್ಟು ಕೊಬ್ಬು ಇರಬೇಕು. ಸರಿಯಾದ ಸಮಯಕ್ಕೆ ಬೆಳಗ್ಗಿನ ತಿಂಡಿ, ಮಧ್ಯಾನದ ಊಟ, ರಾತ್ರಿ ಊಟ ಮಾಡಬೇಕು.

ಮಹಿಳೆಯರಿಗೆ ತಮ್ಮ ಆರೋಗ್ಯ, ಆಹಾರದ ಬಗ್ಗೆಯೂ ಇರಬೇಕು ಕಾಳಜಿ!
Women Food
ಸುಷ್ಮಾ ಚಕ್ರೆ
|

Updated on:Mar 12, 2025 | 9:58 PM

Share

ಬೆಂಗಳೂರು: ಹಿಂದಿನ ಕಾಲದಿಂದಲೂ ಮಹಿಳೆಯರು ಮನೆಯ ಸದಸ್ಯರ ಆರೋಗ್ಯದ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಮಹಿಳೆಯರ ಸಂಖ್ಯೆಯೇ ಹೆಚ್ಚು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಮತ್ತು ಉತ್ತಮ ಜೀವನಶೈಲಿಯನ್ನು ಹೊಂದಲು ಸಾಧ್ಯ. ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡುವ ಅಗತ್ಯವಿದೆ. ಆಹಾರ ಸೇವನೆ ಜೊತೆಗೆ ಸಮತೋಲಿತ ಆಹಾರ ಸೇವನೆ ಮಾಡುವ ಅವಶ್ಯಕತೆ ಇದೆ. ಸೇವಿಸುವ ಆಹಾರದಲ್ಲಿ ಶೇಕಡಾ 50ರಷ್ಟು ಕಾರ್ಬೋಹೈಡ್ರೇಟ್ಸ್, 30ರಷ್ಟು ಪ್ರೋಟಿನ್, ಮತ್ತು ಶೇಕಡಾ 20ರಷ್ಟು ಕೊಬ್ಬು ಇರಬೇಕು. ಸರಿಯಾದ ಸಮಯಕ್ಕೆ ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಮಾಡಬೇಕು.

ಇಂದಿನ ದಿನಗಳಲ್ಲಿ ಭಾರತೀಯ ಮಹಿಳೆಯರು ಪ್ರೋಟಿನ್ ಹಾಗೂ ನ್ಯೂಟ್ರಿಶಿಯನ್ ಕೊರತೆಯಿಂದ ಬಳಲುತ್ತಿದ್ದಾರೆ. ದಿನಕ್ಕೆ 3-4 ಲೀಟರ್ ನೀರು ಕುಡಿಯದೆ ಇರುವುದರಿಂದ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೇಸಿಗೆಯಲ್ಲಿ ಈ ರೀತಿಯ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ನಿಶಾ ಬುಚಾಡೆ ಹೇಳಿದ್ದಾರೆ.

ಇದನ್ನೂ ಓದಿ: ದಾಸವಾಳ ಹೂವಿನ ಚಹಾ ಕುಡಿದು ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಿ

ಮಹಿಳೆಯರು ಕಾಲ ಕಾಲಕ್ಕೆ ತಕ್ಕಂತೆ ಸಿಗುವ ಹಣ್ಣು ಮತ್ತು ತರಕಾರಿಗಳನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಬೇಕು. ಹಾಗೆಯೇ ಉತ್ತಮ ಡಯಟ್ ಕ್ರಮವನ್ನು ರೂಢಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನೆ ಕೆಲಸದಲ್ಲಿ ತೊಡಗಿರುವ ಮಹಿಳೆಯರು ದಿನನಿತ್ಯ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು.

ಮಹಿಳೆಯರು ವಾರದಲ್ಲಿ ಕನಿಷ್ಟ ಐದು ದಿನವಾದರೂ ವ್ಯಾಯಾಮ ಮಾಡುವುದು, ಯೋಗ ಸೇರಿದಂತೆ ಯಾವುದೇ ದೈಹಿಕ ಕಸರತ್ತು ಮಾಡುವ ಅನಿವಾರ್ಯತೆ ಇದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ವಾರ್ಷಿಕವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ನಿಯಂತ್ರಿಸಬಹುದು ಎಂದು ಎಂದು ಡಾ. ನಿಶಾ ಬುಚಾಡೆ ಸಲಹೆ ನೀಡಿದ್ದಾರೆ.

ಆರೋಗ್ಯದ ಕುರಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 12 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ