Women Health: ಗರ್ಭಿಣಿಯರಿಗೆ ಜಂಕ್ ಫುಡ್ ಸೇವನೆ ಆರೋಗ್ಯಕ್ಕೆ ಹಿತವಲ್ಲ; ಏಕೆ ಗೊತ್ತಾ?

ಗರ್ಭಾವಸ್ಥೆಯಲ್ಲಿ ಏಕೆ ಜಂಕ್​ಫುಡ್​ಗಳನ್ನು ತಿನ್ನಬಾರದು, ಏನೆಲ್ಲಾ ಆರೋಗ್ಯ ಸಮಸ್ಯೆ ಉಂಟಾಗಬಹುದು ಎಂಬುದನ್ನು ತಿಳಿಯಿರಿ.

Women Health: ಗರ್ಭಿಣಿಯರಿಗೆ ಜಂಕ್ ಫುಡ್ ಸೇವನೆ ಆರೋಗ್ಯಕ್ಕೆ ಹಿತವಲ್ಲ; ಏಕೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 30, 2021 | 8:04 AM

ಗರ್ಭಾವಸ್ಥೆಯಲ್ಲಿ ಹಾರ್ಮೋನುಗಳ ಬದಲಾವಣೆಯಿಂದಾಗಿ ಕೆಲವೊಮ್ಮೆ ಬಾಯಿಯ ರುಚಿ ಚೆನ್ನಾಗಿರುವುದಿಲ್ಲ. ಕೆಲವೊಮ್ಮೆ ಮಸಾಲಯುಕ್ತ ಮತ್ತು ಹುಳಿ ಆಹಾರವನ್ನು ತಿನ್ನಲು ಹೆಚ್ಚು ಇಷ್ಟವಾಗುತ್ತದೆ. ಇಂತಹ ಸಮಯದಲ್ಲಿ ಗರ್ಭಿಣಿಯರು ಜಂಕ್​ಫುಡ್​ ಮತ್ತು ಪಾಸ್ಟ್ ಫುಡ್​ಗಳನ್ನು ತಿನ್ನುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಜಂಕ್​ಫುಡ್​ ಮಹಿಳೆ ಮತ್ತು ಆಕೆಯ ಮಗುವಿನ ಆರೋಗ್ಯ ಸಮಸ್ಯೆಗಳಿಂಗೆ ತೊಂದರೆಯನ್ನುಂಟು ಮಾಡಬಹುದು. ಹಾಗಿರುವಾಗ ಗರ್ಭಾವಸ್ಥೆಯಲ್ಲಿ ಏಕೆ ಜಂಕ್​ಫುಡ್​ಗಳನ್ನು ತಿನ್ನಬಾರದು, ಏನೆಲ್ಲಾ ಆರೋಗ್ಯ ಸಮಸ್ಯೆ ಉಂಟಾಗಬಹುದು ಎಂಬುದನ್ನು ತಿಳಿಯಿರಿ.

ಗರ್ಭಿಣಿಯರಿಗೆ ಹೆಚ್ಚು ಪೋಷಕಾಂಶಗಳು ಬೇಕಾಗುತ್ತವೆ. ಇದು ಮಗುವಿನ ಬೆಳವಣಿಗೆಗೆ ಅತ್ಯವಶ್ಯಕ. ಅದರ ಬದಲಾಗಿ ಜಂಕ್​ ಫುಡ್​ಗಳ ಸೇವನೆಯು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಆರೋಗ್ಯದ ಕುರಿತಾಗಿ ಹೆಚ್ಚು ಸೂಕ್ಷ್ಮವಾಗಿರುವ ಗರ್ಭಾವಸ್ಥೆಯ ಸಮಯದಲ್ಲಿ ಹೊರಗಿನ ತಿಂಡಿಗಳ ಸೇವನೆಯನ್ನು ಆದಷ್ಟು ತಪ್ಪಿಸುವುದು ಒಳ್ಳೆಯದು.

ಜಂಕ್​ ಫುಡ್​ನಲ್ಲಿ ಎಣ್ಣೆ, ಸಕ್ಕರೆ, ಕೊಬ್ಬು ಮತ್ತು ಕ್ಯಾಲೊರಿಗಳು ಅಧಿಕವಾಗಿರುತ್ತವೆ. ಇಂತಹ ಸಮಯದಲ್ಲಿ ಜಂಕ್​ ಫುಡ್​ನ ಅತಿಯಾದ ಸೇವನೆಯು ತೂಕವನ್ನು ವೇಹವಾಗಿ ಹೆಚ್ಚಿಸುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯ ತೂಕವು ಈಗಾಗಲೇ ನೈಸರ್ಗಿಕವಾಗಿ ಹೆಚ್ಚಾಗುತ್ತಿರುವುದರಿಂದ ಇಂತಹ ಪರಿಸ್ಥಿತಿಯಲ್ಲಿ ಜಂಕ್ ಫುಡ್ ಆಕೆಯ ತೂಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ ಮಹಿಳೆಗೆ ಅನೇಕ ಸಮಸ್ಯೆಗಳು ಕಾಡಬಹುದು. ಜತೆಗೆ ಹೆರಿಗೆ ಸಯದಲ್ಲಿ ಕೆಲವು ಬಾರಿ ತೊಡಕು ಉಂಟಾಗುವ ಸಾಧ್ಯತೆಗಳಿರುತ್ತದೆ.

ಹೆಚ್ಚು ಜಂಕ್ ಫುಡ್ ತಿನ್ನುವುದು ಕೆಲವೊಮ್ಮೆ ಅಧಿಕ ಬಿಪಿಯ ಸಮಸ್ಯೆಗೆ ಕಾರಣವಾಗಬಹುದು. ನೀವು ಈಗಾಗಲೇ ಅಧಿಕ ಬಿಪಿ ಅಥವಾ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿದ್ದರೆ ಈ ವಿಷಯದ ಕುರಿತಾಗಿ ಗಮನವಿರಲಿ. ಯಾವುದೇ ಕಾರಣಕ್ಕೂ ಜಂಕ್ ಫುಡ್​ಗಳನ್ನು ಹೆಚ್ಚಾಗಿ ಸೇವಿಸದಿರುವುದು ಉತ್ತಮ.

ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಏಕೆಂದರೆ ಜಂಕ್ ಫುಟ್​ಗಳಲ್ಲಿ ಸಕ್ಕರೆ ಮತ್ತು ಕ್ಯಾಲೋರಿಫಿಕ್ ಪದಾರ್ಥಗಳ ಪ್ರಮಾಣ ತುಂಬಾ ಹೆಚ್ಚಿರುತ್ತದೆ. ಗರ್ಭಾವಸ್ಥೆಯ ಮಧುಮೇಹ ಹೆಚ್ಚಿನ ಜನನ ತೂಕ ಅಥವಾ ಅಕಾಲಿಕ ಹೆರಿಗೆಗೆ ಕಾರಣವಾಗಬಹುದು.

ಜಂಕ್ ಫುಡ್​ಗಳಲ್ಲಿ ಯಾವುದೇ ಪೋಷಕಾಂಶಗಳಿರುವುದಿಲ್ಲ. ಇದರ ಅತಿಯಾದ ಸೇವನೆಯು ಮಗುವಿನ ಮೆದುಳು, ಹೃದಯ, ಶ್ವಾಸಕೋಶ ಮತ್ತು ಮೂಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಗರ್ಭಾವಸ್ಥೆಯಲ್ಲಿ ಜಂಕ್ ಫುಡ್​ನ ಅತಿಯಾದ ಸೇವನೆಯು ಹುಟ್ಟಲಿರುವ ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಅಲ್ಲದೆ ಕೆಲವು ಸಂಶೋಧನೆಗಳು ಗರ್ಭಾವಸ್ಥೆಯಲ್ಲಿ ಜಂಕ್ ಫುಡ್ ಸೇವನೆಯು ಮಹಿಳೆಯರಲ್ಲಿ ಅಲರ್ಜಿ ಮತ್ತು ಅಸ್ತಮಾದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸೂಚಿಸುತ್ತದೆ.

ಇದನ್ನೂ ಓದಿ:

Women Health: ಗರ್ಭಪಾತಕ್ಕೆ ಕಾರಣಗಳೇನು? ಈ ಅಂಶಗಳನ್ನು ಮಹಿಳೆಯರು ತಿಳಿದಿರುವುದು ಒಳಿತು

Women Health: ನಿಮ್ಮ ಮಗು ಆರೋಗ್ಯವಾಗಿ ಮತ್ತು ಚುರುಕಾಗಿ ಬೆಳೆಯಲು ಗರ್ಭಿಣಿಯರಿಗಾಗಿ ಕೆಲವೊಂದಿಷ್ಟು ಟಿಪ್ಸ್​ಗಳು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ