AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮುಟ್ಟಿನ ದಿನಗಳಲ್ಲಿ ಹೊಟ್ಟೆ ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ವಿಧಾನಗಳು

ಈ ಕೆಳಗಿನ ಕೆಲವು ಸರಳ ವಿಧಾನಗಳ ಮೂಲಕ ಮುಟ್ಟಿನ ಸಮಯದಲ್ಲಿ ಕಂಡು ಬರುವ ಹೊಟ್ಟೆ ನೋವಿನ ಸಮಸ್ಯೆಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

Women Health: ಮುಟ್ಟಿನ ದಿನಗಳಲ್ಲಿ ಹೊಟ್ಟೆ ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ವಿಧಾನಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 24, 2021 | 7:47 AM

Share

ಮಹಿಳೆಯರಲ್ಲಿ ನೈಸರ್ಗಿಕ ಪ್ರಕ್ರಿಯೆಯಾದ ಮುಟ್ಟು ಪ್ರತಿ ತಿಂಗಳು ಕಾಣಿಸಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಅನೇಕರು ಹೊಟ್ಟೆ ನೋವು, ಸಂಕಟವನ್ನು ಅನುಭವಿಸುತ್ತಾರೆ. ಕೆಲವರಂತೂ ತಾಳಲಾರದಷ್ಟು ನೋವು ಅನುಭವಿಸುತ್ತಾರೆ. ಈ ನಾಲ್ಕು ದಿನ ಕಾಣಿಸಿಕೊಳ್ಳುವ ಸಂಕಟದ ಪರಿಹಾರಕ್ಕಾಗಿ ಒಂದಲ್ಲಾ ಒಂದು ಮನೆ ಮದ್ದುಗಳನ್ನು ಹುಡುಕುತ್ತಲೇ ಇರುತ್ತಾರೆ. ಈ ಕೆಳಗಿನ ಕೆಲವು ಸರಳ ವಿಧಾನಗಳ ಮೂಲಕ ಮುಟ್ಟಿನ ಸಮಯದಲ್ಲಿ ಕಂಡು ಬರುವ ಹೊಟ್ಟೆ ನೋವಿನ ಸಮಸ್ಯೆಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಕರಿ ಎಳ್ಳಿನ ಸೇವನೆಯ ಮೂಲಕ ಹೊಟ್ಟೆ ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕರಿ ಎಳ್ಳಿನ ಪುಡಿಯನ್ನು ನೀರಿಗೆ ಸೇರಿಸಿ ದಿನಕ್ಕೆ ಎರಡು ಬಾರಿ ಸೇವಿಸುವುದರ ಮೂಲಕ ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ಹೊಟ್ಟೆ ನೋವಿನಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಹೊಟ್ಟೆಗೆ ತೆಂಗಿನ ಎಣ್ಣೆ ಹಚ್ಚಿಕೊಳ್ಳುವ ಮೂಲಕ ನಿಧಾನವಾಗಿ ಮಸಾಜ್ ಮಾಡಿ. ಇದರಿಂದ ಹೊಟ್ಟೆ ನೋವು ಜತೆಗೆ ಹೊಟ್ಟೆಯ ಭಾಗದಲ್ಲಿ ಸ್ನಾಯು ಸೆಳೆತಂದತಹ ಸಮಸ್ಯೆಗಳಿಗೆ ಪರಿಹಾರವಾಗುತ್ತದೆ.

ಋತು ಚಕ್ರದ ಸಮಯದಲ್ಲಿ ಕಾಫಿ, ಚಹ ಸೇವನೆಯನ್ನು ಕಡಿಮೆ ಮಾಡಿ. ಇದರಲ್ಲಿರುವ ಕೆಫೀನ್ ಅಂಶ ನಿಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ. ಇದರ ಬದಲಾಗಿ ಹಸಿರು ತರಕಾರಿಗಳನ್ನು ಸೇವಿಸಿ. ಜತೆಗೆ ಬಾದಾಮಿ, ಹಾಲಿನಂತರ ಪೌಷ್ಠಿಕ ಆಹಾರ ಪದಾರ್ಥಗಳು ನಿಮ್ಮದಾಗಿರಲಿ.

ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ನೋವಿಗೆ ಬೆಳ್ಳುಳ್ಳಿ ಉತ್ತಮ ಪರಿಹಾರ. ಬೆಳ್ಳುಳ್ಳಿಯನ್ನು ನೀರಿನಲ್ಲಿ ಕುದಿಸಿ. ಆ ನೀರನ್ನು ಬಿಸಿ ಇರುವಾಗಲೇ ಕುಡಿಯುವುದರಿಂದ ಹೊಟ್ಟೆ ನೋವಿನ ಸಮಸ್ಯೆ ಪರಿಹಾರಗೊಳ್ಳುತ್ತದೆ.

ಇದನ್ನು ಓದಿ:

Women Health: ಯುವತಿಯರಿಗಾಗಿಯೇ ಕೆಲವೊಂದಿಷ್ಟು ಟಿಪ್ಸ್​; ಹೊಟ್ಟೆಯ ಬೊಜ್ಜು ಕರಗಿಸಲು ಇಲ್ಲಿದೆ ಸುಲಭ ವಿಧಾನಗಳು

Women Health: ಗರ್ಭಿಣಿಯರು ಹಾಲು ಕುಡಿಯುವುದರಿಂದ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆ ಹೆಚ್ಚಾಗುತ್ತದೆ; ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ

(Women Health Know about home remedies for periods pain)

Follow Us
TV9 Web
TV9 Web

TV9 Kannada

Read More
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್​ಡಿಕೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ಜಂತರ್ ಮಂತರ್‌ನಲ್ಲಿ ಎಎಪಿ ಪ್ರತಿಭಟನೆ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ವಿಶ್ವವಿಖ್ಯಾತ ಮೈಸೂರು ದಸರಾ: ರಾಜವಂಶಸ್ಥರಿಗೆ ಆಹ್ವಾನ ನೀಡಿದ ಜಿಲ್ಲಾಡಳಿತ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಸಾಲ ತೀರಿಸಲು ಕಿಡ್ನ್ಯಾಪ್​ ನಾಟಕ: ತಂದೆಗೇ ವಂಚಿಸಲು ಯತ್ನಿಸಿ ತಗ್ಲಾಕೊಂಡ ಮಗ
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಐಫೆಲ್ ಟವರ್ BAPS ವಿವಾದ: ತನಿಖೆಯಲ್ಲಿ ಸತ್ಯ ಬಯಲು, ಸಂಸ್ಥೆಗೆ ಕ್ಲೀನ್ ಚಿಟ್
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಬೀದರ್​ನಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ಮೈಸೂರು-ರಜನಿಕಾಂತ್​​ ನಡುವಿದೆ ಅವಿನಾಭಾವ ನಂಟು: ಕಾರಣ ಇಲ್ಲಿದೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ವಚನ ನಾದ ಲೋಕಕ್ಕೆ ಸಾಕ್ಷಿಯಾದ ದೇವನಗರಿ ದಾವಣಗೆರೆ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ
ಸೌಜನ್ಯ ಕೇಸ್​​: ಸಾಕ್ಷಿ, ಪ್ರಕರಣ ಸಂಬಂಧ ಸಿಬಿಐ-ಸಿಐಡಿಗೆ SIT ಪತ್ರ