AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಗರ್ಭಿಣಿಯರಿಗೆ ಬಾಯಿಯಲ್ಲಿ ಕಹಿ ಅನುಭವಕ್ಕೆ ಕಾರಣ ಮತ್ತು ಪರಿಹಾರ ಕ್ರಮಗಳು

ಗರ್ಭಾವಸ್ಥೆಯಲ್ಲಿ ಡಿಸ್ಜೂಸಿಯಾ ಸಮಸ್ಯೆ ಸಾಮಾನ್ಯವಾಗಿ ಕಾಡುತ್ತದೆ. ಡಿಸ್ಜೂಸಿಯಾ ಎಂದರೆ ಬಾಯಿಯಲ್ಲಿ ಕಹಿ ರುಚಿಯ ಅನುಭವವಾಗುತ್ತದೆ.

Women Health: ಗರ್ಭಿಣಿಯರಿಗೆ ಬಾಯಿಯಲ್ಲಿ ಕಹಿ ಅನುಭವಕ್ಕೆ ಕಾರಣ ಮತ್ತು ಪರಿಹಾರ ಕ್ರಮಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 19, 2021 | 8:52 AM

ಪ್ರತಿ ಮಹಿಳೆಗೆ ಗರ್ಭಾವಸ್ಥೆಯ ಸಮಯ ಬಹಳ ವಿಶೇಷವಾಗಿದೆ. ಸಂತೋಷದಿಂದಿರುವ ಇಂತಹ ಸಮಯದಲ್ಲಿ ಮಹಿಳೆ ಎಲ್ಲಾ ತೊಂದರೆಗಳನ್ನು ಸಂತೋಷದಿಂದ ಸಹಿಸಿಕೊಳ್ಳುತ್ತಾಳೆ. ಗರ್ಭಧಾರಣೆಯ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಆದರೆ ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಕೆಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಗರ್ಭಾವಸ್ಥೆಯಲ್ಲಿ ಡಿಸ್ಜೂಸಿಯಾ ಸಮಸ್ಯೆ ಸಾಮಾನ್ಯವಾಗಿ ಕಾಡುತ್ತದೆ. ಡಿಸ್ಜೂಸಿಯಾ ಎಂದರೆ ಬಾಯಿಯಲ್ಲಿ ಕಹಿ ರುಚಿಯ ಅನುಭವವಾಗುತ್ತದೆ. ಆಹಾರ ರುಚಿಯೇ ಇಲ್ಲ ಕಹಿ ಎನಿಸುತ್ತದೆ. ಈ ಸಮಸ್ಯೆ ಸಾಮಾನ್ಯವಾಗಿ ಗರ್ಭಿಣಿಯಾದ ಮೂರು ತಿಂಗಳಲ್ಲಿ ಕಾಣಿಸಿಕೊಳ್ಳುತ್ತದೆ. ಸಮಯ ಕಳೆಯುತ್ತಿದ್ದಂತೆಯೇ ತಾನಾಗಿಯೇ ಈ ಸಮಸ್ಯೆ ಗುಣಮುಖವಾಗುತ್ತದೆ. ಈ ಸಮಸ್ಯೆಯ ಕುರಿತಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ಆದರೆ ಡಿಸ್ಜೂಸಿಯಾ ಸಮಸ್ಯೆಗೆ ಕಾರಣಗಳು ಮತ್ತು ಪರಿಹಾರ ಕ್ರಮಗಳ ಬಗ್ಗೆ ತಿಳಿಯೋಣ.

ಕಾರಣ ಈ ಸಮಸ್ಯೆಗೆ ಮುಖ್ಯ ಕಾರಣವೆಂದರೆ ಹಾರ್ಮೋನುಗಳ ಬದಲಾವಣೆ. ವಿಶೇಷವಾಗಿ ಈಸ್ಟ್ರೋಜೆನ್ ಹಾರ್ಮೋನು. ಗರ್ಭಾವಸ್ಥೆಯಲ್ಲಿ ಈಸ್ಟ್ರೋಜೆನ್ ಮಟ್ಟದಲ್ಲಿನ ಬದಲಾವಣೆಗಳು ಸಮಸ್ಯೆಗೆ ಕಾರಣವಾಗಬಹುದು. ಇದರಿಂದ ಬಾಯಿಯಲ್ಲಿ ಕಹಿ ಅನುಭವವಾಗುತ್ತದೆ. ಕಡಿಮೆ ನೀರು ಕುಡಿಯುವುದರಿಂದ ಹಾಗೂ ಔಷಧಿಗಳನ್ನು ಸೇವಿಸುವುದರಿಂದ ಬಾಯಿಯ ರುಚಿ ಕೂಡ ಹದಗೆಡುತ್ತದೆ.

ಪರಿಹಾರ ಕ್ರಮಗಳು ಬಾಯಿಯ ರುಚಿಯನ್ನು ಸುಧಾರಿಸಲು ದ್ರವ ಪದಾರ್ಥಗಳಾದ ಜ್ಯೂಸ್, ತೆಂಗಿನ ನೀರು, ಮಜ್ಜಿಗೆ ಇತ್ಯಾದಿಗಳನ್ನು ಸೇವಿಸಿ. ಇದು ರುಚಿಯನ್ನು ಸುಧಾರಿಸುತ್ತದೆ ಮತ್ತು ದೇಹವು ಶಕ್ತಿಯನ್ನು ಪಡೆಯುತ್ತದೆ.

ಬಾಯಿ ಕಹಿ ಅನಿಸಿದರೆ ಮಾವು, ನಿಂಬೆ ರಸ, ಕಿತ್ತಳೆ, ಹುಳಿ ಪದಾರ್ಥಗಳನ್ನು ತೆಗೆದುಕೊಳ್ಳಬಹುದು. ನಿಂಬೆ ಉಪ್ಪಿನಕಾಯಿಯನ್ನು ಸಹ ಸ್ವಲ್ಪ ಸೇವಿಸಬಹುದು. ಇದು ಬಾಯಿಯ ರುಚಿಯನ್ನು ಸುಧಾರಿಸುತ್ತದೆ.

ಬಾಯಿಯನ್ನು ಆದಷ್ಟು ಸ್ವಚ್ಛವಾಗಿಟ್ಟುಕೊಳ್ಳಿ. ಆಹಾರವನ್ನು ತಿಂದ ಬಳಿಕವೇ ಬಾಯಿ ಮುಕ್ಕಳಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಏಲಕ್ಕಿ ಪುಡಿಯನ್ನು ಜೇನುತುಪ್ಪದಲ್ಲಿ ಬೆರೆಸಿ ಸೇವಿಸುವ ಮೂಲಕ ಬಾಯಿಯ ರುಚಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:

Women Health: ತುಂಬಾ ತೆಳ್ಳಗಿದ್ದೇನೆ ಎಂಬ ಚಿಂತೆಯೇ? ದಪ್ಪಗಾಗಲು ಯುವತಿಯರಿಗಾಗಿ ಒಂದಿಷ್ಟು ಟಿಪ್ಸ್​

Women Health: ಯಾವುದೇ ಡಯಟ್​ ಇಲ್ಲದೇ ತೂಕ ಇಳಿಸಿಕೊಳ್ಳುವುದು ಹೇಗೆ? ಮಹಿಳೆಯರಿಗಾಗಿ ಇಲ್ಲಿದೆ ಸಲಹೆಗಳು

(Women Health know about remedies for dysgeusia problem bitter taste in mouth)

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ