Women Health: ಹೊಟ್ಟೆಯ ಬೊಜ್ಜು ಕರಗಿಸಿಕೊಳ್ಳಲು ಮಹಿಳೆಯರಿಗೆ ಕೆಲವು ಸಲಹೆಗಳು

ಅತಿಯಾದ ಬೊಜ್ಜಿನಿಂದ ನಮ್ಮ ಸೌಂದರ್ಯ ಹಾಳಾಗಿದೆ ಎಂದು ಮಹಿಳೆಯರು ತಲೆಗೆಡಿಸಿಕೊಂಡಿರಬಹುದು. ಮುಖ್ಯವಾಗಿ ಸೊಂಟ ಮತ್ತು ಹೊಟ್ಟೆಯ ಬೊಜ್ಜು ಮಹಿಳೆಯರಿಗೆ ಹೆಚ್ಚು ಕಾಡುತ್ತಿರಬಹುದು.

Women Health: ಹೊಟ್ಟೆಯ ಬೊಜ್ಜು ಕರಗಿಸಿಕೊಳ್ಳಲು ಮಹಿಳೆಯರಿಗೆ ಕೆಲವು ಸಲಹೆಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 06, 2021 | 9:14 PM

ಇಂದಿನ ಜೀವನ ಶೈಲಿ ಅನಿಯಮಿತ ಆಹಾರ ಪದ್ಧತಿಯಿಂದ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರು ಹೆಚ್ಚಾಗಿ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೌಂದರ್ಯ, ಫಿಟ್ನೆಸ್​ಗಾಗಿ ಯೋಚಿಸತ್ತಿರುವ ಹೊತ್ತಲ್ಲೇ ಮಹಿಳೆಯರಿಗೆ ಬೊಜ್ಜಿನ ಸಮಸ್ಯೆ ದೊಡ್ಡ ತಲೆನೋವಾಗಿಬಿಟ್ಟಿದೆ. ಹೀಗಿರುವಾಗ ಬೊಜ್ಜನ್ನು ಕರಗಿಸುವುದು ಹೇಗೆ? ನಮ್ಮ ಆಹಾರ ಪದ್ಧತಿಯ ಮೂಲಕ ತೂಕವನ್ನು ಇಳಿಸಿಕೊಳ್ಳಬಹುದೇ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ.

ಅತಿಯಾದ ಬೊಜ್ಜಿನಿಂದ ನಮ್ಮ ಸೌಂದರ್ಯ ಹಾಳಾಗಿದೆ ಎಂದು ಮಹಿಳೆಯರು ತಲೆಗೆಡಿಸಿಕೊಂಡಿರಬಹುದು. ಮುಖ್ಯವಾಗಿ ಸೊಂಟ ಮತ್ತು ಹೊಟ್ಟೆಯ ಬೊಜ್ಜು ಮಹಿಳೆಯರಿಗೆ ಹೆಚ್ಚು ಕಾಡುತ್ತಿರಬಹುದು. ಅದರಲ್ಲಿಯೂ ಲಾಕ್​ಡೌನ್​ನಿಂದ ದೇಹದ ದೊಡ್ಡದಾಗಿ ಕಾಣಿಸಿಕೊಳ್ಳುತ್ತಿರುವುದು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳಿಂದ. ಹಾಗಾಗಿ ಈ ಕುರಿತಾಗಿ ಹೆಚ್ಚು ಲಕ್ಷ್ಯವಹಿಸಲೇಬೇಕಾಗಿದೆ.

ತೂಕ ಇಳಿಸಿಕೊಳ್ಳಲು ಈಗಾಗಲೇ ಅದೆಷ್ಟೋ ಔಷಧಿಗಳನ್ನು ಸೇವಿಸಿರಬಹುದು. ಆಹಾರ ಪದ್ಧತಿಯನ್ನೂ ಸಹ ಬದಲಾವಣೆ ಮಾಡಿಕೊಂಡಿರಬಹುದು. ಅದೆಷ್ಟೋ ದಿನಗಳ ಕಾಲ ಊಟ ಬಿಡುವವರೂ ಇದ್ದಾರೆ. ಆದರೆ ಊಟ ಬಿಡುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ದಾಲ್ಚಿನ್ನಿ ಮತ್ತು ಜೇನುತುಪ್ಪ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ನಿಮ್ಮ ಆಹಾರದಲ್ಲಿ ಜೇನುತುಪ್ಪ ಮತ್ತು ದಾಲ್ಚಿನ್ನಿ ಸೇವಿಸುವುದು ಒಳ್ಳೆಯದು. ಇದನ್ನು ಸೇವಿಸುವುದರಿಂದ ತೂಕವನ್ನು ತ್ವರಿತವಾಗಿ ಕಡಿಮೆ ಮಾಡಬಹುದಾಗಿದೆ. ಹಾಗಾಗಿ ಜೇನುತುಪ್ಪ ಮತ್ತು ದಾಲ್ಚಿನ್ನಿಯನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಓಂಕಾಳು ನೀರು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಓಂಕಾಳು ನೀರು ತುಂಬಾ ಸಹಕಾರಿ. ಮಳೆಗಾಲದ ಸಮಯದಲ್ಲಿ ಶೀತ, ಜ್ವರದಂತಹ ಸಣ್ಣ ಪುಟ್ಟ ಸಮಸ್ಯೆಗಳಿಗೂ ಸಹ ಓಂಕಾಳು ನೀರು ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಓಂಕಾಳನ್ನು ರಾತ್ರಿಯಲ್ಲಿ ನೆನೆಸಿಟ್ಟು, ಬೆಳಿಗ್ಗೆ ಎದ್ದ ತಕ್ಷಣ ಚೆನ್ನಾಗಿ ಕುದಿಸಿ ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಜತೆಗೆ ದೇಹದಲ್ಲಿನ ಹೆಚ್ಚುವರಿ ಕ್ಯಾಲೊರಿಗಳನ್ನು ಸುಡಲು ಇದು ಸಹಾಯಕವಾಗಿದೆ.

ಬೀನ್ಸ್ ಮತ್ತು ಕ್ಯಾರೆಟ್ ನೀವು ಬಹುಬೇಗ ತೂಕ ಇಳಿಸಿಕೊಳ್ಳಲು ಬಯಸಿದರೆ ಕ್ಯಾರೆಟ್ ಮತ್ತು ಬೀನ್ಸ್ಅನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಕ್ಯಾರೆಟ್​ನಲ್ಲಿ ವಿಟಮಿನ್ ಎ ಮತ್ತು ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಇದು ಬೊಜ್ಜನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ವ್ಯಾಯಾಮ ನಿಮ್ಮ ಹೊಟ್ಟೆಯ ಬೊಜ್ಜಿನ ಸಮಸ್ಯೆ ನಿವಾರಣೆಯಾಗಬೇಕೆಂದರೆ ನಿಯಮಿತವಾಗಿ ವ್ಯಾಯಾಮ ಮಾಡುವುದು ಅತ್ಯವಶ್ಯಕ. ಇದರಿಂದ ನೀವು ಆರೋಗ್ಯವಂತರಾಗಿರಬಹುದು. ಜತೆಗೆ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಿಕೊಂಡು ಹೋಗಬಹುದು. ನೀವು ಸೇವಿಸುವ ಆಹಾರದ ಮೂಲಕ ದೇಹದಲ್ಲಿ ಸೇರಿಕೊಳ್ಳುವ ಹೆಚ್ಚುವರಿ ಕ್ಯಾಲೊರಿಗಳನ್ನು ಕರಗಿಸಲು ಇದು ಸಹಾಯಕವಾಗಿದೆ. ಆದ್ದರಿಂದ ಪ್ರತಿನಿತ್ಯ ವ್ಯಾಯಾಮ ಮಾಡುವ ಅಭ್ಯಾಸ ಒಳ್ಳೆಯದು.

ಇದನ್ನೂ ಓದಿ:

Women Health: ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ಹೊಟ್ಟೆ ನೋವಿನ ಪರಿಹಾರಕ್ಕೆ ಹೀಗೆ ಮಾಡಿ

Women Health: ಒತ್ತಡ ಮತ್ತು ಆತಂಕದಿಂದ ದೂರವಾಗಲು ಮಹಿಳೆಯರಿಗೆ ಸಲಹೆಗಳು

(Women Health Simple tips and home remedies for get rid of obesity)

Published On - 9:13 pm, Mon, 6 September 21

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ