Women Health: ಗರ್ಭಾವಸ್ಥೆಯಲ್ಲಿ ವಾಕಿಂಗ್ ಮಾಡುವಾಗ ಈ ಕೆಲವು ವಿಷಯಗಳನ್ನು ಎಂದಿಗೂ ಮರೆಯದಿರಿ

ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಮಧುಮೇಹ ಸಮಸ್ಯೆ ಕಂಡುಬರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಪ್ರತಿನಿತ್ಯ ವಾಕಿಂಗ್ ಮಾಡುವ ಅಭ್ಯಾಸದಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

Women Health: ಗರ್ಭಾವಸ್ಥೆಯಲ್ಲಿ ವಾಕಿಂಗ್ ಮಾಡುವಾಗ ಈ ಕೆಲವು ವಿಷಯಗಳನ್ನು ಎಂದಿಗೂ ಮರೆಯದಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 31, 2021 | 8:57 AM

ಆರೋಗ್ಯಕರವಾದ ಗರ್ಭಧಾರಣೆಯಾಗುವ ಸಲುವಾಗಿ ಗರ್ಭಿಣಿಯರು ಸರಳ ವ್ಯಾಯಾಮ, ಉತ್ತಮ ಆಹಾರದ ಜತೆಗೆ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಅನಿವಾರ್ಯವಾಗುತ್ತದೆ. ಉತ್ತಮ ಆರೋಗ್ಯ(Health) ಅಂದರೆ ಆರೋಗ್ಯಕರ ಆಹಾರ ಪದ್ಧತಿ. ಗರ್ಭಿಣಿಯರು(pregnant) ಹೆಚ್ಚು ಚಟುವಟಿಕೆಗಳಿಂದ ಕೂಡಿರಲು ಸಾಧ್ಯವಾಗದ ಕಾರಣ ದೇಹ ತೂಕ ಹೆಚ್ಚಳವಾಗುತ್ತದೆ. ಹಾಗಿರುವಾಗ ತೂಕ ಇಳಿಸಿಕೊಳ್ಳುವುದರ ಜತೆಗೆ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ನಡಿಗೆ ಒಳ್ಳೆಯದು.

ಗರ್ಭಾವಸ್ಥೆಯಲ್ಲಿ ನಡಿಗೆ ಅಭ್ಯಾಸ ಹೃದಯ ಆರೋಗ್ಯಕ್ಕೆ ಒಳ್ಳೆಯದು. ಯಾವುದೇ ರೀತಿಯ ಅಡಚಣೆಗಳಿಲ್ಲದ ಜಾಗದಲ್ಲಿ ಗರ್ಭಿಣಿಯರು ನಿಧಾನವಾಗಿ ನಡೆಯುವ ಅಭ್ಯಾಸವನ್ನು ಮಾಡುವುದರಿಂದ ಆರೋಗ್ಯಕರ ಹೆರಿಗೆ ಹೊಂದಬಹುದು. ವಾಕಿಂಗ್ ಮಾಡುವ ಅಭ್ಯಾಸದಿಂದ ಸ್ನಾಯುಗಳು ಬಲಗೊಳ್ಳುತ್ತದೆ. ಗರ್ಭಾವಸ್ಥೆಯಲ್ಲಿ ಹೊಟ್ಟೆಯ ಭಾಗ ಬೆಳವಣಿಗೆ ಹೊಂದುವುದರಿಂದ ಕಾಲುಗಳಲ್ಲಿ ಅಸ್ವಸ್ಥತೆ ಮತ್ತು ಕೀಲು ನೋವು ಕಾಣಿಸಿಕೊಳ್ಳುವುದು ಹೆಚ್ಚು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಾಕಿಂಗ್ ಅವಶ್ಯಕ.

ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಮಧುಮೇಹ ಸಮಸ್ಯೆ ಕಂಡುಬರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಪ್ರತಿನಿತ್ಯ ವಾಕಿಂಗ್ ಮಾಡುವ ಅಭ್ಯಾಸದಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಗರ್ಭಿಣಿಯರಿಗೆ ವಾಯು, ಮಲಬದ್ಧತೆಯ ಸಮಸ್ಯೆಗಳು ಕಂಡು ಬರುತ್ತದೆ. ಹೀಗಿರುವಾಗ ವಾಕಿಂಗ್ ಮಾಡುವುದರಿಂದ ಈ ಎಲ್ಲಾ ಸಮಸ್ಯೆಗಳಿಂದ ದೂರವಿರಬಹುದು. ಜತೆಗೆ ಗರ್ಭಧಾರಣೆಯ ಸಂದರ್ಭದಲ್ಲಿ ಸುಲಲಿತವಾಗಿ ಹೆರೆಗೆಯಾಗಲು ಸಹಯವಾಗುತ್ತದೆ.

ಈ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ ಗರ್ಭಿಣಿಯಾಗಿದ್ದಾಗ ಧರಿಸುವ ಚಪ್ಪಲಿಯ ಕುರಿತಾಗಿ ಹೆಚ್ಚು ಗಮನವಿರಲಿ. ನೆಲದ ಮೇಲೆ ಉತ್ತಮ ಹಿಡಿತವನ್ನು ಹೊಂದಿರುವ ಚಪ್ಪಲಿ ಅಥವಾ ಶೂಗಳನ್ನು ಧರಿಸುವುದು ಉತ್ತಮ. ಸೂರ್ಯನ ಶಾಖದಿಂದ ಚರ್ಮವನ್ನು ರಕ್ಷಿಸಿಕೊಳ್ಳಿ. ಹೆಚ್ಚು ಬಿಸಿನಲ್ಲಿ ಅಥವಾ ಮಳೆಯಾಗುವ ಸಮಯದಲ್ಲಿ ವಾಕಿಂಗ್ ಹೋಗುವುದನ್ನು ತಪ್ಪಿಸಿ.

ಎಂದಿಗೂ ಒಬ್ಬಂಟಿಯಾಗಿ ವಾಕಿಂಗ್ ಹೋಗಬೇಡಿ. ಯಾರಾದರೂ ಒಬ್ಬರು ಜೊತೆಗಿರಲಿ. ನಿಮಗೆ ಏನಾದರೂ ತೊಂದರೆಗಳಾದರೆ ರಕ್ಷಿಸಲು ಯಾರಾದರೂ ಒಬ್ಬರು ಜೊತೆಗಿರಲಿ. ಗರ್ಭಾವಸ್ಥೆಯ ಸಮಯ ಹೆಚ್ಚು ಸೂಕ್ಷ್ಮವಾಗಿರುವುದರಿಂದ ನಿಮ್ಮ ಸುರಕ್ಷತೆಯ ಬಗ್ಗೆ ಕಾಳಜಿವಹಿಸುವುದು ತುಂಬಾ ಮುಖ್ಯ.

ವಾಕಿಂಗ್ ಸಮಯದಲ್ಲಿ ಬಾಯಾರಿಕೆಯಾದರೆ ನೀರಿನ ಬಾಟಲಿ ಜತೆಗಿರಲಿ. ಎಂದಿಗೂ ಬಾಯಾರಿಕೆಯಲ್ಲಿ ಹೆಚ್ಚು ಸಮಯ ಕಳೆಯಬೇಡಿ. ವಾಕಿಂಗ್ ಮಾಡುವ ಮೊದಲು ಪೌಷ್ಟಿಕ ಆಹಾರವನ್ನು ಸೇವಿಸಿ. ಯಾವುದೇ ಕಾರಣಕ್ಕೂ ಬಲವಂತದ ನಡಿಗೆ ಬೇಡ. ಅರ್ಧ ದಾರಿಯಲ್ಲಿ ಸುಸ್ತಾದರೆ ಕೆಲ ಹೊತ್ತು ವಿಶ್ರಾಂತಿ ಪಡೆಯಿರಿ.

ಇದನ್ನೂ ಓದಿ:

Women Health: ಗರ್ಭಿಣಿಯರಿಗೆ ತಲೆತಿರುಗುವ ಸಮಸ್ಯೆ ಕಾಡುವುದೇಕೆ? ಪರಿಹಾರ ಕ್ರಮಗಳೇನು?

Women Health: ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವಕ್ಕೆ ಕಾರಣವೇನು ಗೊತ್ತಾ? ಪರಿಹಾರವೂ ಇಲ್ಲಿದೆ

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್