AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Benefits: ಮಹಿಳೆಯರು ಬಾಳೆಹಣ್ಣು ತಿನ್ನುವುದರಿಂದ ಈ 5 ಸಮಸ್ಯೆಗಳನ್ನು ದೂರ ಮಾಡಬಹುದು

Women Health: ಮಹಿಳೆಯರು ವಿಶೇಷವಾಗಿ ಬಾಳೆಹಣ್ಣನ್ನು ಪ್ರತಿದಿನ ತಿನ್ನಬೇಕು. ಆಗ ಮಾತ್ರ ಅವರು ದೇಹದಲ್ಲಿರುವ ಕಬ್ಬಿಣ ಮತ್ತು ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಬಹುದು.

Banana Benefits: ಮಹಿಳೆಯರು ಬಾಳೆಹಣ್ಣು ತಿನ್ನುವುದರಿಂದ ಈ 5 ಸಮಸ್ಯೆಗಳನ್ನು ದೂರ ಮಾಡಬಹುದು
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Sep 16, 2021 | 8:01 AM

Share

ಬಾಳೆಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದರಲ್ಲಿ ವಿಟಮಿನ್ ಎ, ಬಿ, ಬಿ 6, ಸಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಿಬೋಫ್ಲಾವಿನ್, ನಿಯಾಸಿನ್, ಫೋಲಿಕ್ ಆಸಿಡ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಮಹಿಳೆಯರು ವಿಶೇಷವಾಗಿ ಬಾಳೆಹಣ್ಣನ್ನು (Banana) ಪ್ರತಿದಿನ ತಿನ್ನಬೇಕು. ಆಗ ಮಾತ್ರ ಅವರು ದೇಹದಲ್ಲಿರುವ ಕಬ್ಬಿಣ ಮತ್ತು ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಬಹುದು. ಬಾಳೆಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯುವುದು ಸೂಕ್ತ.

1. ರಕ್ತಹೀನತೆಯನ್ನು ತಡೆಯುತ್ತದೆ ಭಾರತದಲ್ಲಿ ಅನೇಕ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಸುಮಾರು 80 ಪ್ರತಿಶತ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ. ರಕ್ತಹೀನತೆಯು ದೇಹದಲ್ಲಿ ಕಬ್ಬಿಣದ ಕೊರತೆಯಿಂದ ಉಂಟಾಗುತ್ತದೆ. ಬಾಳೆಹಣ್ಣಿನಲ್ಲಿ ಕಬ್ಬಿಣಾಂಶ ಅಧಿಕವಾಗಿದೆ.  ಪ್ರತಿದಿನ ಬಾಳೆಹಣ್ಣನ್ನು ತಿನ್ನುವುದರಿಂದ ದೇಹದಲ್ಲಿ ರಕ್ತದ ಕೊರತೆ ಕಡಿಮೆಯಾಗುತ್ತದೆ. ಇದು ರಕ್ತಹೀನತೆಗೆ ಕಾರಣವಾಗಬಹುದಾದ ಅಂಶಗಳನ್ನು ದೂರ ಮಾಡುತ್ತದೆ.

2. ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಸೂಕ್ತ ಬಾಳೆಹಣ್ಣನ್ನು ಪ್ರತಿನಿತ್ಯ ತಿನ್ನುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಹಾಗೆಯೇ ಬಿಪಿ ನಿಯಂತ್ರಣದಲ್ಲಿರುತ್ತದೆ. ಈ ಎರಡನ್ನೂ ನಿಯಂತ್ರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯಾಘಾತ, ಪಾರ್ಶ್ವವಾಯು, ಹೃದ್ರೋಗದಿಂದ ಬಾಳೆಹಣ್ಣು ಮುಕ್ತಿ ನೀಡುತ್ತದೆ. ಆದ್ದರಿಂದ ಮಹಿಳೆಯರು ಪ್ರತಿದಿನ ಬಾಳೆಹಣ್ಣನ್ನು ತಿನ್ನಬೇಕು.

3. ಮೂಳೆಗಳನ್ನು ಬಲಪಡಿಸುತ್ತದೆ ಮಹಿಳೆಯರು ಹೆಚ್ಚಾಗಿ ಕ್ಯಾಲ್ಸಿಯಂ ಕೊರತೆಯನ್ನು ಹೊಂದಿರುತ್ತಾರೆ. ಇದು ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್​ಗೆ ಕಾರಣವಾಗಬಹುದು. ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ತಡೆಯಬಹುದು. ಮೂಳೆಗಳ ರೋಗಗಳು ಇದರಿಂದ ದೂರವಾಗುತ್ತವೆ.

4. ಖಿನ್ನತೆಯನ್ನು ತಡೆಯುತ್ತದೆ ಇಂದು ಅನೇಕ ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು ಕುಟುಂಬ ಮತ್ತು ಆಫೀಸ್​ ನಿರ್ವಹಣೆಯಿಂದಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಾರೆ. ಬಾಳೆಹಣ್ಣಿನಲ್ಲಿ ವಿಟಮಿನ್-ಬಿ 6 ಸಮೃದ್ಧವಾಗಿದೆ. ಇದು ಮೆದುಳಿನ ಕಾರ್ಯವನ್ನು ಸುಧಾರಿಸಲು ಕೆಲಸ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಪ್ರೋಟೀನ್ ಮೆದುಳನ್ನು ಸಡಿಲಗೊಳಿಸುತ್ತದೆ. ಬಾಳೆಹಣ್ಣಿನಲ್ಲಿರುವ ಮೆಗ್ನೀಸಿಯಮ್ ನರಮಂಡಲದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

5. ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು ಬಾಳೆಹಣ್ಣಿನಲ್ಲಿರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಬಾಳೆಹಣ್ಣಿನ ನಿಯಮಿತ ಸೇವನೆಯಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಮಲಬದ್ಧತೆ, ಗ್ಯಾಸ್, ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ. ಅದಕ್ಕಾಗಿಯೇ ನೀವು ಪ್ರತಿದಿನ ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ: Power Nap: ಹಗಲಲ್ಲಿ ಮಲಗುವ ಅಭ್ಯಾಸ ಇದೆಯೇ? ಈ 5 ಆರೋಗ್ಯಯುತ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ