AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World AIDS Vaccine Day 2023: ವಿಶ್ವವನ್ನೇ ನಡುಗಿಸಿದ್ದ ಏಡ್ಸ್ ಲಸಿಕೆ ದಿನ ಇಂದು, ಇಲ್ಲಿದೆ ಇತಿಹಾಸ, ಮಹತ್ವ

ಪ್ರತಿವರ್ಷ ವಿಶ್ವದಾದ್ಯಂತ ಮೇ 18ರಂದು ವಿಶ್ವ ಏಡ್ಸ್‌ ಲಸಿಕಾ ದಿನವನ್ನು ಆಚರಿಸಲಾಗುತ್ತಿದೆ. ಈ ದಿನವು ಎಚ್‌ಐವಿ/ಏಡ್ಸ್(HIV/AIDS) ಲಸಿಕೆಯ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

World AIDS Vaccine Day 2023: ವಿಶ್ವವನ್ನೇ ನಡುಗಿಸಿದ್ದ ಏಡ್ಸ್ ಲಸಿಕೆ ದಿನ ಇಂದು, ಇಲ್ಲಿದೆ ಇತಿಹಾಸ, ಮಹತ್ವ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 18, 2023 | 11:09 AM

Share

ಇಡೀ ವಿಶ್ವವನ್ನೇ ನಡುಗಿಸಿದ್ದ ಏಡ್ಸ್‌ ಎಂಬ ಮಹಾಮಾರಿ ಕಾಯಿಲೆಗೆ 1988ರಲ್ಲಿ ಮೊದಲ ಬಾರಿಗೆ ಲಸಿಕೆಯನ್ನು ಕಂಡುಹಿಡಿಯಲಾಗಿತ್ತು(World AIDS Vaccine Day 2023). ಅಲ್ಲಿಂದ ಪ್ರತಿವರ್ಷ ವಿಶ್ವದಾದ್ಯಂತ ಮೇ 18ರಂದು ವಿಶ್ವ ಏಡ್ಸ್‌ ಲಸಿಕಾ ದಿನವನ್ನು ಆಚರಿಸಲಾಗುತ್ತಿದೆ. ಈ ದಿನವು ಎಚ್‌ಐವಿ/ಏಡ್ಸ್(HIV/AIDS) ಲಸಿಕೆಯ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಏಡ್ಸ್‌ ಲಸಿಕೆಯ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶ.

ರಕ್ತ ಹಾಗೂ ದೈಹಿಕ ಸಂಪರ್ಕದಿಂದ ಏಡ್ಸ್ ಹರಡುತ್ತದೆ. ಎರಡು ದಶಕಗಳ ಹಿಂದೆ ಏಡ್ಸ್‌ ಇಡೀ ವಿಶ್ವವನ್ನೇ ನಡುಗಿಸಿತ್ತು. WHO ಪ್ರಕಾರ, HIV ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಉಳಿದಿದೆ, ಇದುವರೆಗೆ 40.1 ಮಿಲಿಯನ್ ಜೀವಗಳನ್ನು ಬಲಿ ತೆಗೆದುಕೊಂಡಿದೆ. 2021 ರ ಅಂತ್ಯದ ವೇಳೆಗೆ ಅಂದಾಜು 38.4 ಮಿಲಿಯನ್ ಜನರು HIV ಯಿಂದ ಬಳಲುತ್ತಿದ್ದರು. ಅವರಲ್ಲಿ ಮೂರನೇ ಎರಡರಷ್ಟು ಅಂದರೆ 25.6 ಮಿಲಿಯನ್ ಜನರು WHO ಆಫ್ರಿಕನ್ ಪ್ರದೇಶದಲ್ಲಿದ್ದಾರೆ.

ಏಡ್ಸ್‌ ಲಸಿಕೆಯು ಎಚ್‌ಐವಿ ಸೋಂಕು ಇತರರಿಗೆ ಹರಡದಂತೆ ತಡೆಯುತ್ತದೆ. ಈ ದಿನದಂದು ಏಡ್ಸ್‌ ರೋಗದ ವಿರುದ್ಧ ಹೋರಾಡುವ ಸಂಘ ಸಂಸ್ಥೆಗಳು, ವೈದ್ಯರು, ಆರೋಗ್ಯ ಕಾರ್ಯಕರ್ತರು, ಸ್ವಯಂ ಸೇವಕರಿಗೆ ಧನ್ಯವಾದ ಅರ್ಪಿಸುವ ದಿನ. ಹಾಗೂ ಏಡ್ಸ್‌ ಲಸಿಕೆಯನ್ನು ಅಭಿವೃದ್ಧಿ ಪಡಿಸಲು ಜೀವನವನ್ನು ಮೀಸಲಿಟ್ಟ ವೈದ್ಯಕೀಯ ತಜ್ಞರು, ವಿಜ್ಞಾನಿಗಳು, ಸ್ವಯಂ ಸೇವಕರು ಹಾಗೂ ಬೆಂಬಲಿಗರಿಗೆ ಈ ದಿನದ ಆಚರಣೆಯ ಮೂಲಕ ಧನ್ಯವಾದ ಹೇಳಲಾಗುತ್ತದೆ.

ಇದನ್ನೂ ಓದಿ:World Aids Day 2022: ವಿಶ್ವ ಏಡ್ಸ್​ ದಿನ: ಇತಿಹಾಸ, ಮಹತ್ವ ಮತ್ತು ಥೀಮ್ ಇಲ್ಲಿದೆ

ಇತಿಹಾಸ

ಮೇ 18, 1988 ರಂದು, ಪ್ರಪಂಚದಾದ್ಯಂತ ಜನರು ಮೊದಲ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಿಸಿದರು. 1987ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಏಡ್ಸ್ ಲಸಿಕೆ ಬಗ್ಗೆ ಭಾಷಣ ಮಾಡಿದ್ದರು. ಭಾಷಣದಿಂದ ಸ್ಫೂರ್ತಿಗೊಂಡು ಲಸಿಕೆ ಕಂಡು ಹಿಡಿಯುವ ಕೆಲಸ ಆರಂಭವಾಗಿತ್ತು. ಈ ಭಾಷಣದಲ್ಲಿ ಕ್ಲಿಂಟನ್‌ ಈ ಭಯಾನಕ ರೋಗ ನಿರ್ಮೂಲನೆಗೆ ವ್ಯಾಕ್ಸಿನೇಷನ್‌ ಅಗತ್ಯವನ್ನು ಒತ್ತಿ ಹೇಳಿದ್ದರು. ಅಲ್ಲದೆ, ಅವರು ಲಸಿಕೆಯನ್ನು ತಯಾರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸುವುದರ ಪ್ರಾಮುಖ್ಯತೆಯ ಕುರಿತು ವಿವರಿಸಿದ್ದರು.

ಏಡ್ಸ್ ಲಸಿಕೆ ಮಹತ್ವ

ಈ ದಿನದ ಮಹತ್ವವೆಂದರೆ ಎಚ್‌ಐವಿ ಸೋಂಕು ತಡೆಗಟ್ಟುವ ಕ್ರಮಗಳ ಬಗ್ಗೆ ಎಲ್ಲ ಜನರಲ್ಲಿ ಅರಿವು ಮೂಡಿಸುವುದು, ಏಡ್ಸ್ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸುವುದು, ಸಂದೇಶಗಳನ್ನು ಪ್ರಸಾರ ಮಾಡುವುದು, ಶಿಕ್ಷಣವನ್ನು ಸಾರುವುದು, ಸಂಶೋಧಕರನ್ನು ಪ್ರೋತ್ಸಾಹಿಸುವುದು ಮತ್ತು ಜನರು ಈ ಉದಾತ್ತ ಉದ್ದೇಶದಲ್ಲಿ ತೊಡಗಿಸಿಕೊಳ್ಳುವುದನ್ನು ಖಾತ್ರಿಪಡಿಸುವ ಪ್ರಾಥಮಿಕ ಗುರಿಯೊಂದಿಗೆ ವಿಶ್ವ ಏಡ್ಸ್ ಲಸಿಕೆ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!