AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World AIDS Vaccine Day 2025: ಏಡ್ಸ್ ಬಗ್ಗೆ ಭಯ ಬೇಡ; ಬರದಂತೆ ಮುನ್ನೆಚ್ಚರಿಕೆ ವಹಿಸಿ

ವಿಶ್ವ ಏಡ್ಸ್ ಲಸಿಕೆ ದಿನ: ಏಡ್ಸ್ ರೋಗಕ್ಕೆ 1988ರಲ್ಲಿ ಮೊದಲ ಬಾರಿ ಲಸಿಕೆಯನ್ನು ಕಂಡುಹಿಡಿಯಲಾಗಿತ್ತು. ಅಂದಿನಿಂದ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಡ್ಸ್ ಲಸಿಕೆ ದಿನ ಅಥವಾ ಹೆಚ್​ಐವಿ ಲಸಿಕೆ ಜಾಗೃತಿ ದಿನವನ್ನು ಮೇ 18 ರಂದು ಆಚರಿಸಲಾಗುತ್ತದೆ. ಹಾಗಾದರೆ ಏಡ್ಸ್ ಲಸಿಕೆ ದಿನದ ಇತಿಹಾಸವೇನು? ಜೊತೆಗೆ ಇದೇ ದಿನ ಆಚರಣೆ ಮಾಡಲು ಕಾರಣವೇನು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ.

World AIDS Vaccine Day 2025: ಏಡ್ಸ್ ಬಗ್ಗೆ ಭಯ ಬೇಡ; ಬರದಂತೆ ಮುನ್ನೆಚ್ಚರಿಕೆ ವಹಿಸಿ
ವಿಶ್ವ ಏಡ್ಸ್ ಲಸಿಕೆ ದಿನImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 17, 2025 | 10:39 PM

Share

ಏಡ್ಸ್ (AIDS) ಎನ್ನುವ ಮಹಾಮಾರಿಯ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಒಂದು ಸಮಯದಲ್ಲಿ ಇದು ಇಡೀ ವಿಶ್ವವನ್ನೇ ನಲುಗಿಸಿತ್ತು ಎಂಬುದನ್ನು ಮರೆಯಬಾರದು. ನೂರಾರು ರೀತಿಯ ತಪ್ಪು ಕಲ್ಪನೆಗಳ ನಡುವೆ ಈ ಕಾಯಿಲೆಯ ಬಗ್ಗೆ ಸರಿಯಾದ ಮಾಹಿತಿ ನೀಡುವುದು ದೊಡ್ಡ ಸವಾಲಾಗಿತ್ತು. ಅದಕ್ಕಾಗಿಯೇ ರಕ್ತ ಹಾಗೂ ದೈಹಿಕ ಸಂಪರ್ಕದಿಂದ ಏಡ್ಸ್ ಹರಡುತ್ತದೆ ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಏಡ್ಸ್ ಲಸಿಕೆ ದಿನ (World AIDS Vaccine Day) ಅಥವಾ ಹೆಚ್​ಐವಿ ಲಸಿಕೆ ಜಾಗೃತಿ ದಿನವನ್ನು ಪ್ರತಿ ವರ್ಷ ಮೇ 18 ರಂದು ಆಚರಿಸಲಾಗುತ್ತದೆ.

ಈ ದಿನದ ಇತಿಹಾಸ

ವಿಶ್ವ ಏಡ್ಸ್ ಲಸಿಕೆ ದಿನ ಎಂಬ ಪರಿಕಲ್ಪನೆಯನ್ನು 1997 ರ ಮೇ 18 ರಂದು ಮೋರ್ಗನ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿನ ಆಗಿನ ಅಧ್ಯಕ್ಷ ಕ್ಲಿಂಟನ್ ಮಾಡಿದ ಭಾಷಣದಲ್ಲಿ ಮೊದಲ ಬಾರಿಗೆ ಪ್ರಸ್ತಾಪಿಸಿದರು. ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಇವರ ಭಾಷಣದಿಂದ ಸ್ಫೂರ್ತಿಗೊಂಡು ಲಸಿಕೆ ಕಂಡು ಹಿಡಿಯುವ ಕೆಲಸಕ್ಕೆ ಕೈ ಹಾಕಿದರು. ಹೆಚ್​ಐವಿ ಲಸಿಕೆ ಮಾತ್ರ ಏಡ್ಸ್​ನ ಭಯವನ್ನು ಜಗತ್ತಿನಿಂದ ದೂರ ಮಾಡಲು ಸಾಧ್ಯ ಎಂದು ಕ್ಲಿಂಟನ್ ತನ್ನ ಭಾಷಣದ ಮೂಲಕ ಜಗತ್ತಿಗೆ ಹೇಳಿದರು. ಹೀಗಾಗಿ ಕ್ಲಿಂಟನ್ ಅವರ ಈ ಭಾಷಣದ ನೆನಪಿಗಾಗಿ ಮೇ 18, 1998 ರಂದು ಮೊದಲ ಬಾರಿಗೆ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಿಸಲಾಯಿತು. ಅಂದಿನಿಂದ ಈ ಆಚರಣೆ ಮುಂದುವರೆದುಕೊಂಡು ಬಂದಿದೆ.

ವಿಶ್ವ ಏಡ್ಸ್ ಲಸಿಕೆ ದಿನದ ಮಹತ್ವ

ಎಚ್‌ಐವಿ ಸೋಂಕನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಏಡ್ಸ್ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಹೆಚ್ ಐವಿ / ಏಡ್ಸ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಪ್ರಪಂಚದಾದ್ಯಂತದ ಹಲವಾರು ಎನ್ ಜಿ ಒಗಳು ಹಾಗೂ ಸರ್ಕಾರಗಳು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಇದನ್ನೂ ಓದಿ
Image
ಕಣ್ಣಿಗೂ ಕ್ಯಾನ್ಸರ್ ಬರುತ್ತಾ? ಹೇಗಿರುತ್ತೆ ಇದರ ಲಕ್ಷಣ
Image
ರಾತ್ರಿ ನೆನಸಿಟ್ಟ ಚಿಯಾ ಬೀಜಗಳ ನೀರು ಕುಡಿದರೆ ಏನಾಗುತ್ತೆ ನೋಡಿ
Image
ಬೋಳುತಲೆ ಪುರುಷರಲ್ಲಿಯೇ ಹೆಚ್ಚಾಗಿ ಕಂಡುಬರುವುದು ಇದೆ ಕಾರಣಕ್ಕೆ
Image
ಇದ್ದಕ್ಕಿದ್ದಂತೆ ಬಿಪಿ ಹೆಚ್ಚಾಗಲು ಈ ತಪ್ಪುಗಳೇ ಕಾರಣ

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚುತ್ತಿದೆ ಅಧಿಕ ರಕ್ತದೊತ್ತಡ ಪ್ರಕರಣ: ಜೀವನಶೈಲಿಯ ಬದಲಾವಣೆ ಮಾಡಿಕೊಳ್ಳಲು ತಜ್ಞರ ಕರೆ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ