AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Asthma Day 2025: ಅಸ್ತಮಾ ಕಾಯಿಲೆ ಬಗ್ಗೆ ಭಯ ಬೇಡ, ಕಾಳಜಿ ಇರಲಿ; ವಿಶ್ವ ಅಸ್ತಮಾ ದಿನದ ಇತಿಹಾಸ ತಿಳಿಯಿರಿ

ಅಸ್ತಮಾ ಒಂದು ಉಸಿರಾಟ ಸಂಬಂಧಿತ ಕಾಯಿಲೆಯಾಗಿದ್ದು, ಈ ಕಾಯಿಲೆಗೆ ಸರಿಯಾದ ಚಿಕಿತ್ಸೆ ಇಲ್ಲ ಅಂತ ಹೇಳ್ತಾರೆ. ಏನೇ ಮದ್ದು ಮಾಡಿದರೂ ಕೆಲವರಿಗೆ ಈ ಕಾಯಿಲೆ ಗುಣವೇ ಆಗೋದಿಲ್ಲ. ಇದೇ ಕಾರಣಕ್ಕೆ ಈ ರೋಗದ ಹೆಸರು ಕೇಳಿದರೆ ಹಲವರು ಭಯಪಟ್ಟುಕೊಳ್ಳುತ್ತಾರೆ. ಆದರೆ ಸರಿಯಾದ ಚಿಕಿತ್ಸೆ ತೆಗೆದುಕೊಳ್ಳುವ ಮೂಲಕ, ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ನಿಜಕ್ಕೂ ಅಸ್ತಮಾ ಕಾಯಿಲೆ ವಿರುದ್ಧ ಗೆಲ್ಲಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ ತಿಂಗಳ ಮೊದಲ ಮಂಗಳವಾರ ವಿಶ್ವ ಅಸ್ತಮಾ ದಿನವನ್ನು ಆಚರಿಸಲಾಗುತ್ತದೆ.

World Asthma Day 2025: ಅಸ್ತಮಾ ಕಾಯಿಲೆ ಬಗ್ಗೆ ಭಯ ಬೇಡ, ಕಾಳಜಿ ಇರಲಿ; ವಿಶ್ವ ಅಸ್ತಮಾ ದಿನದ ಇತಿಹಾಸ ತಿಳಿಯಿರಿ
ವಿಶ್ವ ಅಸ್ತಮಾ ದಿನ 2025Image Credit source: Getty Images
ಮಾಲಾಶ್ರೀ ಅಂಚನ್​
|

Updated on: May 05, 2025 | 6:28 PM

Share

ಅಸ್ತಮಾ (Asthma) ಶ್ವಾಸಕೋಶವನ್ನು ಬಾಧಿಸುವ ಉಸಿರಾಟ (breathing) ಸಂಬಂಧಿತ ಕಾಯಿಲೆಯಾಗಿದ್ದು, ಧೂಳು, ಹೊಗೆ, ಮಾಲಿನ್ಯ ಇತ್ಯಾದಿ ಕಾರಣಗಳಿಂದ ಇಂದು ಅನೇಕ ಜನರು ಈ ಕಾಯಿಲೆಗೆ ತುತ್ತಾಗಿದ್ದಾರೆ. ಈ ಕಾಯಿಲೆ ಉಲ್ಭಣಗೊಂಡರೆ ಜೀವಕ್ಕೆ ಅಪಾಯಕಾರಿ. ಆದ್ದರಿಂದ ಸೂಕ್ತ ಚಿಕಿತ್ಸೆಯ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ಅಸ್ತಮಾ ಕಾಯಿಲೆಯ ವಿರುದ್ಧ ಗೆಲ್ಲಬಹುದು. ಮತ್ತು ಸರಿಯಾದ ಸಮಯಕ್ಕೆ ಅಸ್ತಮಾ ಇರುವುದನ್ನು ಗುರುತಿಸುವ ಮೂಲಕ ಈ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.  ಆದರೆ ಹೆಚ್ಚಿನವರು ಈ ಕಾಯಿಲೆಗೆ ಸರಿಯಾದ ಪರಿಹಾರವಿಲ್ಲ, ಏನೇ ಮಾಡಿದರೂ ಈ ಕಾಯಿಲೆ ಗುಣಮುಖವಾಗುವುದಿಲ್ಲ ಎಂದು ಹೇಳುತ್ತಿರುತ್ತಾರೆ. ಈ ನಿಟ್ಟಿನಲ್ಲಿ ರೋಗದ ಪತ್ತೆಹಚ್ಚುವಿಕೆ ಹಾಗೂ ಅದಕ್ಕಿರುವ ಸಕಾಲಿಕ ಚಿಕಿತ್ಸೆಯ  ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ ತಿಂಗಳ ಮೊದಲ ಮಂಗಳವಾರ ವಿಶ್ವ ಅಸ್ತಮಾ (World Asthma Day)  ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಅಸ್ತಮಾ ದಿನದ ಇತಿಹಾಸ:

ಅಸ್ತಮಾದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ ತಿಂಗಳ ಮೊದಲ ಮಂಗಳವಾರ ವಿಶ್ವ ಅಸ್ತಮಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಮೇ 6 ರಂದು ಈ ದಿನವನ್ನು ಆಚರಿಸಲಾಗುತ್ತಿದೆ.  ವಿಶ್ವ ಅಸ್ತಮಾ ದಿನವನ್ನು 1998 ರಲ್ಲಿ ಗ್ಲೋಬಲ್ ಇನಿಶಿಯೇಟಿವ್ ಫಾರ್ ಅಸ್ತಮಾ (GINA) ಎಂಬ ಸಂಸ್ಥೆಯು ಪ್ರಾರಂಭಿಸಿತು. ಈ ದಿನವನ್ನು ಪ್ರಾರಂಭಿಸುವ ಉದ್ದೇಶವು ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಆಸ್ತಮಾದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ತೆಗೆದುಹಾಕುವುದಾಗಿತ್ತು. ಅಂದಿನಿಂದ ಈ ವಿಶೇಷ ದಿನವನ್ನು ಪ್ರತಿ ವರ್ಷ ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ.

ಅಸ್ತಮಾ ದಿನವನ್ನು ಆಚರಿಸುವ ಉದ್ದೇಶ:

ಹೆಚ್ಚುತ್ತಿರುವ ಮಾಲಿನ್ಯ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ, ಜನರು ಚಿಕ್ಕ ವಯಸ್ಸಿನಲ್ಲಿಯೇ ಅಸ್ತಮಾ ಕಾಯಿಲೆಗೆ ಬಲಿಯಾಗುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜನರು ಈ ಉಸಿರಾಟದ ಕಾಯಿಲೆಯನ್ನು ಹೆಚ್ಚಾಗಿ ನಿರ್ಲಕ್ಷಿಸುತ್ತಾರೆ ಮತ್ತು ಈ ರೋಗಕ್ಕೆ ಸಕಾಲಿಕ ಚಿಕಿತ್ಸೆಯನ್ನು ಕೂಡ  ಪಡೆಯುವುದಿಲ್ಲ. ಆದರೆ ಸೂಕ್ತ ಹಾಗೂ ಸಕಾಲಿಕ ಚಿಕಿತ್ಸೆಯ ಮೂಲಕ ಈ ರೋಗದಿಂದ ಮುಕ್ತಿಯನ್ನು ಪಡೆಯಬಹುದು. ಹೀಗೆ ಅಸ್ತಮಾ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.

ವಿಶ್ವ ಆಸ್ತಮಾ ದಿನದ ಆಚರಣೆ  ಏಕೆ ಮುಖ್ಯ?

ಈ ದಿನದಂದು ಜನರಲ್ಲಿ ಜಾಗೃತಿಯನ್ನು ಮೂಡಿಸುವ ಮೂಲಕ ಆಸ್ತಮಾಕ್ಕೆ ಸಂಬಂಧಿಸಿದ ತಪ್ಪು ಕಲ್ಪನೆಗಳನ್ನು ತೆಗೆದುಹಾಕಬಹುದು. ಅರಿವು ಹೆಚ್ಚಾದಂತೆ, ಜನರು ತಮ್ಮ ರೋಗಲಕ್ಷಣಗಳನ್ನು ಗುರುತಿಸಬಹುದು ಮತ್ತು ಸಕಾಲಿಕ ಚಿಕಿತ್ಸೆಯನ್ನು ಪಡೆಯಲು ಪ್ರಾರಂಭಿಸಬಹುದು. ಇದಲ್ಲದೆ ಜಾಗೃತಿ ಅಭಿಯಾನಗಳು ಅಸ್ತಮಾ ರೋಗಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಕಬ್ಬಿನ ಜ್ಯೂಸ್ vs ಎಳ ನೀರು : ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು?

ಅಸ್ತಮಾ ಗಂಭೀರ ಕಾಯಿಲೆಯೇ?

ಅಸ್ತಮಾ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಇದರಲ್ಲಿ ರೋಗಿಗೆ ಉಸಿರಾಟದ ತೊಂದರೆ ಉಂಟಾಗುತ್ತದೆ. ಕೆಲವೊಮ್ಮೆ ಈ ಸಮಸ್ಯೆ ಇದ್ದಕ್ಕಿದ್ದಂತೆ ತೀವ್ರಗೊಳ್ಳುತ್ತದೆ. ಧೂಳು, ಹೊಗೆ, ಮಾಲಿನ್ಯ ಇದರಿಂದ ಹೆಚ್ಚಾಗಿ ಅಸ್ತಮಾ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಸರಿಯಾದ ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಈ ಸಮಸ್ಯೆ ಹೆಚ್ಚಾಗಬಹುದು ಮತ್ತು ನಿಮ್ಮ ಜೀವಕ್ಕೆ ಅಪಾಯಕಾರಿ. ಆದ್ದರಿಂದ ಈ ಕಾಯಿಲೆ ಕಾಣಿಸಿಕೊಂಡಾಗ ಪ್ರಾರಂಭದಲ್ಲಿಯೇ ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಅಸ್ತಮಾ ರೋಗಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು:

  • ಉತ್ತಮ ಆರೋಗ್ಯಕ್ಕಾಗಿ ಅಸ್ತಮಾ ರೋಗಿಗಳು ತಮ್ಮ ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ಧೂಳು, ಕೊಳಕು, ಹೊಗೆಯಿರುವ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಬೇಕು.
  • ಶ್ವಾಸಕೋಶವನ್ನು ಆರೋಗ್ಯಕರವಾಗಿಡಲು ನಿಯಮಿತ ಯೋಗ, ಉಸಿರಾಟದ ವ್ಯಾಯಾಮ ಮಾಡುವುದರ ಜೊತೆಗೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು.
  • ಎಣ್ಣೆಯುಕ್ತ ಮತ್ತು ತಣ್ಣನೆಯ ಆಹಾರಗಳನ್ನು ಸೇವಿಸುವುದನ್ನು ತಪ್ಪಿಸಿ.
  • ಧೂಮಪಾನ ಮಾಡಬೇಡಿ, ಆರೋಗ್ಯಕರ ಜೀವನಶೈಲಿಯನ್ನು ಪಾಲಿಸಿ.
  • ಮನೆಯಿಂದ ಹೊರಗೆ ಹೋಗುವಾಗ ಮಾಸ್ಕ್‌ ಧರಿಸಿ ಮತ್ತು ಪ್ರಯಾಣಿಸುವಾಗ ಇನ್ಹೇಲರ್‌ ಕೊಂಡೊಯ್ಯಿರಿ.
  • ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ನಿಯಮಿತವಾಗಿ ವೈದ್ಯರನ್ನು ಭೇಟಿಯಾಗಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?