AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Autism Awareness Day 2024: ಸ್ವಲೀನತೆ ಹೊಂದಿದ ಮಕ್ಕಳಿಗೂ ಬೇಕು ಪೋಷಕರ ಕಾಳಜಿ

ಪ್ರತಿ ವರ್ಷ ಏಪ್ರಿಲ್ 2ರಂದು ವಿಶ್ವ ಆಟಿಸಂ ಜಾಗೃತಿ ದಿನ ಆಚರಿಸಲಾಗುತ್ತಿದೆ. ಬಾಲ್ಯದಲ್ಲಿಯೇ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ಆಟಿಸಂ ಸಮಸ್ಯೆಯನ್ನು ಸಂಪೂರ್ಣವಾಗಿ ಗುಣಪಡಿಸಲಾಗುವುದಿಲ್ಲ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಿ ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಬಹುದು. ಹಾಗಾದ್ರೆ ವಿಶ್ವ ಆಟಿಸಂ ದಿನದ ಇತಿಹಾಸದ ಬಗೆಗಿನ ಮಾಹಿತಿಯು ಇಲ್ಲಿದೆ.

World Autism Awareness Day 2024: ಸ್ವಲೀನತೆ ಹೊಂದಿದ ಮಕ್ಕಳಿಗೂ ಬೇಕು ಪೋಷಕರ ಕಾಳಜಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: Ganapathi Sharma|

Updated on: Apr 01, 2024 | 3:20 PM

Share

ಜಗತ್ತಿನಲ್ಲಿ ಆಟಿಸಂ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಕಾಯಿಲೆಯ ಬಗ್ಗೆ ಬಹುತೇಕರಿಗೆ ಜ್ಞಾನವಿಲ್ಲ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಎಲ್ಲರಂತೆ ಇರುವುದಿಲ್ಲ. ಒಂದು ವೇಳೆ ಮಗುವಿಗೆ ಆಟಿಸಂ ಕಾಯಿಲೆಯಿದ್ದರೆ ಮೊದಲ ಲಕ್ಷಣ ಮಗು ಆರು ತಿಂಗಳಿದ್ದಾಗಲೇ ತಿಳಿಯುತ್ತದೆ. ಆದಾದ ಬಳಿಕ ಮೂರು ಅಥವಾ ನಾಲ್ಕನೇ ವರ್ಷದಲ್ಲಿ ಕಾಯಿಲೆಯ ಸ್ಪಷ್ಟ ಲಕ್ಷಣಗಳು ಹೆತ್ತವರ ಗಮನಕ್ಕೆ ಬರುತ್ತದೆ.

ಚುರುಕುತನದಿಂದ ಕೂಡಿರದ ಈ ಮಕ್ಕಳನ್ನು ನೋಡಿಕೊಳ್ಳಲು ಒಬ್ಬರು ಜೊತೆಯಿರಲೇಬೇಕು. ವಿಚಿತ್ರವಾದ ಹಾವ ಭಾವಗಳನ್ನು ಹೊಂದಿದ್ದು, ಮಾಡಿದ ಕೆಲಸವನ್ನು ಮತ್ತೆ ಮತ್ತೆ ಮಾಡುತ್ತಿರುತ್ತಾರೆ. ತಮ್ಮಷ್ಟಕ್ಕೆ ತಾವು ಮಾತನಾಡುವುದು, ನಗುವುದು, ಅಳುವುದು ಹೀಗೆ ಹಲವಾರು ರೀತಿಯ ವರ್ತನೆಗಳು ಕಾಣಿಸುತ್ತದೆ. ಆದರೆ ಇಂತಹ ಮಕ್ಕಳನ್ನು ಪೂರ್ಣ ಪ್ರಮಾಣದಲ್ಲಿ ಗುಣಪಡಿಸಲು ಸಾಧ್ಯವಿಲ್ಲ, ಇಂತಹದ್ದೇ ಚಿಕಿತ್ಸೆಯೆನ್ನುವುದು ಇಲ್ಲ. ಪ್ರಾರಂಭದಲ್ಲೇ ಈ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತಂದು ಚಿಕಿತ್ಸೆ ನೀಡಿದರೆ ಸಮಾಜದಿಂದ ಇಂತಹ ಮಕ್ಕಳು ದೂರ ಉಳಿಯಲು ಸಾಧ್ಯವಿಲ್ಲ. ಈ ಆಟಿಸಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 2 ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆಟಿಸಂ ಜಾಗೃತಿ ದಿನದ ಇತಿಹಾಸ

ಆಟಿಸಂ ಸಮಸ್ಯೆ ಇರುವ ಮಕ್ಕಳನ್ನು ಎಲ್ಲರಂತೆ ನೋಡುವುದೇ ಕಡಿಮೆ. ಆಟಿಸಂ ಎಂದ ಕೂಡಲೇ ವಿಚಿತ್ರ ಎನ್ನುವಂತೆ ನೋಡುವವರೇ ಹೆಚ್ಚು. ಜನಸಾಮಾನ್ಯರಿಗೆ ಇರುವ ಈ ಕಾಯಿಲೆ ಕುರಿತಾಗಿನ ಪೂರ್ವಾಗ್ರಹಗಳು ನಿವಾರಣೆಯಾಗಬೇಕು ಎಂಬ ಉದ್ದೇಶದಿಂದ ವಿಶ್ವಸಂಸ್ಥೆಯು ಆಟಿಸಂ ಜಾಗೃತಿ ದಿನವನ್ನು ವಿಶ್ವಸಂಸ್ಥೆಯು ಡಿಸೆಂಬರ್ 18, 2007 ರಂದು ಘೋಷಣೆ ಮಾಡಿತು. ಅಂದಿನಿಂದ ಪ್ರತಿ ವರ್ಷ ವಿಶ್ವದಾದಂತ್ಯ ವಿಶ್ವ ಆಟಿಸಂಜಾಗೃತಿ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

Also Read: ಒಣ ಕೊಬ್ಬರಿ ತಿನ್ನುವುದರಿಂದ ಆಗುವ ಲಾಭಗಳೇನು? ಮಧುಮೇಹ ನಿಯಂತ್ರಣಕ್ಕೆ ಅದು ಒಳ್ಳೆಯದಾ?

ವಿಶ್ವ ಆಟಿಸಂ ಜಾಗೃತಿ ದಿನದ ಮಹತ್ವ

ಆಟಿಸಂ ಕಾಯಿಲೆಯ ಬಗೆಗಿರುವ ತಪ್ಪು ಕಲ್ಪನೆಯನ್ನು ದೂರ ಮಾಡಿ ಅರಿವು ಮೂಡಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಈ ದಿನದಂದು ಸಾಮಾಜಿಕ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಆಟಿಸಂ ಕಾಯಿಲೆಯನ್ನು ಹೊಂದಿರುವ ಮಕ್ಕಳ ಲಾಲನೆ ಪಾಲನೆ, ಅವರಿಗೆ ನೀಡಬೇಕಾದ ತರಬೇತಿಗಳು, ಥೆರಪಿಯ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತವೆ.

ಆರೋಗ್ಯ ಕುರಿತಾದ ಹೆಚ್ಚಿನ ಲೇಖನಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ