World Cancer Day 2023: ಕ್ಯಾನ್ಸರ್​​ ದಿನದ ಇತಿಹಾಸ, ಮಹತ್ವ ಹಾಗೂ ಈ ವರ್ಷದ ಧ್ಯೇಯದ ಕುರಿತು ಮಾಹಿತಿ ಇಲ್ಲಿದೆ

|

Updated on: Feb 03, 2023 | 11:54 AM

ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆಯನ್ನು ಉತ್ತೇಜಿಸಲು, ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್​​ನ ಪಾರಂಭಿಕ ಹಂತದ ಬಗ್ಗೆ ತಿಳಿದುಕೊಂಡು ಅದಕ್ಕೆ ಸರಿಯಾದ ಸೂಕ್ತ ಚಿಕಿತ್ಸೆಗಳನ್ನು ನೀಡುವ ಮೂಲಕ ವ್ಯಕ್ತಿಯನ್ನು ಕಾನ್ಸರ್​ ಮುಕ್ತರನ್ನಾಗಿಸಬಹುದು ಎಂಬುದರ ಕುರಿತು ಅರಿವು ಮೂಡಿಸಲಾಗುತ್ತದೆ.

World Cancer Day 2023: ಕ್ಯಾನ್ಸರ್​​ ದಿನದ ಇತಿಹಾಸ, ಮಹತ್ವ ಹಾಗೂ ಈ ವರ್ಷದ ಧ್ಯೇಯದ ಕುರಿತು ಮಾಹಿತಿ ಇಲ್ಲಿದೆ
ವಿಶ್ವ ಕ್ಯಾನ್ಸರ್ ದಿನ
Image Credit source: freepik
Follow us on

ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆಯನ್ನು ಉತ್ತೇಜಿಸಲು, ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನ (World Cancer Day) ವನ್ನು ಆಚರಿಸಲಾಗುತ್ತದೆ. ಈ ದಿನ ಸರ್ಕಾರಗಳು, ಆರೋಗ್ಯ ವೃತ್ತಿಪರರು ಮತ್ತು ಸಾರ್ವಜನಿಕರನ್ನು ಒಗ್ಗೂಡಿಸಿ ದಿನವನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್​​ನ ಪಾರಂಭಿಕ ಹಂತದ ಬಗ್ಗೆ ತಿಳಿದುಕೊಂಡು ಅದಕ್ಕೆ ಸರಿಯಾದ ಸೂಕ್ತ ಚಿಕಿತ್ಸೆಗಳನ್ನು ನೀಡುವ ಮೂಲಕ ವ್ಯಕ್ತಿಯನ್ನು ಕಾನ್ಸರ್​ ಮುಕ್ತರನ್ನಾಗಿಸಬಹುದು ಎಂಬುದರ ಕುರಿತು ಅರಿವು ಮೂಡಿಸಲಾಗುತ್ತದೆ. ಜಗತ್ತಿನಾದ್ಯಂತ ವರ್ಷದಲ್ಲಿ 10 ಮಿಲಿಯನ್​​​ ಜೀವಗಳು ಕಾನ್ಸರ್​​ನಿಂದ ಬಳಲಿ ಜೀವ ಕಳೆದುಕೊಳ್ಳುತ್ತವೆ ಎಂದು ತಿಳಿದುಬಂದಿದೆ. ಆದ್ದರಿಂದ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಚಿಕಿತ್ಸೆ ನೀಡುವ ಮೂಲಕ ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ.

2023ರ ವಿಶ್ವ ಕ್ಯಾನ್ಸರ್​​ ದಿನದ ಧ್ಯೇಯ:

ಈ ಬಾರಿ ವಿಶ್ವ ಕ್ಯಾನ್ಸರ್​ ದಿನದ ಅಂಗವಾಗಿ 2022-2024ರವರೆಗೆ ಕ್ಲೋಸ್​ ದಿ ಕೇರ್​ ಗ್ಯಾಪ್​ ಎನ್ನುವ ಥೀಮ್​ ಮೂಲಕ ಆಚರಿಸಲಾಗುತ್ತಿದೆ. ಮೂರು ವರ್ಷಗಳ ಈ ಅವಧಿಯಲ್ಲಿ ಕ್ಯಾನ್ಸರ್​ ಬಗ್ಗೆ ಅರಿವು ಮೂಡಿಸಿ, ಅದರ ಚಿಕಿತ್ಸೆಯ ಬಗ್ಗೆ ತಿಳಿಸುವ ಉದ್ದೇಶ ಹೊಂದಿದೆ. ಜೊತೆಗೆ ಜಾಗತಿಕವಾಗಿ ಇರುವ ಅಸಮಾನತೆಯನ್ನು ಹೋಗಲಾಡಿಸಿ ಕ್ಯಾನ್ಸರ್​ ರೋಗಿಗಳಲ್ಲಿ ಜೀವನೋತ್ಸಾಹ ತುಂಬುವ ಗುರಿಯನ್ನು ಈ ವರ್ಷ ಹೊಂದಿದೆ.

ವಿಶ್ವ ಕ್ಯಾನ್ಸರ್ ದಿನದ ಇತಿಹಾಸ:

ವಿಶ್ವ ಕ್ಯಾನ್ಸರ್ ದಿನವು ಫೆಬ್ರವರಿ 4, 2000 ವಿಶ್ವ ಶೃಂಗಸಭೆಯಲ್ಲಿ ಅಸ್ತಿತ್ವಕ್ಕೆ ಬಂದಿತು. ಈ ಶೃಂಗಸಭೆಯು ಪ್ಯಾರಿಸ್ ನಲ್ಲಿ ನಡೆಯಿತು ಮತ್ತು ಇದನ್ನು ಯುನಿಯನ್ ಫಾರ್ ಇಂಟರ್ ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (ಯುಐಸಿ) ಮೂಲಕ ಅಂತಾರಾಷ್ಟ್ರೀಯ ಕ್ಯಾನ್ಸರ್​ ದಿನ ಆಚರಣೆಯನ್ನು ಜಾರಿಗೆ ತರಲಾಯಿತು. ಇದರ ಪ್ರಮುಖ ಉದ್ದೇಶ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆ, ಪತ್ತೆ ಮತ್ತು ಚಿಕಿತ್ಸೆಯನ್ನು ಉತ್ತೇಜಿಸಲು ಸ್ಥಾಪಿಸಲಾಯಿತು.

ಇದನ್ನೂ ಓದಿ: ಕ್ಯಾನ್ಸರ್​​​ ಮೊದಲ ಹಂತದ ಲಕ್ಷಣ, ಬದುಕುಳಿಯುವ ಸಾಧ್ಯತೆ ಮತ್ತು ಚಿಕಿತ್ಸೆಯ ಕುರಿತು ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ವಿಶ್ವ ಕ್ಯಾನ್ಸರ್ ದಿನದ ಮಹತ್ವ:

ಕ್ಯಾನ್ಸರ್ ಜಾಗೃತಿಯನ್ನು ಉತ್ತೇಜಿಸಲು ಸಾರ್ವಜನಿಕ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಂತಹ ವಿವಿಧ ಚಟುವಟಿಕೆಗಳಿಂದ ವಿಶ್ವ ಕ್ಯಾನ್ಸರ್ ದಿನದ ಮಹತ್ವವನ್ನು ಹೊಂದಿದೆ. ಅಮೂಲ್ಯವಾದ ಜೀವಗಳನ್ನು ಉಳಿಸುವ ಉದ್ದೇಶದಿಂದ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 11:53 am, Fri, 3 February 23