AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cancer Day 2025: ವಿಶ್ವ ಕ್ಯಾನ್ಸರ್ ದಿನದ ಇತಿಹಾಸ, ಉದ್ದೇಶದ ಕುರಿತಾದ ಮಹತ್ವದ ಮಾಹಿತಿ ಇಲ್ಲಿದೆ

ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್‌ ದಿನ(February 4 World Cancer Day) ವನ್ನು ಆಚರಣೆ ಮಾಡಲಾಗುತ್ತದೆ. ಮನುಷ್ಯನಿಗೆ ಶತ್ರುವಿನ ರೀತಿ ಕಾಡುವ ಕ್ಯಾನ್ಸರ್‌ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಸರ್ಕಾರ ಮತ್ತು ಇತರೆ ಸಂಘ ಸಂಸ್ಥೆಗಳು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ಯಾನ್ಸರ್ ಬಗ್ಗೆ ಮುನ್ನೆಚ್ಚೆರಿಕೆ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಹಾಗಾದರೆ ಈ ದಿನದ ಇತಿಹಾಸ, ಮಹತ್ವದ ಬಗೆಗಿನ ಒಂದಿಷ್ಟು ಮಾಹಿತಿ ಇಲ್ಲಿದೆ.

World Cancer Day 2025: ವಿಶ್ವ ಕ್ಯಾನ್ಸರ್ ದಿನದ ಇತಿಹಾಸ, ಉದ್ದೇಶದ ಕುರಿತಾದ ಮಹತ್ವದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Feb 03, 2025 | 6:10 PM

Share

ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್‌ ದಿನ(February 4 World Cancer Day) ವನ್ನು ಆಚರಣೆ ಮಾಡಲಾಗುತ್ತದೆ. ಮನುಷ್ಯನಿಗೆ ಶತ್ರುವಿನ ರೀತಿ ಕಾಡುವ ಕ್ಯಾನ್ಸರ್‌ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಸರ್ಕಾರ ಮತ್ತು ಇತರೆ ಸಂಘ ಸಂಸ್ಥೆಗಳು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ಯಾನ್ಸರ್ ಬಗ್ಗೆ ಮುನ್ನೆಚ್ಚೆರಿಕೆ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಹಾಗಾದರೆ ಈ ದಿನದ ಇತಿಹಾಸ, ಮಹತ್ವದ ಬಗೆಗಿನ ಒಂದಿಷ್ಟು ಮಾಹಿತಿ ಇಲ್ಲಿದೆ.

ಈ ದಿನದ ಇತಿಹಾಸ

ಫೆಬ್ರವರಿ 4, 2000 ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ವಿಶ್ವ ಶೃಂಗಸಭೆಯಲ್ಲಿ ಈ ದಿನ ಅಸ್ತಿತ್ವಕ್ಕೆ ಬಂದಿತು. ಇದನ್ನು ಯೂನಿಯನ್ ಫಾರ್ ಇಂಟರ್‌ ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (ಯುಐಸಿಸಿ) ಸ್ಥಾಪಿಸಿತ್ತು. ಅಂದಿನಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಜನರು ಕ್ಯಾನ್ಸರ್ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವುದರ ಜೊತೆಗೆ ಇದರ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಈ ವಿಶ್ವ ಕ್ಯಾನ್ಸರ್ ದಿನವನ್ನು ಆಚರಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಪುರುಷರಲ್ಲಿ ಅಧಿಕ ಕೊಲೆಸ್ಟ್ರಾಲ್​​ ಗುಟ್ಟನ್ನು ಉಗುರು ರಟ್ಟು ಮಾಡುತ್ತದೆ, ಅದು ಹೇಗೆ? ಇಲ್ಲಿದೆ ನೋಡಿ

ಈ ದಿನದ ಉದ್ದೇಶ ಮತ್ತು ಮಹತ್ವವೇನು?

ಪ್ರಾರಂಭಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚುವುದರ ಜೊತೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವುದು ಈ ಆಚರಣೆಯ ಮೂಲ ಉದ್ದೇಶವಾಗಿದೆ. ಜೊತೆಗೆ ವಿಶ್ವ ಕ್ಯಾನ್ಸರ್ ದಿನದಂದು, ಪ್ರತಿಯೊಬ್ಬರೂ ಕ್ಯಾನ್ಸರ್ ಮುಕ್ತ ಆರೋಗ್ಯಕರ ಜೀವನ ನಡೆಸುವುದರ ಜೊತೆಗೆ ಈ ರೋಗದ ಬಗ್ಗೆ ಸರಿಯಾದ ರೀತಿಯಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದು ಈ ದಿನದ ಮಹತ್ವವಾಗಿದೆ.

ಕ್ಯಾನ್ಸರ್‌ನಲ್ಲಿ ಸುಮಾರು ನೂರಕ್ಕಿಂತ ಹೆಚ್ಚು ವಿಧಗಳಿದ್ದು ಅವುಗಳಲ್ಲಿ ಚರ್ಮದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್, ಮೆಲನೋಮ, ಕೊಲೊರೆಕ್ಟಲ್ ಕ್ಯಾನ್ಸರ್, ಲಿಂಫೋಮ ಕ್ಯಾನ್ಸರ್, ಮೂತ್ರಪಿಂಡದ ಕ್ಯಾನ್ಸರ್‌ ಸಾಮಾನ್ಯವಾದವು ಎಂದು ವರದಿಗಳಿಂದ ತಿಳಿದು ಬಂದಿದೆ. ಆದರೆ ಭಾರತದಲ್ಲಿ ಬಾಯಿ, ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತವೆ ಎಂದು ತಿಳಿದು ಬಂದಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Mon, 3 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!