Bowel Cancer: ಕರುಳಿನ ಕ್ಯಾನ್ಸರ್ ಅಪಾಯ ತಡೆಯುವ 8 ಆಹಾರಗಳಿವು

ಕರುಳಿನ ಕ್ಯಾನ್ಸರ್ ಅಥವಾ ಕೊಲೊರೆಕ್ಟಲ್ ಕ್ಯಾನ್ಸರ್ ಇವೆರಡೂ ಒಂದೇ. ಈ ರೋಗವು ಜೀರ್ಣಾಂಗ ವ್ಯವಸ್ಥೆಯ ಕೊನೆಯ ಭಾಗದಲ್ಲಿ ಮಾರಣಾಂತಿಕ ಗೆಡ್ಡೆಯ ಬೆಳವಣಿಗೆಯಿಂದ ಉಂಟಾಗುತ್ತದೆ. ಇದಕ್ಕೆ ಚಿಕಿತ್ಸೆ ನೀಡದೆ ಬಿಟ್ಟರೆ ಕರುಳಿನ ಕ್ಯಾನ್ಸರ್ ನಮ್ಮ ದೇಹದ ಬೇರೆ ಭಾಗಗಳಿಗೆ ಕೂಡ ಹರಡಬಹುದು. ಕರುಳಿನ ಕ್ಯಾನ್ಸರ್ ಬಾರದಂತೆ ತಡೆಯಲು ಸಹಾಯ ಮಾಡುವ ಕೆಲವು ಆಹಾರಗಳ ಮಾಹಿತಿ ಇಲ್ಲಿದೆ.

Bowel Cancer: ಕರುಳಿನ ಕ್ಯಾನ್ಸರ್ ಅಪಾಯ ತಡೆಯುವ 8 ಆಹಾರಗಳಿವು
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on:Feb 02, 2024 | 11:08 AM

ಬೇರೆಲ್ಲ ಆರೋಗ್ಯ ಸಮಸ್ಯೆಗಳಂತೆಯೇ ಕರುಳಿನ ಕ್ಯಾನ್ಸರ್​ಗೂ (Bowel Cancer) ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಕಾರಣವಾಗುತ್ತದೆ. ಸರಿಯಾದ ಆಹಾರಗಳನ್ನು ಸೇವಿಸುವ ಮೂಲಕ ದೀರ್ಘಾವಧಿಯ ಹಾನಿಯ ಅಪಾಯವನ್ನು ಕಡಿಮೆ ಮಾಡಬಹುದು. ಉತ್ತಮ ಆರೋಗ್ಯಕ್ಕಾಗಿ ಉತ್ತಮವಾದ ಆಹಾರವನ್ನೇ ಆಯ್ಕೆ ಮಾಡಿಕೊಳ್ಳಬೇಕು. ಕರುಳಿನ ಕ್ಯಾನ್ಸರ್ ಅಪಾಯವನ್ನು ತಗ್ಗಿಸಲು ಸಹಾಯ ಮಾಡುವ 8 ಅತ್ಯುತ್ತಮ ಆಹಾರಗಳ ಪಟ್ಟಿ ಇಲ್ಲಿದೆ.

ಕರುಳಿನ ಕ್ಯಾನ್ಸರ್ ಅಪಾಯಕ್ಕೆ ಆಹಾರ ಹೇಗೆ ಕಾರಣವಾಗುತ್ತದೆ?:

ಹೆಚ್ಚಿನ ಉತ್ಕರ್ಷಣ ನಿರೋಧಕ ಮತ್ತು ಹೆಚ್ಚಿನ ಫೈಬರ್ ಅಂಶವಿರುವ ಆಹಾರಗಳು ಮತ್ತು ಪ್ರಿಬಯಾಟಿಕ್‌ಗಳು ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಪ್ರಮುಖವಾಗಿವೆ. ಹಣ್ಣುಗಳು ಮತ್ತು ತರಕಾರಿಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ವಿರುದ್ಧ ಹೋರಾಡಲು ಜೀವಕೋಶದ ಹಾನಿಯನ್ನು ತಡೆಯಬಹುದು. ಆರೋಗ್ಯಕರವಾದ ಕರುಳಿನ ವ್ಯವಸ್ಥೆಗೆ ಫೈಬರ್ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಪ್ರಿಬಯಾಟಿಕ್‌ಗಳು ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾ ಮತ್ತು ಕರುಳಿನ ಸೂಕ್ಷ್ಮಾಣುಜೀವಿಗಳನ್ನು ನೇರವಾಗಿ ಅಂಗಗಳ ಮೇಲೆ ಪ್ರಭಾವ ಬೀರಲು ಉತ್ತೇಜಿಸುತ್ತದೆ.

ಇದನ್ನೂ ಓದಿ: Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?

ಕರುಳಿನ ಕ್ಯಾನ್ಸರ್ ಅಪಾಯವು ಇತರ ಯಾವುದೇ ರೀತಿಯ ಕ್ಯಾನ್ಸರ್‌ಗಿಂತ ಹೆಚ್ಚಾಗಿ ಕರುಳಿನ ಸೂಕ್ಷ್ಮಾಣುಜೀವಿಗಳಿಂದ ಪ್ರಭಾವಿತವಾಗಿರುತ್ತದೆ. ಅಸಮತೋಲಿತ ಬ್ಯಾಕ್ಟೀರಿಯಾದ ಸಂಯೋಜನೆಯು ಆರೋಗ್ಯವಂತ ಜನರಲ್ಲಿ ರೋಗಕ್ಕೆ ಕಾರಣವಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಯಾವ ಆಹಾರ ಸೇವಿಸಬೇಕು?:

ಕ್ರ್ಯಾನ್‌ಬೆರೀಸ್:

ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಅಂಶವನ್ನು ಹೊಂದಿರುವ ಈ ಬೆರಿ ಹಣ್ಣು ನಿಮ್ಮ ಕರುಳಿನ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

ಸೇಬು ಹಣ್ಣು:

ಸೇಬು ಹಣ್ಣುಗಳು ಹೆಚ್ಚಿನ ಫೈಬರ್ ಅಂಶವಿರುವ ಹಣ್ಣಾಗಿದ್ದು, ಸಾಕಷ್ಟು ಪ್ರಿಬಯಾಟಿಕ್‌ಗಳು ಮತ್ತು ವಿಟಮಿನ್ ಎ ಅಂಶವನ್ನು ಹೊಂದಿದೆ. ಇದರ ಜೊತೆಗೆ ಕರುಳಿನ ಕ್ಯಾನ್ಸರ್ ಅಪಾಯದ ವಿರುದ್ಧ ಹೋರಾಡುತ್ತದೆ.

ಬೀಟ್ರೂಟ್:

ಬೀಟ್ರೂಟ್ ಸಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಕರುಳಿನ ಕ್ಯಾನ್ಸರ್ ಅನ್ನು ದೂರವಿಡುವ ಕ್ಯಾರೊಟಿನಾಯ್ಡ್​ಗಳಂತಹ ಕ್ಯಾನ್ಸರ್ ವಿರೋಧಿ ಗುಣಗಳನ್ನು ಇದು ಹೊಂದಿದೆ.

ದಾಳಿಂಬೆ:

ದಾಳಿಂಬೆಯು ಎಲಾಜಿಕ್ ಆಮ್ಲವನ್ನು ಹೊಂದಿದ್ದು, ಇದು ಕ್ಯಾನ್ಸರ್ ಗೆಡ್ಡೆಗಳು ರೂಪುಗೊಳ್ಳುವುದನ್ನು ತಡೆಯುತ್ತದೆ.

ರಾಸ್​ಬೆರೀಸ್:

ಫೈಬರ್​ನ ಅತ್ಯುತ್ತಮ ಮೂಲಗಳಲ್ಲಿ ಒಂದಾದ ರಾಸ್​ಬೆರೀಸ್ ವಿಟಮಿನ್ ಸಿ ಮತ್ತು ಎಲಾಜಿಟಾನಿನ್​ಗಳು ಮತ್ತು ಯುರೊಲಿಥಿನ್​ಗಳಂತಹ ಶಕ್ತಿಯುತ ಸಂಯುಕ್ತಗಳನ್ನು ನಮ್ಮ ದೇಹಕ್ಕೆ ನೀಡುತ್ತದೆ. ಇದು ಗೆಡ್ಡೆಗಳು ಉಂಟಾಗುವುದನ್ನು ತಡೆಯುತ್ತದೆ.

ಇದನ್ನೂ ಓದಿ: ಸ್ತನ ಕ್ಯಾನ್ಸರ್ ತಡೆಗಟ್ಟಲು ನಿಮ್ಮ ಜೀವನಶೈಲಿಯಲ್ಲಿ ಮಾಡಿಕೊಳ್ಳಬೇಕಾದ ಬದಲಾವಣೆಗಳಿವು

ಟೊಮ್ಯಾಟೋ:

ಟೊಮ್ಯಾಟೋ ಹಣ್ಣುಗಳು ಲೈಕೋಪೀನ್ ಮತ್ತು ವಿಟಮಿನ್ ಸಿ ಮೂಲವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿದೆ.

ಚೆರಿ:

ಚೆರಿಗಳು ಪಾಲಿಫಿನಾಲ್​ಗಳು ಮತ್ತು ಆಂಥೋಸಯಾನಿನ್​ಗಳನ್ನು ಹೊಂದಿದ್ದು, ಅದು ಹೊಟ್ಟೆ ಮತ್ತು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸುತ್ತದೆ.

ಸ್ಟ್ರಾಬೆರಿಗಳು:

ಸ್ಟ್ರಾಬೆರಿಗಳು ಫೀನಾಲ್‌ಗಳು ಮತ್ತು ವಿಟಮಿನ್ ಸಿಯಂತಹ ಸಸ್ಯ ಸಂಯುಕ್ತಗಳನ್ನು ಹೊಂದಿರುತ್ತವೆ. ಇದು ಜೀವಕೋಶಗಳಿಗೆ ಹಾನಿಯಾಗದಂತೆ ತಡೆಯುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 1 February 24

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ