AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World First Aid Day 2025: ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಸಂಜೀವಿನಿ “ಪ್ರಥಮ ಚಿಕಿತ್ಸೆ”

ಏನಾದರೂ ಅಪಘಾತ, ಅವಘಡಗಳಾದ ಸಂದರ್ಭದಲ್ಲಿ ವ್ಯಕ್ತಿಗೆ ಸಕಾಲದಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡುವ ಮೂಲಕ ಆತನನ್ನು ಪ್ರಾಣಾಪಾಯದಿಂದ ಪಾರು ಮಾಡಬಹುದು, ಈ ನಿಟ್ಟಿನಲ್ಲಿ ತುರ್ತು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿಯು ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ಜನರಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್‌ ತಿಂಗಳ ಎರಡನೇ ಶನಿವಾರದಂದು ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ.

World First Aid Day 2025: ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಸಂಜೀವಿನಿ “ಪ್ರಥಮ ಚಿಕಿತ್ಸೆ”
ವಿಶ್ವ ಪ್ರಥಮ ಚಿಕಿತ್ಸಾ ದಿನImage Credit source: Google
ಮಾಲಾಶ್ರೀ ಅಂಚನ್​
|

Updated on:Sep 13, 2025 | 10:19 AM

Share

ಯಾವುದಾದರೂ ಅಪಘಾತ, ಅವಘಡಗಳಾದ ಸಂದರ್ಭದಲ್ಲಿ ವೃತ್ತಿನಿರತ ವೈದ್ಯರು ಚಿಕಿತ್ಸೆ ಪ್ರಾರಂಭಿಸುವ ಮೊದಲು ತುರ್ತು ಸಂದರ್ಭದಲ್ಲಿ ಗಾಯಾಳು ಅಥವಾ ರೋಗಿಗೆ  ಸಕಾಲದಲ್ಲಿ ನೀಡಲಾಗುವ ಆರೈಕೆ ಚಿಕಿತ್ಸೆಯೇ ಪ್ರಥಮ ಚಿಕಿತ್ಸೆ (First Aid). ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಿದರೆ, ಇದರ ಸಹಾಯದಿಂದ ವ್ಯಕ್ತಿಯನ್ನು ಗಂಭೀರ ಹಾನಿಯಿಂದ ತಪ್ಪಿಸಬಹುದು. ಒಟ್ಟಿನಲ್ಲಿ ಈ ಪ್ರಥಮ ಚಿಕಿತ್ಸೆಯನ್ನು ಸಕಾಲದಲ್ಲಿ ಜೀವ ಉಳಿಸುವ ಸಂಜೀವಿನಿ ಅಂತಾನೇ ಹೇಳಬಹುದು. ಇದು ಪ್ರತಿಯೊಬ್ಬರಿಗೂ ತಿಳಿದಿರಬೇಕಾದ ಪ್ರಾಥಮಿಕ ಕೌಶಲವಾಗಿದೆ. ಹಾಗಾಗಿ ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ ಎರಡನೇ ಶನಿವಾರ ವಿಶ್ವ ಪ್ರಥಮ ಚಿಕಿತ್ಸಾ (World First Aid Day) ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಪ್ರಥಮ ಚಿಕಿತ್ಸಾ ದಿನದ ಇತಿಹಾಸ:

1859 ರಲ್ಲಿ ನಡೆದ ಸೋಲ್ಫೆರಿನೊ ಕದನದ ಸಮಯದಲ್ಲಿ, ಯುವ ಉದ್ಯಮಿ ಹೆನ್ರಿ ಡ್ಯೂನಾಂಟ್ ಹತ್ಯಾಕಾಂಡದಲ್ಲಿ ಗಾಯಗೊಂಡ ಅನೇಕರಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡಿದರು. ಈ ಘಟನೆಯು ಅವರನ್ನು “ಎ ಮೆಮೋರಿ ಆಫ್ ಸೋಲ್ಫೆರಿನೊ” ಎಂಬ ಪುಸ್ತಕ ಬರೆಯಲು ಪ್ರೇರೇಪಿಸಿತು. ಅದರಲ್ಲಿ ಅವರು ತಮ್ಮ ಅನುಭವಗಳನ್ನು ವಿವರಿಸಿದರು. ನಂತರ ಹೆನ್ರಿ ಡ್ಯೂನಾಂಟ್ ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಯನ್ನು ಸ್ಥಾಪಿಸಿದರು. ಇದು ಪ್ರಥಮ ವೈದ್ಯಕೀಯ ಆರೈಕೆ ಮತ್ತು ಜಾಗೃತಿ ಮೂಡಿಸಲು ಮೀಸಲಾಗಿರುವ ಸಂಸ್ಥೆಯಾಗಿದೆ.  ಈ ಸಂಸ್ಥೆ 2000 ನೇ ಇಸವಿಯಲ್ಲಿ ರೆಡ್ ಕ್ರೆಸೆಂಟ್ ಸೊಸೈಟೀಸ್ ಒಕ್ಕೂಟದ (IFRC) ಜೊತೆಯಾಗಿ  ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲು ಆರಂಭಿಸಿತು.  ಈ ದಿನದ ಉದ್ದೇಶವು  ಪ್ರಥಮ ಚಿಕಿತ್ಸೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಈ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ ಎರಡನೇ ಶನಿವಾರ ಆಚರಿಸಲಾಗುತ್ತದೆ.

ಇದನ್ನೂ ಓದಿ: ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಈಸಬೇಕು ಇದ್ದು ಜಯಿಸಬೇಕು

ಇದನ್ನೂ ಓದಿ
Image
ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ
Image
ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ
Image
ಶಿಕ್ಷಕರ ದಿನದ ಆಚರಣೆಯ ಹಿನ್ನೆಲೆಯ ಬಗ್ಗೆ ತಿಳಿಯಿರಿ
Image
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ

ಪ್ರಥಮ ಚಿಕಿತ್ಸಾ ದಿನದ ಮಹತ್ವ:

ಪ್ರಥಮ ಚಿಕಿತ್ಸೆಯ ಸಹಾಯದಿಂದ ಜೀವಗಳನ್ನು ಉಳಿಸಬಹುದು. ವಿಶೇಷವಾಗಿ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯು ಜೀವಗಳನ್ನು ಉಳಿಸುತ್ತವೆ. ಇದು ಜೀವವನ್ನು ಸಂರಕ್ಷಿಸುವುದು ಮಾತ್ರವಲ್ಲದೆ ಗಾಯಗೊಂಡ ವ್ಯಕ್ತಿಗೆ ಮತ್ತಷ್ಟು ಹಾನಿಯಾಗದಂತೆ ನೋಡಿಕೊಳ್ಳುತ್ತದೆ. ಹಾಗಾಗಿ ಇದರ ಮಹತ್ವದ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಈ ದಿನದಂದು ಪ್ರಥಮ ಚಿಕಿತ್ಸಾ ಆರೈಕೆಯ ಮಹತ್ವ ಮತ್ತು ಇದರ ಮೂಲಕ ಅಮೂಲ್ಯ ಜೀವವನ್ನು ಹೇಗೆ ಉಳಿಸಬಹುದು ಎಂಬುದರ ಕುರಿತು ಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ದಿನದಂದು ಶಾಲೆಗಳು-ಕಾಲೇಜುಗಳು ಮತ್ತು ರೆಡ್‌ಕ್ರಾಸ್‌ನಂತಹ ಸಂಸ್ಥೆಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Sat, 13 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!