World Health Day 2024: ರಕ್ತದ ಕ್ಯಾನ್ಸರ್ ಪ್ರಕರಣಗಳು ಏಕೆ ಹೆಚ್ಚುತ್ತಿವೆ; ಚಿಕಿತ್ಸೆ ಏನು?

ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಲ್ಲೂ ರಕ್ತದ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕಳೆದ ದಶಕದಲ್ಲಿ ರಕ್ತದ ಕ್ಯಾನ್ಸರ್ ಪ್ರಕರಣಗಳು 20 ಪ್ರತಿಶತದಷ್ಟು ಹೆಚ್ಚಾಗಿದೆ.

World Health Day 2024: ರಕ್ತದ ಕ್ಯಾನ್ಸರ್ ಪ್ರಕರಣಗಳು ಏಕೆ ಹೆಚ್ಚುತ್ತಿವೆ; ಚಿಕಿತ್ಸೆ ಏನು?
Blood Cancer
Follow us
|

Updated on: Apr 06, 2024 | 8:48 PM

ವಿಶ್ವ ಆರೋಗ್ಯ ದಿನ(World Health Day) ವನ್ನು ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಆರೋಗ್ಯದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಇದರ ಉದ್ದೇಶ. ಪ್ರಸ್ತುತ, ಪ್ರಪಂಚದಾದ್ಯಂತ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ಪೈಕಿ ಬ್ಲಡ್ ಕ್ಯಾನ್ಸರ್ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಈ ಕ್ಯಾನ್ಸರ್ ಬಗ್ಗೆ ತಜ್ಞರಿಂದ ವಿವರವಾಗಿ ತಿಳಿದುಕೊಳ್ಳೋಣ. ಕ್ಯಾನ್ಸರ್ ದೇಹದ ಯಾವುದೇ ಭಾಗದಲ್ಲಿ ಸಂಭವಿಸಬಹುದು. ರಕ್ತದಲ್ಲಿ ಕ್ಯಾನ್ಸರ್ ಬಂದರೆ ಅದನ್ನು ಬ್ಲಡ್ ಕ್ಯಾನ್ಸರ್ ಎಂದು ಕರೆಯಲಾಗುತ್ತದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಲ್ಲೂ ರಕ್ತದ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕಳೆದ ದಶಕದಲ್ಲಿ ರಕ್ತದ ಕ್ಯಾನ್ಸರ್ ಪ್ರಕರಣಗಳು 20 ಪ್ರತಿಶತದಷ್ಟು ಹೆಚ್ಚಾಗಿದೆ.

ರಕ್ತದ ಕ್ಯಾನ್ಸರ್ಗೆ ಹಲವು ಕಾರಣಗಳಿವೆ. ಇವುಗಳಲ್ಲಿ, ರಕ್ತದಲ್ಲಿನ ಜೀವಕೋಶಗಳ ತ್ವರಿತ ಬೆಳವಣಿಗೆ, ಹೆಚ್ಚುತ್ತಿರುವ ವಯಸ್ಸು, ಇಬಿವಿ ವೈರಸ್ ಮತ್ತು ಬೆಂಜೀನ್‌ಗೆ ಒಡ್ಡಿಕೊಳ್ಳುವುದು ಮುಖ್ಯ. ರಕ್ತದ ಕ್ಯಾನ್ಸರ್ನಲ್ಲಿ ಹಲವು ವಿಧಗಳಿವೆ. ಲ್ಯುಕೇಮಿಯಾ, ಲಿಂಫೋಮಾ, ಮಲ್ಟಿಪಲ್ ಮೈಲೋಮಾ ಮತ್ತು ಮೈಲೋಪ್ರೊಲಿಫೆರೇಟಿವ್ ನಿಯೋಪ್ಲಾಸಂ ವಿವಿಧ ರೀತಿಯ ರಕ್ತದ ಕ್ಯಾನ್ಸರ್.

ರಕ್ತ ಕ್ಯಾನ್ಸರ್​​​ನ ಲಕ್ಷಣಗಳು:

  • ಮರುಕಳಿಸುವ ಜ್ವರ
  • ನಿರಂತರ ಆಯಾಸ,ದೌರ್ಬಲ್ಯ
  • ರಾತ್ರಿ ಬೆವರುವಿಕೆ
  • ಹೊಟ್ಟೆ ನೋವು, ತಲೆನೋವು
  • ಉಸಿರಾಟದ ತೊಂದರೆ

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

ಲ್ಯುಕೇಮಿಯಾ ಚಿಕಿತ್ಸೆ:

ಭಾರತದಲ್ಲಿ ಪ್ರತಿ ವರ್ಷ ರಕ್ತದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮರಿಂಗೋ ಏಷ್ಯಾ ಆಸ್ಪತ್ರೆಯ ಹೆಮಟಾಲಜಿ ಮತ್ತು ಮೂಳೆ ಮಜ್ಜೆಯ ಕಸಿ ವಿಭಾಗದಲ್ಲಿ ಡಾ. ಮೀಟ್ ಕುಮಾರ್ ಹೇಳುತ್ತಾರೆ. ಇದರ ಚಿಕಿತ್ಸೆಗಾಗಿ ಅಸ್ಥಿಮಜ್ಜೆ ಕಸಿ ಅಂದರೆ ಬಿಎಂಟಿಯನ್ನು ಕೂಡ ಮಾಡಲಾಗುತ್ತದೆ. ಭಾರತದಲ್ಲಿ ಪ್ರತಿ ವರ್ಷ 2,500 ರಿಂದ 3,000 BMT ಗಳನ್ನು ಮಾಡಲಾಗುತ್ತದೆ. BMT ಯ ಸಂಖ್ಯೆಯು ಹೆಚ್ಚಾಗಿದೆ, ಆದರೆ ಇಂದಿಗೂ ಭಾರತದಲ್ಲಿ ಕೇವಲ ಶೇಕಡಾ 10ರಷ್ಟು ಜನಸಂಖ್ಯೆಯು ರಕ್ತ ಸಂಬಂಧಿತ ಕಾಯಿಲೆಗಳ ಲಕ್ಷಣಗಳು ಮತ್ತು ಚಿಕಿತ್ಸೆಯ ಬಗ್ಗೆ ತಿಳಿದಿರುತ್ತದೆ. ರಕ್ತದ ಅಸ್ವಸ್ಥತೆಗಳು ಕ್ಯಾನ್ಸರ್ನ ಮಾರಣಾಂತಿಕ ರೂಪಗಳಲ್ಲಿ ಒಂದಾಗಿದೆ, ಅದು ಜೀವನದ ಗುಣಮಟ್ಟವನ್ನು ಗಂಭೀರವಾಗಿ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅಸ್ಥಿಮಜ್ಜೆ ಕಸಿ ಮೂಲಕ ಈ ರೋಗಗಳನ್ನು ಶಾಶ್ವತವಾಗಿ ಗುಣಪಡಿಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು