World Heart Day 2024: ಹೃದಯಾಘಾತ ಯುವಕರಲ್ಲಿ ಹೆಚ್ಚಾಗುತ್ತಿರಲು ಕಾರಣವೇನು? ಇಲ್ಲಿದೆ ತಜ್ಞರ ಅಭಿಪ್ರಾಯ

ಹೃದಯ ಸಂಬಂಧಿ ಕಾಯಿಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಾಗತಿಕವಾಗಿ ಹೃದಯದ ಆರೋಗ್ಯವನ್ನು ಉತ್ತೇಜಿಸಲು ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿರುವ ಹೃದಯ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಹಾಗಾದರೆ ಹೃದಯಾಘಾತ ಪ್ರಕರಣಗಳು ಏಕೆ ಹೆಚ್ಚುತ್ತಿವೆ? ಹೃದ್ರೋಗಗಳನ್ನು ತಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

World Heart Day 2024: ಹೃದಯಾಘಾತ ಯುವಕರಲ್ಲಿ ಹೆಚ್ಚಾಗುತ್ತಿರಲು ಕಾರಣವೇನು? ಇಲ್ಲಿದೆ ತಜ್ಞರ ಅಭಿಪ್ರಾಯ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 28, 2024 | 6:11 PM

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತಿದೆ. ಹಾಗಾಗಿ ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಾಗತಿಕವಾಗಿ ಹೃದಯದ ಆರೋಗ್ಯವನ್ನು ಉತ್ತೇಜಿಸಲು ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿರುವ ಹೃದಯ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿರುತ್ತದೆ.

ಈ ದಿನದ ಇತಿಹಾಸ

ಈ ದಿನವನ್ನು, ವಿಶ್ವ ಹೃದಯ ಒಕ್ಕೂಟ ಅಥವಾ ವರ್ಲ್ಡ್ ಹಾರ್ಟ್ ಫೆಡರೇಶನ್ (WHF) 1999 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಸಹಯೋಗದೊಂದಿಗೆ ರಚಿಸಿತು. ಇವೆರಡು ಜಂಟಿಯಾಗಿ ವಿಶ್ವ ಹೃದಯ ದಿನದ ಆಚರಣೆಯನ್ನು 24 ಸೆಪ್ಟೆಂಬರ್ 2000 ರಂದು ಪ್ರಾರಂಭಿಸಿತು. ನಂತರ ಪ್ರತಿವರ್ಷ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ಈ ದಿನವನ್ನು ಆಚರಿಸಲಾಗುತ್ತಿತ್ತು. ಬಳಿಕ 2014 ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ 29 ರಂದು ಆಚರಿಸಲು ಪ್ರಾರಂಭಿಸಲಾಯಿತು.

ಈ ದಿನದ ಮಹತ್ವ:

ಹೃದಯರಕ್ತನಾಳಗಳ ಕಾಯಿಲೆ, ತಡೆಗಟ್ಟುವಿಕೆ ಮತ್ತು ಜನರ ಮೇಲೆ ಆರೋಗ್ಯದ ಮೇಲೆ ಬೀರುವ ಅದರ ಪ್ರಭಾವದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಿಂದ ಹೃದಯ ಸಂಬಂಧಿ ಕಾಯಿಲೆಯ ಹೆಚ್ಚುತ್ತಿದೆ. ಎಲ್ಲಾ ವಯಸ್ಸಿನ ಜನರು ಕೂಡಾ ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಹೃದಯರಕ್ತನಾಳಗಳ ಕಾಯಿಲೆಯಿಂದಾಗಿ ಹೃಯಾಘಾತದ ಅಪಾಯವೂ ಹೆಚ್ಚಾಗುತ್ತಿದೆ. ಪ್ರತಿವರ್ಷ ಸುಮಾರು 18.6 ಮಿಲಿಯನ್ ಜನರು ಹೃದ್ರೋಗ ಅಥವಾ ಪಾರ್ಶ್ವವಾಯುವಿಗೆ ಬಲಿಯಾಗಿ ಸಾಯುತ್ತಿದ್ದಾರೆ. ಹಾಗಾಗಿ ಈ ಅಪಾಯದ ಅಂಶಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಹೃದಯ ದಿನದಂತಹ ಅಭಿಯಾನಗಳು ಅತ್ಯಗತ್ಯವಾಗಿದೆ.

ಯುವಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ!

ಇತ್ತೀಚೆಗೆ ಜಾರ್ಖಂಡ್ ನಲ್ಲಿ ನಡೆದ ಅಬಕಾರಿ ಇಲಾಖೆಯ ಕಾನ್ಸ್‌ಟೇಬಲ್‌ ನೇಮಕಾತಿಗಾಗಿ ರೇಸ್ ಪರೀಕ್ಷೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿರುವ ಘಟನೆ ಬೆಳೆಕಿಗೆ ಬಂದಿದೆ. ಓಡುವಾಗ ಅವರಿಗೆ ಹೃದಯಾಘಾತವಾಗಿದೆ ಎಂಬುದು ತಿಳಿದು ಬಂದಿದೆ. ಪ್ರತಿದಿನ ಇಂತಹ ಹೊಸ ಪ್ರಕರಣಗಳು ಕಂಡು ಬರುತ್ತಿವೆ. ಪಾರ್ಟಿಯಲ್ಲಿ ನೃತ್ಯ ಮಾಡುವಾಗ, ಜಿಮ್ ಹೋದಾಗ ಕೆಲವರು ಹೃದಯಾಘಾತದಿಂದ ಸಾಯುತ್ತಾರೆ. ಇವು ಹೆಚ್ಚಾಗಿ ಯುವಕರಲ್ಲಿ ಕಂಡುಬರುತ್ತಿವೆ. ತಜ್ಞರ ಪ್ರಕಾರ, ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ಘಟನೆಗಳಾಗಿವೆ. ಏಕೆಂದರೆ ಎಲ್ಲರೂ ನಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯುವಕರು ತಮ್ಮ ಹೃದಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಕಾಲಕಾಲಕ್ಕೆ ಅವರ ಹೃದಯದ ಆರೋಗ್ಯವನ್ನು ತಪಾಸಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ.

ಇದನ್ನೂ ಓದಿ: ಬಂಜೆತನ ನಿವಾರಣೆ ಮಾಡಿಕೊಳ್ಳುವುದಕ್ಕೆ ಈ ಸೊಪ್ಪಿಗಿಂತ ಒಳ್ಳೆಯ ಮದ್ದಿಲ್ಲ

ಹೃದಯಾಘಾತ ಪ್ರಕರಣಗಳು ಏಕೆ ಹೆಚ್ಚುತ್ತಿವೆ?

ಮಾನಸಿಕ ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳು ಯುವ ಪೀಳಿಗೆಯಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಹೃದಯಾಘಾತ, ಹೃದಯ ವೈಫಲ್ಯ ಮತ್ತು ಹೃದಯ ಸ್ತಂಭನ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಲು ಇದು ಕಾರಣವಾಗಿದೆ.

ಹೃದ್ರೋಗಗಳನ್ನು ತಡೆಯುವುದು ಹೇಗೆ?

ನಾರಾಯಣ ಆಸ್ಪತ್ರೆಯ ಹೃದ್ರೋಗ ಶಸ್ತ್ರಚಿಕಿತ್ಸಕ ಡಾ. ರಚಿತ್ ಸಕ್ಸೇನಾ ಅವರು ಹೇಳುವ ಪ್ರಕಾರ, “ಇತ್ತೀಚಿನ ವರ್ಷಗಳಲ್ಲಿ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳು ಯುವ ಪೀಳಿಗೆಯಲ್ಲಿ ಹೆಚ್ಚಾಗಿದೆ. ಜೊತೆಗೆ ಅಂತವರು ವ್ಯಾಯಾಮಗಳನ್ನು ಸರಿಯಾಗಿ ಮಾಡುವುದಿಲ್ಲ ಬದಲಾಗಿ ತಾವು ಸಂಪೂರ್ಣವಾಗಿ ಆರೋಗ್ಯವಾಗಿದ್ದೇವೆ ಎಂದು ಭಾವಿಸುತ್ತಾರೆ. ಇದರಿಂದಾಗಿ ಅವರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದಿಲ್ಲ, ಇದು ತುಂಬಾ ಅಪಾಯಕಾರಿಯಾಗಿದ್ದು ಅನೇಕ ರೀತಿಯ ಅನಾನುಕೂಲಗಳನ್ನು ಹೊಂದಿದೆ. ಆದರೆ ಇಂದಿನ ಜೀವನಶೈಲಿಗೆ ಅನುಗುಣವಾಗಿ, 30 ವರ್ಷದ ನಂತರ, ಪ್ರತಿಯೊಬ್ಬರೂ ಕೂಡ ಪ್ರತಿವರ್ಷ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದು ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ