AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!

ಇತ್ತೀಚೆಗಿನ ದಿನಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆ ಗಳು ಕಾಡುತ್ತಿದೆ. ಅಂತಹ ಸಮಸ್ಯೆಗಳ ಸಾಲಿಗೆ ʼಹಿಮೋಫಿಲಿಯಾʼ ರಕ್ತಸ್ರಾವಕ್ಕೆ ಸಂಬಂಧಿಸಿದ ಸಮಸ್ಯೆ ಕೂಡ ಒಂದು. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 17 ರಂದು ವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!
World Hemophilia Day 2024
ಸಾಯಿನಂದಾ
| Edited By: |

Updated on: Apr 16, 2024 | 8:48 PM

Share

ಹಿಮೋಫಿಲಿಯಾ ಕಾಯಿಲೆಯೂ ಇರುವವರಲ್ಲಿ ರಕ್ತ ಹೆಪ್ಪುಗಟ್ಟುವುದು ನಿಧಾನವಾಗುತ್ತದೆ. ಸಣ್ಣ ಪುಟ್ಟ ಗಾಯಗಳಾದಾಗ ರಕ್ತಸ್ರಾವವು ನಿಲ್ಲುವುದಿಲ್ಲ. ಅನುವಂಶೀಯವಾಗಿ ಈ ಕಾಯಿಲೆಯೂ ಇದಾಗಿದ್ದು, ಹೆಚ್ಚಿನವರಿಗೆ ಹಿಮೋಫಿಲಿಯಾ ಕಾಯಿಲೆಯ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಇದನ್ನು ಕುಸುಮ ರೋಗ ಎಂದು ಕರೆಯುವುದಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ʼವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸ:

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸದ ಬಗ್ಗೆ ಹೇಳುವುದಾದರೆ, 1989ರಲ್ಲಿ ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಮೊದಲ ಬಾರಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲು ಮುಂದಾಯಿತು. ಈ ದಿನವು ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಸಂಸ್ಥಾಪಕ ಫ್ರಾಂಕ್‌ ಷ್ನಾಬೆಲ್‌ ಅವರ ಜನ್ಮದಿನವಾಗಿದೆ. ಇವರ ಜನ್ಮದಿನದ ಗೌರವಾರ್ಥವಾಗಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: Skin Care: ಮುಖದ ಕಾಂತಿ ಹೆಚ್ಚಲು ಮೊಸರು ಬಳಸುವುದು ಹೇಗೆ?

ವಿಶ್ವ ಹಿಮೋಫಿಲಿಯಾ ದಿನದ ಮಹತ್ವ:

ರಕ್ತಸ್ರಾವದ ಅಸ್ವಸ್ಥತೆಗಳ ಬಗ್ಗೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ವಿಶ್ವ ಹಿಮೋಫಿಲಿಯಾ ದಿನದ ಮುಖ್ಯ ಉದ್ದೇಶವಾಗಿದೆ. ಈ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸರಿಯಾದ ಚಿಕಿತ್ಸೆಯ ನೀಡಿ ಗುಣ ಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುವ ಕೆಲಸಗಳು ಈ ದಿನದಂದು ನಡೆಯುತ್ತವೆ. ಹೀಗಾಗಿ ಆರೋಗ್ಯ ಇಲಾಖೆ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ವಿಚಾರ ಸಂಕಿರಣಗಳು, ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು