World Homeopathy Day 2024: ತಡವಾಗಿ ರೋಗ ಗುಣಪಡಿಸಿದ್ರೂ, ಆರೋಗ್ಯಕ್ಕೆ ಸುರಕ್ಷಿತ ಈ ಹೋಮಿಯೋಪತಿ

ಹೋಮಿಯೋಪತಿಯು ಭಾರತದಲ್ಲಿ ವ್ಯಾಪಕವಾಗಿ ಹರಡಿರುವ ಹಾಗೂ ಜನಪ್ರಿಯ ವೈದ್ಯಕೀಯ ವ್ಯವಸ್ಥೆಯಲ್ಲಿ ಒಂದಾಗಿದೆ. ಹೆಚ್ಚಿನವರು ಆರೋಗ್ಯ ಸಮಸ್ಯೆಗೆ ಈ ಚಿಕಿತ್ಸ ವಿಧಾನಗಳನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಏಪ್ರಿಲ್ 10 ರಂದು ವಿಶ್ವ ಹೋಮಿಯೋಪತಿ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆ ಹಿಂದಿನ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Homeopathy Day 2024: ತಡವಾಗಿ ರೋಗ ಗುಣಪಡಿಸಿದ್ರೂ, ಆರೋಗ್ಯಕ್ಕೆ ಸುರಕ್ಷಿತ ಈ ಹೋಮಿಯೋಪತಿ
World Homeopathy Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 09, 2024 | 5:56 PM

ಆರೋಗ್ಯವು ಹದಗೆಟ್ಟಾಗ ಸರಿಯಾದ ಚಿಕಿತ್ಸೆ ಪಡೆಯುವುದು ಅಗತ್ಯ. ಈಗಾಗಲೇ ಹಲವಾರು ಚಿಕಿತ್ಸಾ ಪದ್ಧತಿಗಳು ಲಭ್ಯವಿದ್ದು, ಹೋಮಿಯೋಪತಿಯು ಪರ್ಯಾಯ ಔಷಧೀಯ ವ್ಯವಸ್ಥೆಗಳಲ್ಲಿ ಒಂದು ಎನ್ನಬಹುದು. ನೈಸರ್ಗಿಕವಾಗಿ ಸಿಗುವ ಪದಾರ್ಥಗಳಿಂದ ಔಷಧವನ್ನು ತಯಾರಿಸಿ ರೋಗಗಳನ್ನು ಗುಣ ಪಡಿಸಲಾಗುತ್ತದೆ. ಇದನ್ನು ವಿಶ್ವದ 2ನೇ ಅತಿ ದೊಡ್ಡ ಚಿಕಿತ್ಸಾ ಪದ್ಧತಿಯಾಗಿದೆ. ಅದಲ್ಲದೇ ಭಾರತದಲ್ಲಿ ಈ ಹೋಮಿಯೋಪತಿ ವೈದ್ಯಕೀಯ ಪದ್ಧತಿಯು ಜಾರಿಗೆ ಬಂದು ನೂರಾರು ವರ್ಷಗಳೇ ಕಳೆದಿವೆ. ಈ ಹೋಮಿಯೋಪತಿ ಔಷಧೀಯ ಪದ್ಧತಿಯ ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 10 ರಂದು ವಿಶ್ವ ಹೋಮಿಯೋಪತಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಹೋಮಿಯೋಪತಿ ದಿನದ ಇತಿಹಾಸ:

ಹೋಮಿಯೋಪತಿಯ ಸಂಸ್ಥಾಪಕ ಡಾ. ಸ್ಯಾಮ್ಯುಯೆಲ್ ಹ್ಯಾನೆಮನ್ ಎನ್ನುವವರು ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಹೋಮಿಯೋಪತಿ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದರು. 18ನೇ ಶತಮಾನದ ಉತ್ತರಾರ್ಧದಲ್ಲಿ ‘ಸಿಮಿಲಿಯಾ ಸಿಮಿಲಿಬಸ್ ಕ್ಯುರೆಂಚರ್’ ತತ್ವವನ್ನು ಅಭಿವೃದ್ಧಿಪಡಿಸಿದರು. ಅದಲ್ಲದೇ, ಏಪ್ರಿಲ್ 10 ಹೋಮಿಯೋಪತಿ ಜನಕ ಜರ್ಮನ್ ವೈ ಡಾ. ಸ್ಯಾಮುಯೆಲ್ ಹಾನೆಮನ್ ಜನ್ಮದಿನವಾದ ಕಾರಣ ಈ ದಿನವನ್ನು ವಿಶ್ವ ಹೋಮಿಯೋಪತಿ ದಿನವನ್ನಾಗಿ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

ವಿಶ್ವ ಹೋಮಿಯೋಪತಿ ದಿನದ ಮಹತ್ವ:

ಹೋಮಿಯೋಪತಿಯು ರೋಗವನ್ನು ಗುಣಪಡಿಸುವ ನೈಸರ್ಗಿಕ ಚಿಕಿತ್ಸಾ ಪ್ರಕ್ರಿಯೆಯಲ್ಲಿ ಒಂದು. ವಿವಿಧ ರೀತಿಯ ಆರೋಗ್ಯ ಸಂಬಂಧಿ ಕಾಯಿಲೆಗಳನ್ನು ಗುಣ ಪಡಿಸುವ ಈ ಹೋಮಿಯೋಪತಿ ಚಿಕಿತ್ಸಾ ವಿಧಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ವಿಶ್ವದಾದ್ಯಂತ ಹೋಮಿಯೋಪತಿಯ ಚಿಕಿತ್ಸಾ ವಿಧಾನದ ಬಗ್ಗೆ ಉಪನ್ಯಾಸಗಳು, ಕಾರ್ಯಗಾರಗಳು ಹಾಗೂ ಕಾರ್ಯಕ್ರಮಗಳು ನಡೆಯುತ್ತವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ