World Kidney Day 2025: ಕಿಡ್ನಿ ಸಮಸ್ಯೆ ತಡೆಗಟ್ಟಲು ಈ ಸಲಹೆಗಳನ್ನು ಅನುಸರಿಸಿ
ಕಳೆದ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗಳು ಏರಿಕೆ ಕಾಣುತ್ತಲೇ ಇದೆ. ಮದ್ಯಪಾನ, ನೋವು ನಿವಾರಕ ಮಾತ್ರೆಗಳ ಸೇವನೆ, ಆಹಾರ ಶೈಲಿಯಿಂದಾಗಿ ಕಿಡ್ನಿ ಆರೋಗ್ಯವು ಹಾಳಾಗುತ್ತಿದೆ. ಭಾರತದಲ್ಲಿ ಪ್ರತಿ 10ರಲ್ಲಿ ಒಬ್ಬರು ಹಾಗೂ ರಾಜ್ಯದಲ್ಲಿ 100ರಲ್ಲಿ 7 ಜನ ಕಿಡ್ನಿ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ನಮ್ಮ ಕಿಡ್ನಿ ಆರೋಗ್ಯದ ಬಗ್ಗೆ ಗಮನ ಹರಿಸುವ ಅವಶ್ಯಕತೆ ಇದೆ. ಈ ಕಾರಣಕ್ಕಾಗಿಯೇ ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನ (World Kidney Day) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಮಾರ್ಚ್ 13 ರಂದು ಈ ದಿನವನ್ನು ಆಚರಿಸಲಾಗುತ್ತಿದೆ.

ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಿಡ್ನಿಯೂ ಒಂದು. ನಮ್ಮ ಶರೀರಕ್ಕೆ ಪೂರಕವಾದ ರಾಸಾಯನಿಕಗಳನ್ನು ಬಳಸಿಕೊಂಡು, ಬೇಡವಾದ ವಸ್ತುಗಳನ್ನು ದೇಹದಿಂದ ಹೊರ ಹಾಕುವ ಮೂಲಕ ಫಿಲ್ಟರ್ ನಂತೆ ಕೆಲಸ ಮಾಡುತ್ತದೆ. ಆದರೆ ಇವುಗಳ ಆರೋಗ್ಯ (Health) ಹಾಳಾದರೆ ದೇಹ ಪೂರ್ತಿ ಅನಾರೋಗ್ಯಕ್ಕೆ ತುತ್ತಾದಂತೆ. ಹಾಗಾಗಿ ಇವುಗಳ ಆರೋಗ್ಯ ಬಹಳ ಮುಖ್ಯವಾಗುತ್ತದೆ. ಪ್ರಪಂಚದಾದಂತ್ಯ ಅನೇಕರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಸಮಸ್ಯೆಗಳು ಏರಿಕೆ ಕಾಣುತ್ತಲೇ ಇದೆ. ಮದ್ಯಪಾನ (Alcohol), ನೋವು ನಿವಾರಕ ಮಾತ್ರೆಗಳ (Painkillers) ಸೇವನೆ, ಆಹಾರ ಶೈಲಿಯಿಂದಾಗಿ ಕಿಡ್ನಿ ಆರೋಗ್ಯವು ಹಾಳಾಗುತ್ತಿದೆ. ಭಾರತದಲ್ಲಿ ಪ್ರತಿ 10ರಲ್ಲಿ ಒಬ್ಬರು ಹಾಗೂ ರಾಜ್ಯದಲ್ಲಿ 100ರಲ್ಲಿ 7 ಜನ ಕಿಡ್ನಿ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ನಮ್ಮ ಕಿಡ್ನಿ ಆರೋಗ್ಯದ ಬಗ್ಗೆ ಗಮನ ಹರಿಸುವ ಅವಶ್ಯಕತೆ ಇದೆ. ಈ ಕಾರಣಕ್ಕಾಗಿಯೇ ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನ (World Kidney Day) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಮಾರ್ಚ್ 13 ರಂದು ಈ ದಿನವನ್ನು ಆಚರಿಸಲಾಗುತ್ತಿದೆ.
ಈ ದಿನದ ಇತಿಹಾಸ, ಉದ್ದೇಶವೇನು?
ಇಂಟರ್ನ್ಯಾಷನಲ್ ಸೊಸೈಟಿ ಆಫ್ ನೆಫ್ರೋಲಾಜಿ ಮತ್ತು ಇಂಟರ್ನ್ಯಾಷನಲ್ ಫೆಡರೇಷನ್ ಆಫ್ ಕಿಡ್ನಿ ಫೌಂಡೇಶನ್ ಜಂಟಿಯಾಗಿ 2006ರಲ್ಲಿ ಈ ವಿಶ್ವ ಕಿಡ್ನಿ ದಿನವನ್ನು ಆರಂಭಿಸಿತು. ಇದು ಕಿಡ್ನಿ ಆರೋಗ್ಯ ಹಾಗೂ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶವನ್ನಿಟ್ಟುಕೊಂಡಿತ್ತು, ಇದೀಗ 88 ದೇಶಗಳು ವಿಶ್ವ ಕಿಡ್ನಿ ದಿನವನ್ನು ಆಚರಿಸುವ ಮೂಲಕ ಕಿಡ್ನಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸುತ್ತಿದೆ. ಕಿಡ್ನಿ ಸಂಬಂಧಿ ರೋಗಗಳ ಅರಿವು ಮೂಡಿಸುವ ಸಲುವಾಗಿ ಮತ್ತು ಕಿಡ್ನಿಗಳ ಕಾಳಜಿ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಹಿಂದಿನ ಉದ್ದೇಶವಾಗಿದೆ. ಜೊತೆಗೆ ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ. ಹೀಗಾಗಿ ವಿಶ್ವ ಕಿಡ್ನಿ ದಿನದಂದು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹತ್ತು ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿ ಈ ಮೂಲಕ ಕಿಡ್ನಿ ಆರೋಗ್ಯದ ಪ್ರಾಮುಖ್ಯತೆ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತದೆ.
ಇದನ್ನೂ ಓದಿ: ಮಹಿಳೆಯರಿಗೆ ತಮ್ಮ ಆರೋಗ್ಯ, ಆಹಾರದ ಬಗ್ಗೆಯೂ ಇರಬೇಕು ಕಾಳಜಿ!
ಕಿಡ್ನಿ ಸಮಸ್ಯೆ ತಡೆಗಟ್ಟಲು ಈ ಸಲಹೆಗಳನ್ನು ಅನುಸರಿಸಿ
- ನಿಮ್ಮ ದಿನನಿತ್ಯದ ಜೀವನಶೈಲಿ ಚೆನ್ನಾಗಿರಲಿ. ಪ್ರತಿನಿತ್ಯ ವ್ಯಾಯಾಮ ಮಾಡಿ. ಆರೋಗ್ಯಕರವಾಗಿರುವ ಆಹಾರಗಳನ್ನು ಸೇವನೆ ಮಾಡಿ.
- ಪ್ರತಿನಿತ್ಯ ನಿಮ್ಮ ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವದನ್ನು ಮರೆಯಬೇಡಿ.
- ಜಂಕ್ ಫುಡ್ ಸೇವನೆ ಮಾಡುವುದನ್ನು ಕಡಿಮೆ ಮಾಡಿ. ಅನಾವಶ್ಯಕ ಔಷಧಗಳು ಅಥವಾ ಸಪ್ಲಿಮೆಂಟ್ಸ್ ಬೇಡ.
- ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಕಾಯಿಲೆಯ ಕುಟುಂಬದ ಇತಿಹಾಸ ಇದ್ದವರು 40ರ ನಂತರ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ.
- ನಿಮ್ಮ ಶುಗರ್ ಮತ್ತು ನಿಮ್ಮ ಬಿಪಿಯನ್ನು ನಿಯಂತ್ರಣದಲ್ಲಿಡಿ. ನೋವು ನಿವಾರಕ ಮಾತ್ರೆ ಅಥವಾ ಇನ್ನಿತರ ಔಷಧಿಗಳ ಸೇವನೆಯನ್ನು ಮಿತಿಗೊಳಿಸಿ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:32 am, Thu, 13 March 25