ವಿಶ್ವ ಕುಷ್ಠ ರೋಗ ದಿನವನ್ನು ಏಕೆ ಆಚರಿಸಲಾಗುತ್ತದೆ? ಇದರ ಬಗ್ಗೆ ಇರುವ ತಪ್ಪು ಕಲ್ಪನೆಗಳೇನು?

World Leprosy Day 2024: ಕುಷ್ಠರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ಹೋಗಲಾಡಿಸುವುದರ ಜೊತೆಗೆ ಕುಷ್ಠರೋಗ ಪೀಡಿತರ ಬಗ್ಗೆ ಬೆಳಕು ಚೆಲ್ಲುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಕುಷ್ಠ ರೋಗವು ಬ್ಯಾಕ್ಟೀರಿಯಾ ಸೋಂಕಿನಿಂದ ಕೂಡಿದ್ದು, ನಿಧಾನವಾಗಿ ಈ ರೋಗವು ಚರ್ಮ ಮತ್ತು ನರಮಂಡಲಕ್ಕೆ ಹಾನಿಯನ್ನುಂಟು ಮಾಡುತ್ತದೆ.

ವಿಶ್ವ ಕುಷ್ಠ ರೋಗ ದಿನವನ್ನು ಏಕೆ ಆಚರಿಸಲಾಗುತ್ತದೆ? ಇದರ ಬಗ್ಗೆ ಇರುವ ತಪ್ಪು ಕಲ್ಪನೆಗಳೇನು?
ಸಾಂದರ್ಭಿಕ ಚಿತ್ರ
Follow us
|

Updated on:Jan 29, 2024 | 3:53 PM

ಪ್ರತಿವರ್ಷ ಜನವರಿ 30ರಂದು ವಿಶ್ವ ಕುಷ್ಠರೋಗ ದಿನ (World Leprosy Day 2024) ಎಂದು ಆಚರಿಸಲಾಗುತ್ತದೆ. ಕುಷ್ಠ ರೋಗದಿಂದ ಬಳಲುತ್ತಿರುವ ಜನರ ಬಗ್ಗೆ ಕರುಣೆ ಹೊಂದಿದ್ದ ಮಹಾತ್ಮ ಗಾಂಧಿಯವರು ಕುಷ್ಠ ರೋಗಿಗಳ ಅಭಿವೃದ್ಧಿಗೆ ಶ್ರಮಿಸಿ, ಅವರಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸಿದರು. ಗಾಂಧೀಜಿ ಕುಷ್ಠ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಈ ಕಾರಣದಿಂದಾಗಿ ಅವರ ಪುಣ್ಯತಿಥಿಯನ್ನು ವಿಶ್ವ ಕುಷ್ಠ ರೋಗ ದಿನ (World Leprosy Day) ಎಂದು ಆಚರಿಸಲಾಗುತ್ತದೆ.

ಭಾರತದಲ್ಲಿ 2005ರಲ್ಲಿ ಕುಷ್ಠರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಘೋಷಿಸಲಾಗಿದೆ. ಆದರೆ, ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ ಪ್ರಪಂಚದ ಹೊಸ ಕುಷ್ಠ ರೋಗಿಗಳಲ್ಲಿ ಅರ್ಧದಷ್ಟು ರೋಗಿಗಳು ಭಾರತದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ವರ್ಷದ ವಿಶ್ವ ಕುಷ್ಠ ರೋಗ ದಿನವನ್ನು (World Leprosy Day 2024) ‘ಕುಷ್ಠ ರೋಗವನ್ನು ಸೋಲಿಸಿ’ ಎಂಬ ವಿಷಯದೊಂದಿಗೆ ಆಚರಿಸಲಾಗುತ್ತಿದೆ. ಕುಷ್ಠರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ಹೋಗಲಾಡಿಸುವುದರ ಜೊತೆಗೆ ಕುಷ್ಠರೋಗ ಪೀಡಿತರ ಬಗ್ಗೆ ಬೆಳಕು ಚೆಲ್ಲುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ನಿಮ್ಮ ಮಗುವಿನ ಮೆದುಳಿನ ಬೆಳವಣಿಗೆ ಹೆಚ್ಚಿಸುವ 7 ಆಹಾರಗಳಿವು

ಈ ಹಿನ್ನೆಲೆಯಲ್ಲಿ ಕುಷ್ಠ ರೋಗದ ಬಗ್ಗೆ ಕೆಲವು ತಪ್ಪು ಕಲ್ಪನೆಗಳಿವೆ. ಈ ರೋಗದ ಬಗ್ಗೆ ಇರುವ ಸತ್ಯ ಸಂಗತಿಗಳ ಕುರಿತು ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ದೀಪ್ತಿ ಟಿ.ಎನ್ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಕುಷ್ಠ ರೋಗದ ಲಕ್ಷಣಗಳೇನು?:

ಕುಷ್ಠ ರೋಗವು ಬ್ಯಾಕ್ಟೀರಿಯಾ ಸೋಂಕಿನಿಂದ ಕೂಡಿದ್ದು, ನಿಧಾನವಾಗಿ ಈ ರೋಗವು ಚರ್ಮ ಮತ್ತು ನರಮಂಡಲಕ್ಕೆ ಹಾನಿಯನ್ನುಂಟು ಮಾಡುತ್ತದೆ. ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾಗಳು ಈ ಸೋಂಕನ್ನು ಉಂಟು ಮಾಡುತ್ತವೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಕುಷ್ಠ ರೋಗವು ಶರೀರ ವಿರೂಪಗೊಳ್ಳುವಿಕೆ ಮತ್ತು ಅಂಗವೈಕಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಕುಷ್ಠರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಸತ್ಯಾಂಶಗಳು:

ತಪ್ಪು ಕಲ್ಪನೆ 1: ಕುಷ್ಠರೋಗ ಸಾಂಕ್ರಾಮಿಕ.

ಸತ್ಯಾಂಶ: ಕುಷ್ಠ ರೋಗವು ಸಾಮಾನ್ಯವಾಗಿ ಸಾಂಕ್ರಾಮಿಕವಲ್ಲ. ಜಾಗತಿಕ ಜನಸಂಖ್ಯೆಯಲ್ಲಿ ಸುಮಾರು ಶೇ. 95ರಷ್ಟು ಜನರು ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಒಂದು ವೇಳೆ ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲದ ನಿಕಟ ಸಂಪರ್ಕ ಹೊಂದಿದ್ದರೆ ಈ ಸಮಸ್ಯೆ ಹರಡುವ ಸಾಧ್ಯತೆ ಇರುತ್ತದೆ. ಕೈ ಕುಲುಕುವುದು ಅಥವಾ ಕುಷ್ಠ ರೋಗವಿರುವ ಯಾರನ್ನಾದರೂ ಸ್ಪರ್ಶಿಸುವುದರಿಂದ ಈ ರೋಗ ಅಂಟುವುದಿಲ್ಲ. ಈ ರೋಗದ ಲಕ್ಷಣವು ನಿಧಾನವಾಗಿ ಕಂಡುಬರುತ್ತದೆ. ಅಲ್ಲದೆ, ಈ ಸೋಂಕಿನ ಮೂಲವನ್ನು ಪತ್ತೆ ಹಚ್ಚುವುದು ಕೂಡ ಒಂದು ಸವಾಲಿನ ಕೆಲಸ. 2ರಿಂದ 4 ವಾರಗಳ ಚಿಕಿತ್ಸೆಯ ಬಳಿಕ ಈ ರೋಗವು ಸಾಂಕ್ರಾಮಿಕವಾಗಿರುವುದಿಲ್ಲ.

ಇದನ್ನೂ ಓದಿ: Mumps Virus: ಮಂಗನಬಾವು ಎಂದರೇನು?; ಈ ರೋಗ ಮಕ್ಕಳಿಗೆ ಅಪಾಯಕಾರಿಯೇ?

ತಪ್ಪು ಕಲ್ಪನೆ 2: ಕುಷ್ಠರೋಗ ಬಂದರೆ ವಿರೂಪಗೊಳ್ಳುವಿಕೆ ಕಂಡುಬರುತ್ತದೆ ಮತ್ತು ಅದನ್ನು ಗುಣಪಡಿಸಲು ಸಾಧ್ಯವಿಲ್ಲ.

ಸತ್ಯಾಂಶ: ಈ ರೋಗದ ಲಕ್ಷಣಗಳು ಕಂಡುಬಂದಾಗ ಚಿಕಿತ್ಸೆ ನೀಡದೆ ಇದ್ದರೆ ಮಾತ್ರ ವಿರೂಪಗೊಳ್ಳುತ್ತಾ ಹೋಗುತ್ತದೆ. ಮಲ್ಟಿ-ಡ್ರಗ್ ಥೆರಪಿ (MDT) ಮೂಲಕ ಕುಷ್ಠರೋಗವನ್ನು ವಿರೂಪಗಳಿಲ್ಲದೆ ಪರಿಣಾಮಕಾರಿಯಾಗಿ ಗುಣಪಡಿಸಬಹುದು. ಚಿಕಿತ್ಸೆಯನ್ನು ತ್ವರಿತವಾಗಿ ಪ್ರಾರಂಭಿಸುವುದು ಕೂಡ ಬಹಳ ಮುಖ್ಯ.

ತಪ್ಪು ಕಲ್ಪನೆ 3: ಇದು ಹೆಚ್ಚಾಗಿ ಆರ್ಥಿಕವಾಗಿ ದುರ್ಬಲರಾಗಿರುವವರ ಮೇಲೆ ಪರಿಣಾಮ ಬೀರುತ್ತದೆ.

ಸತ್ಯಾಂಶ: ಕುಷ್ಠ ರೋಗವು ಬ್ಯಾಕ್ಟೀರಿಯಾದ ಸೋಂಕಿನಿಂದಾಗಿ ಕಾಣಿಸಿಕೊಳ್ಳುತ್ತದೆ. ಇದು ಹಣಕಾಸಿನ ಸ್ಥಿತಿ, ವಯಸ್ಸು ಅಥವಾ ಲಿಂಗವನ್ನು ಆಧರಿಸಿ ಬರುವುದಿಲ್ಲ.

ತಪ್ಪು ಕಲ್ಪನೆ 4: ಕುಷ್ಠ ರೋಗವು ದೇವರ ಶಾಪ ಅಥವಾ ಶಿಕ್ಷೆ.

ಸತ್ಯಾಂಶ: ಕುಷ್ಠ ರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾದಿಂದ ಹರಡುತ್ತದೆ. ಪರಿಸರ ಅಥವಾ ಸೋಂಕಿತ ವ್ಯಕ್ತಿಯ ಮೂಲಕ ಹರಡುತ್ತದೆ. ಇದೊಂದು ದೇವರು ನೀಡುವ ಶಿಕ್ಷೆಯಲ್ಲ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 29 January 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್