AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾಸಕೋಶದ ಕ್ಯಾನ್ಸರ್: ಭಯ ಬೇಡ, ಇಷ್ಟು ಮಾಡಿ ಸಾಕು

ಕ್ಯಾನ್ಸರ್ ಎಂಬ ಪದವೇ ಭಯ ಹುಟ್ಟಿಸುತ್ತದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಡೆಯುವ ಪ್ರಯತ್ನ ಎಲ್ಲರೂ ಮಾಡಬೇಕಾಗುತ್ತದೆ. ಅದಕ್ಕಾಗಿಯೇ ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸಲಾಗುತ್ತದೆ. ಈ ದಿನ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಬೆಂಬಲಿಸಲು ಮೀಸಲಿರಿಸಲಾಗಿದೆ.

ಶ್ವಾಸಕೋಶದ ಕ್ಯಾನ್ಸರ್: ಭಯ ಬೇಡ, ಇಷ್ಟು ಮಾಡಿ ಸಾಕು
World Lung Cancer Day 2025
ಪ್ರೀತಿ ಭಟ್​, ಗುಣವಂತೆ
|

Updated on: Jul 31, 2025 | 8:32 PM

Share

ಜಾಗತಿಕವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕ್ಯಾನ್ಸರ್ (Cancer) ಅಗ್ರಸ್ಥಾನದಲ್ಲಿದೆ. ಅದರಲ್ಲಿಯೂ ಈ ಶ್ವಾಸಕೋಶದ ಕ್ಯಾನ್ಸರ್ ಗೆ (Lung Cancer) ಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಡೆಯುವ ಪ್ರಯತ್ನ ಎಲ್ಲರೂ ಮಾಡಬೇಕಾಗುತ್ತದೆ ಆಗ ಮಾತ್ರ ಇಂತಹ ಮಹಾಮಾರಿ ಕಾಯಿಲೆಗಳನ್ನು ತಡೆಯುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕಾಗಿಯೇ ವಿಶ್ವ ಶ್ವಾಸಕೋಶದ ಕ್ಯಾನ್ಸರ್ (World Lung Cancer Day) ದಿನವನ್ನು ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸಲಾಗುತ್ತದೆ. ಈ ದಿನ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಬೆಂಬಲಿಸಲು ಮೀಸಲಿರಿಸಲಾಗಿದೆ.

ಈ ದಿನದ ಉದ್ದೇಶವೇನು?

ಶ್ವಾಸಕೋಶದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ಅದರ ಕಾರಣಗಳು ಮತ್ತು ಲಕ್ಷಣಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಚಿಕಿತ್ಸೆಯ ಆಯ್ಕೆಗಳ ಬಗ್ಗೆ ತಿಳಿಸುವುದು ಈ ದಿನ ಆಚರಣೆ ಮಾಡುವುದರ ಮುಖ್ಯ ಉದ್ದೇಶವಾಗಿದೆ. ಮಾತ್ರವಲ್ಲ ಈ ಕುರಿತು ಹೆಚ್ಚಿನ ಸಂಶೋಧನೆ ನಡೆಸಲು ಹಣವನ್ನು ಸಂಗ್ರಹಿಸಲು ಮತ್ತು ರೋಗವನ್ನು ತಡೆಗಟ್ಟುವ ಮಾರ್ಗಗಳನ್ನು ಅನ್ವೇಷಿಸಲು ಒಂದು ಅವಕಾಶವಾಗಿದೆ. ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವವರನ್ನು ಬೆಂಬಲಿಸುವುದು ಮತ್ತು ಅವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಿ ಅವರ ಕುಟುಂಬಗಳಿಗೆ ಬೆಂಬಲ ನೀಡುವುದು ಬಹಳ ಮುಖ್ಯ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಇದೊಂದು ಜಾಗತಿಕ ಆರೋಗ್ಯ ಸಮಸ್ಯೆಯಾಗುತ್ತಿದ್ದು ಪ್ರತಿ ವರ್ಷ ಅನೇಕ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಶ್ವಾಸಕೋಶದ ಕ್ಯಾನ್ಸರ್ ಮತ್ತು ಗೆಡ್ಡೆಯ ನಡುವಿನ ವ್ಯತ್ಯಾಸವೇನು? ಎರಡರ ಲಕ್ಷಣಗಳನ್ನು ತಿಳಿಯಿರಿ

ಇದನ್ನೂ ಓದಿ
Image
ಪ್ರತಿದಿನ ಕಾಫಿ ಕುಡಿಯುವುದರಿಂದ ಏನೆಲ್ಲಾ ಆಗುತ್ತೆ ಗೊತ್ತಾ?
Image
ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಂತೆ
Image
ಈ ಆಯುರ್ವೇದ ಅಭ್ಯಾಸಗಳನ್ನು ಅನುಸರಿಸಿದರೆ ಲಿವರ್ ಆರೋಗ್ಯವಾಗಿರುತ್ತೆ!
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ

ಲಕ್ಷಣಗಳು ಹೇಗಿರುತ್ತವೆ?

  • ಕೆಮ್ಮು
  • ಉಸಿರಾಡಲು ಕಷ್ಟವಾಗುವುದು
  • ಕೆಮ್ಮುವಾಗ ರಕ್ತ ಕಂಡು ಬರುವುದು
  • ಬೆನ್ನು ನೋವು
  • ಖಿನ್ನತೆ ಹಾಗೂ ಮನಸ್ಥಿತಿಯಲ್ಲಿನ ಬದಲಾವಣೆಗಳು
  • ವಿಪರೀತವಾದ ತೂಕ ನಷ್ಟ
  • ಆಯಾಸ
  • ಎದೆ ನೋವು
  • ತಲೆ ನೋವು

ಶ್ವಾಸಕೋಶದ ಕ್ಯಾನ್ಸರ್ ತಡೆಯಲು ಇಲ್ಲಿವೆ ಸಲಹೆಗಳು:

  • ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್‌ನ ಮುಖ್ಯ ಕಾರಣವಾಗಿದೆ. ನೀವು ಕೂಡ ಧೂಮಪಾನ ಮಾಡುತ್ತಿದ್ದರೆ, ತಕ್ಷಣವೇ ಈ ಅಭ್ಯಾಸವನ್ನು ತ್ಯಜಿಸಲು ಪ್ರಯತ್ನಿಸಿ. ಬೇಕಾದಲ್ಲಿ ವೃತ್ತಿಪರ ಸಹಾಯವನ್ನು ಪಡೆಯಿರಿ, ಅದಕ್ಕೆ ಹಿಂಜರಿಯಬೇಡಿ. ಧೂಮಪಾನ ತ್ಯಜಿಸುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ.
  • ವಾಯುಮಾಲಿನ್ಯ ಕೂಡ ಶ್ವಾಸಕೋಶದ ಕ್ಯಾನ್ಸರ್‌ಗೆ ಒಂದು ಅಪಾಯಕಾರಿ ಅಂಶವಾಗಿದೆ. ಹಾಗಾಗಿ ಹೊರಗೆ ಹೋಗುವಾಗ ಮಾಸ್ಕ್ ಧರಿಸಿ.
  • ಕೆಲವು ರಾಸಾಯನಿಕಗಳು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾಗಿ ಕೆಲಸದ ಸ್ಥಳದಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ.
  • ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ. ನಿಮ್ಮ ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಧಾನ್ಯಗಳಿರಲಿ. ಜೊತೆಗೆ ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ. ಇವುಗಳು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
  • ನಿಯಮಿತವಾಗಿ ವ್ಯಾಯಾಮ ಮಾಡಿ. ಏಕೆಂದರೆ ನಿಯಮಿತ ವ್ಯಾಯಾಮ ನಿಮ್ಮ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಶ್ವಾಸಕೋಶದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಲು ನಿಯಮಿತ ವೈದ್ಯಕೀಯ ತಪಾಸಣೆ ಮುಖ್ಯವಾಗಿದೆ. ಹಾಗಾಗಿ ವೈದ್ಯರೊಂದಿಗೆ ಸಮಾಲೋಚಿಸಿ ಅಗತ್ಯವಿರುವ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ. ಈ ಸಲಹೆಗಳನ್ನು ಅನುಸರಿಸುವುದರಿಂದ, ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ