
ಜಾಗತಿಕವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕ್ಯಾನ್ಸರ್ (Cancer) ಅಗ್ರಸ್ಥಾನದಲ್ಲಿದೆ. ಅದರಲ್ಲಿಯೂ ಈ ಶ್ವಾಸಕೋಶದ ಕ್ಯಾನ್ಸರ್ ಗೆ (Lung Cancer) ಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಡೆಯುವ ಪ್ರಯತ್ನ ಎಲ್ಲರೂ ಮಾಡಬೇಕಾಗುತ್ತದೆ ಆಗ ಮಾತ್ರ ಇಂತಹ ಮಹಾಮಾರಿ ಕಾಯಿಲೆಗಳನ್ನು ತಡೆಯುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕಾಗಿಯೇ ವಿಶ್ವ ಶ್ವಾಸಕೋಶದ ಕ್ಯಾನ್ಸರ್ (World Lung Cancer Day) ದಿನವನ್ನು ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸಲಾಗುತ್ತದೆ. ಈ ದಿನ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಬೆಂಬಲಿಸಲು ಮೀಸಲಿರಿಸಲಾಗಿದೆ.
ಶ್ವಾಸಕೋಶದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ಅದರ ಕಾರಣಗಳು ಮತ್ತು ಲಕ್ಷಣಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಚಿಕಿತ್ಸೆಯ ಆಯ್ಕೆಗಳ ಬಗ್ಗೆ ತಿಳಿಸುವುದು ಈ ದಿನ ಆಚರಣೆ ಮಾಡುವುದರ ಮುಖ್ಯ ಉದ್ದೇಶವಾಗಿದೆ. ಮಾತ್ರವಲ್ಲ ಈ ಕುರಿತು ಹೆಚ್ಚಿನ ಸಂಶೋಧನೆ ನಡೆಸಲು ಹಣವನ್ನು ಸಂಗ್ರಹಿಸಲು ಮತ್ತು ರೋಗವನ್ನು ತಡೆಗಟ್ಟುವ ಮಾರ್ಗಗಳನ್ನು ಅನ್ವೇಷಿಸಲು ಒಂದು ಅವಕಾಶವಾಗಿದೆ. ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವವರನ್ನು ಬೆಂಬಲಿಸುವುದು ಮತ್ತು ಅವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಿ ಅವರ ಕುಟುಂಬಗಳಿಗೆ ಬೆಂಬಲ ನೀಡುವುದು ಬಹಳ ಮುಖ್ಯ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಇದೊಂದು ಜಾಗತಿಕ ಆರೋಗ್ಯ ಸಮಸ್ಯೆಯಾಗುತ್ತಿದ್ದು ಪ್ರತಿ ವರ್ಷ ಅನೇಕ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯವಾಗಿದೆ.
ಇದನ್ನೂ ಓದಿ: ಶ್ವಾಸಕೋಶದ ಕ್ಯಾನ್ಸರ್ ಮತ್ತು ಗೆಡ್ಡೆಯ ನಡುವಿನ ವ್ಯತ್ಯಾಸವೇನು? ಎರಡರ ಲಕ್ಷಣಗಳನ್ನು ತಿಳಿಯಿರಿ
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ