World Mental Health Day 2024: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇತಿಹಾಸ, ಥೀಮ್ ಕುರಿತ ಮಾಹಿತಿ ಇಲ್ಲಿದೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 10, 2024 | 9:27 AM

ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಸಾಮಾನ್ಯವಾಗಿ ಇದು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದರು ಕೂಡ ಇದಕ್ಕೆ ಸರಿಯಾದ ಮದ್ದನ್ನು ಮಾಡುವ ಬದಲು ಅದನ್ನು ನಿರ್ಲಕ್ಷಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ನಕರಾತ್ಮಕ ಪರಿಣಾಮವನ್ನು ಬೀರಬಹುದು. ಇಂದು ಬದಲಾಗುತ್ತಿರುವ ಜೀವನಶೈಲಿಯ ನಡುವೆ ಮಾನಸಿಕ ಆರೋಗ್ಯ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಮಾನಸಿಕ ಆರೋಗ್ಯದ ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಈ ದಿನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.

World Mental Health Day 2024: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇತಿಹಾಸ, ಥೀಮ್ ಕುರಿತ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us on

ಇತ್ತೀಚಿನ ದಿನಗಳಲ್ಲಿ ಖಿನ್ನತೆ, ಒತ್ತಡ ಮುಂತಾದ ಮಾನಸಿಕ ಆರೋಗ್ಯಕ್ಕೆ (Mental Health) ಸಂಬಂಧಿಸಿದ ಸಮಸ್ಯೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಸಾಮಾನ್ಯವಾಗಿ ಇದು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದರು ಕೂಡ ಇದಕ್ಕೆ ಸರಿಯಾದ ಮದ್ದನ್ನು ಮಾಡುವ ಬದಲು ಅದನ್ನು ನಿರ್ಲಕ್ಷಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ನಕರಾತ್ಮಕ ಪರಿಣಾಮವನ್ನು ಬೀರಬಹುದು. ಇಂದು ಬದಲಾಗುತ್ತಿರುವ ಜೀವನಶೈಲಿಯ ನಡುವೆ ಮಾನಸಿಕ ಆರೋಗ್ಯ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಮಾನಸಿಕ ಆರೋಗ್ಯದ ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಈ ದಿನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.

ಈ ದಿನದ ಇತಿಹಾಸ:

ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ (WFMH) ಸಂಸ್ಥೆಯ ಉಪಕ್ರಮದ ಮೇರೆಗೆ ಅಕ್ಟೋಬರ್ 10, 1992 ರಲ್ಲಿ ವಿಶ್ವಸಂಸ್ಥೆಯು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲು ಪ್ರಾರಂಭಿಸಿತು. ಜಾಗತಿಕವಾಗಿ ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿತ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಶಿಕ್ಷಣ ನೀಡುವುದಾಗಿದೆ.

ಈ ಬಾರಿಯ ಥೀಮ್

ಈ ಬಾರಿ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ’ ಎಂಬ ವಿಷಯದ ಮೇಲೆ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಉದ್ಯೋಗಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಈ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ.

ಏಕೆಂದರೆ ಮಾನಸಿಕ ಆರೋಗ್ಯ ಹದಗೆಟ್ಟರೆ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಆದಷ್ಟು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ.

ಇದನ್ನೂ ಓದಿ: ಈ ಆಹಾರಗಳು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ

ಈ ದಿನದ ಮಹತ್ವ

ಸಾಮಾನ್ಯವಾಗಿ ಖಿನ್ನತೆ ಮತ್ತು ಒತ್ತಡವನ್ನು ಸಣ್ಣ ಸಮಸ್ಯೆ ಎಂದು ಪರಿಗಣಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ತಪ್ಪು. ಮಾನಸಿಕ ಆರೋಗ್ಯ ಹದಗೆಟ್ಟರೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಇದೊಂದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಇದರಿಂದಾಗಿ ಪ್ರತಿ ವರ್ಷ ನೂರಾರು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಮಾನಸಿಕ ಆರೋಗ್ಯ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಈ ದಿನದಂದು ಜಾಗತಿಕವಾಗಿ ಸೆಮಿನಾರ್, ಕಾರ್ಯಗಾರಗಳು ಮತ್ತು ಸಮ್ಮೇಳನಗಳಂತಹ ವಿವಿಧ ಚಟುವಟಟಿಕೆಗಳನ್ನು ನಡೆಸಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ