World Parkinson’s Day 2023: ಪಾರ್ಕಿನ್ಸನ್ ಕಾಯಿಲೆಗೆ ಕಾರಣ, ಲಕ್ಷಣಗಳು ಮತ್ತು ಚಿಕಿತ್ಸೆಗಳ ಕುರಿತು ಮಾಹಿತಿ ಇಲ್ಲಿದೆ

ಡಾ. ಜೇಮ್ಸ್ ಪಾರ್ಕಿನ್ಸನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಏಪ್ರಿಲ್ 11ರಂದು ​​ಈ ದಿನವನ್ನು ಆಚರಿಸಲಾಗುತ್ತದೆ. ಪಾರ್ಕಿನ್ಸನ್ ಕಾಯಿಲೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ.

World Parkinson’s Day 2023: ಪಾರ್ಕಿನ್ಸನ್ ಕಾಯಿಲೆಗೆ ಕಾರಣ, ಲಕ್ಷಣಗಳು ಮತ್ತು ಚಿಕಿತ್ಸೆಗಳ ಕುರಿತು ಮಾಹಿತಿ ಇಲ್ಲಿದೆ
ಪಾರ್ಕಿನ್ಸನ್ ಕಾಯಿಲೆಗೆ Image Credit source: University of Bath
Follow us
ಅಕ್ಷತಾ ವರ್ಕಾಡಿ
| Updated By: Digi Tech Desk

Updated on:Apr 11, 2023 | 10:37 AM

ಪಾರ್ಕಿನ್ಸನ್ ಕಾಯಿಲೆ(Parkinson’s Disease) ಎಂಬುದು ಮೆದುಳಿಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಇದು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ವೈದ್ಯ ಮತ್ತು ವಿಜ್ಞಾನಿ ಡಾ. ಜೇಮ್ಸ್ ಪಾರ್ಕಿನ್ಸನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಏಪ್ರಿಲ್ 11ರಂದು ​​ಈ ದಿನವನ್ನು ಆಚರಿಸಲಾಗುತ್ತದೆ. ಪಾರ್ಕಿನ್ಸನ್ ಕಾಯಿಲೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ. ವಿಶ್ವ ಆರೋಗ್ಯ ಸಂಸ್ಥೆ(WHO) ಮತ್ತು ಯುರೋಪಿಯನ್ ಪಾರ್ಕಿನ್ಸನ್ ಡಿಸಿಸ್ಸ್​​​​​​ ಅಸೋಸಿಯೇಷನ್ ​​(EPDA) ಸಹಯೋಗದೊಂದಿಗೆ ಮೊದಲ ವಿಶ್ವ ಪಾರ್ಕಿನ್ಸನ್ ದಿನವನ್ನು 1997 ರಲ್ಲಿ ಆಚರಿಸಲಾಯಿತು.

ಪಾರ್ಕಿನ್ಸನ್ ಕಾಯಿಲೆಗೆ ಕಾರಣವೇನು?

ಸಾಮಾನ್ಯವಾಗಿ ವಯಸ್ಸಾದಂತೆ ಕೆಲವರಿಗೆ ಮೆದುಳಿನ ನರಮಂಡಲದಲ್ಲಾಗುವ ಬದಲಾವಣೆಯಿಂದಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ.  ಚಲನೆಯನ್ನು ನಿಯಂತ್ರಿಸುವ ಮೆದುಳಿನ ಪ್ರದೇಶವು ದುರ್ಬಲಗೊಂಡಾಗ ಪಾರ್ಕಿನ್ಸನ್ ಕಾಯಿಲೆಗೆ ಕಾರಣವಾಗುತ್ತದೆ. ಕಾಲಾನಂತರದಲ್ಲಿ ಉಲ್ಬಣಗೊಳ್ಳುತ್ತಿದ್ದಂತೆ ರೋಗಿಗೆ ನಡೆಯಲು ಮತ್ತು ಮಾತನಾಡಲು ಕಷ್ಟವಾಗಬಹುದು. ಅವರು ಮಾನಸಿಕ ಮತ್ತು ನಡವಳಿಕೆಯ ಬದಲಾವಣೆಗಳು, ನಿದ್ರೆಯ ಸಮಸ್ಯೆಗಳು, ಖಿನ್ನತೆ, ನೆನಪಿನ ಶಕ್ತಿಯ ತೊಂದರೆಗಳು ಮತ್ತು ಆಯಾಸ ಕಂಡುಬರುತ್ತದೆ.

ಪಾರ್ಕಿನ್ಸನ್ ಕಾಯಿಲೆಯ ಲಕ್ಷಣಗಳು:

  • ಕೈ ಕಾಲು, ತಲೆಯಲ್ಲಿ ನಡುಕ
  • ಸ್ನಾಯುಗಳ ಬಿಗಿತ
  • ಚಲನೆಯ ನಿಧಾನತೆ
  • ಖಿನ್ನತೆ ಮತ್ತು ಭಾವನಾತ್ಮಕ ಬದಲಾವಣೆಗಳು
  • ನುಂಗಲು, ಅಗಿಯಲು ಮತ್ತು ಮಾತನಾಡಲು ತೊಂದರೆ
  • ಮೂತ್ರದ ತೊಂದರೆಗಳು ಅಥವಾ ಮಲಬದ್ಧತೆ
  • ಚರ್ಮದಲ್ಲಿ ಸಮಸ್ಯೆ

ಇದನ್ನೂ ಓದಿ: ನಿರ್ದಿಷ್ಟ ಸ್ತನ ವೈಪರೀತ್ಯಗಳನ್ನು ಪತ್ತೆಹಚ್ಚಲು ಅಲ್ಟ್ರಾಸೌಂಡ್ ಪರಿಣಾಮಕಾರಿ: ಅಧ್ಯಯನ

ಪಾರ್ಕಿನ್ಸನ್ ಕಾಯಿಲೆಗೆ ಚಿಕಿತ್ಸೆ:

ಪಾರ್ಕಿನ್ಸನ್ ಕಾಯಿಲೆಗೆ ಯಾವುದೇ ಚಿಕಿತ್ಸೆ ಇಲ್ಲದಿದ್ದರೂ, ಔಷಧಿಗಳು, ಶಸ್ತ್ರಚಿಕಿತ್ಸಾ ಚಿಕಿತ್ಸೆ ಮತ್ತು ಇತರ ಚಿಕಿತ್ಸೆಗಳು ಸಾಮಾನ್ಯವಾಗಿ ಕೆಲವು ರೋಗಲಕ್ಷಣಗಳನ್ನು ನಿವಾರಿಸಬಹುದು. ಕಾರ್ಬಿಡೋಪಾ ಮತ್ತು ಲೆವೊಡೋಪಾ ಟ್ಯಾಬ್ಲೆಟ್​​ಗಳನ್ನು ಪಾರ್ಕಿನ್ಸನ್ ಕಾಯಿಲೆಗೆ ತುತ್ತಾಗಿರುವ ರೋಗಿಗಳಿಗೆ ನೀಡಲಾಗುತ್ತದೆ. ಈ ಚಿಕಿತ್ಸೆಯು ಕೆಲವು ಅಡ್ಡಪರಿಣಾಮಗಳನ್ನು ತಡೆಯುತ್ತದೆ ಅಥವಾ ಕಡಿಮೆ ಮಾಡುತ್ತದೆ. ವಾಕರಿಕೆ, ವಾಂತಿ, ಕಡಿಮೆ ರಕ್ತದೊತ್ತಡ ಮತ್ತು ಚಡಪಡಿಕೆ – ಮತ್ತು ರೋಗಲಕ್ಷಣಗಳನ್ನು ಸುಧಾರಿಸಲು ಅಗತ್ಯವಿರುವ ಲೆವೊಡೋಪಾ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಆದರೆ ಪಾರ್ಕಿನ್ಸನ್ ರೋಗಿಗಳು ತಮ್ಮ ವೈದ್ಯರಿಗೆ ಹೇಳದೆ ಲೆವೊಡೋಪಾವನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬಾರದು. ಔಷಧವನ್ನು ಇದ್ದಕ್ಕಿದ್ದಂತೆ ನಿಲ್ಲಿಸುವುದರಿಂದ ಉಸಿರಾಟದ ತೊಂದರೆಯಂತಹ ಗಂಭೀರ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:28 am, Tue, 11 April 23

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ