Yoga For Dengue: ಡೆಂಗ್ಯೂನಿಂದ ವೇಗವಾಗಿ ಚೇತರಿಸಿಕೊಳ್ಳಲು ಈ ಯೋಗಾಸನಗಳನ್ನು ಟ್ರೈ ಮಾಡಿ

ಡೆಂಗ್ಯೂ ಚಿಕಿತ್ಸೆಯ ನಂತರವೂ, ದೇಹ ಮೊದಲಿನ ಸ್ಥಿತಿಗೆ ಮರಳಲು ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಆದರೆ ಕೆಲವು ಯೋಗಾಸನಗಳು ನಿಮಗೆ ಜ್ವರದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಡೆಂಗ್ಯೂನಿಂದ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಕಾರಿಯಾಗಿರುವ ಕೆಲವು ಯೋಗಾಸನಗಳ ಬಗ್ಗೆ ಮಾಹಿತಿ ಇಲ್ಲಿದೆ.

Yoga For Dengue: ಡೆಂಗ್ಯೂನಿಂದ ವೇಗವಾಗಿ ಚೇತರಿಸಿಕೊಳ್ಳಲು ಈ ಯೋಗಾಸನಗಳನ್ನು ಟ್ರೈ ಮಾಡಿ
ವಿಶ್ವ ಯೋಗ ದಿನ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 21, 2024 | 3:44 PM

ಈ ಸಮಯದಲ್ಲಿ ಮನೆ ಸುತ್ತಮುತ್ತ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಲು ಪ್ರಾರಂಭಿಸುವುದಲ್ಲದೆ ಅನೇಕ ರೋಗಗಳಿಗೆ ಕಾರಣವಾಗಬಹುದು. ಅದರಲ್ಲಿಯೂ ಡೆಂಗ್ಯೂ ಮತ್ತು ಮಲೇರಿಯಾ ಮಳೆಗಾಲದಲ್ಲಿ ಹೆಚ್ಚಾಗುತ್ತದೆ, ಈ ರೋಗಗಳು ಆರಂಭಿಕ ಚಿಕಿತ್ಸೆ ನೀಡದಿದ್ದರೆ ಮಾರಣಾಂತಿಕವಾಗಬಹುದು. ಹಾಗಾಗಿ ಡೆಂಗ್ಯೂವನ್ನು ತಡೆಗಟ್ಟುವ ಮಾರ್ಗಗಳನ್ನು ಕಂಡು ಕೊಳ್ಳುವುದು ಉತ್ತಮ. ಇದು ಒಂದು ವೈರಲ್ ಜ್ವರವಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ. ಬಳಿಕ ಅತಿಯಾದ ಜ್ವರ, ಮೈಕೈ ನೋವು, ತಲೆನೋವು, ಗಂಟಲು ನೋವು ಮತ್ತು ಶೀತಕ್ಕೆ ಕಾರಣವಾಗಬಹುದು. ಈ ಅವಧಿಯಲ್ಲಿ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ. ಡೆಂಗ್ಯೂ ಚಿಕಿತ್ಸೆಯ ನಂತರವೂ, ದೇಹ ಮೊದಲಿನ ಸ್ಥಿತಿಗೆ ಮರಳಲು ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಆದರೆ ಕೆಲವು ಯೋಗಾಸನಗಳು ನಿಮಗೆ ಜ್ವರದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಡೆಂಗ್ಯೂನಿಂದ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಕಾರಿಯಾಗಿರುವ ಕೆಲವು ಯೋಗಾಸನಗಳ ಬಗ್ಗೆ ಮಾಹಿತಿ ಇಲ್ಲಿದೆ.

ಪಶ್ಚಿಮೋತ್ಥಾನಾಸನ

ಡೆಂಗ್ಯೂನಿಂದ ತ್ವರಿತವಾಗಿ ಚೇತರಿಸಿಕೊಳ್ಳಲು ಪಶ್ಚಿಮೋತ್ಥಾನಾಸನದ ಅಭ್ಯಾಸವು ಪ್ರಯೋಜನಕಾರಿಯಾಗಿದೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವವರು ಸಹ ಈ ಯೋಗಾಸನದಿಂದ ಪರಿಹಾರ ಪಡೆದುಕೊಳ್ಳಬಹುದು. ದೇಹ ಮತ್ತು ಮನಸ್ಸನ್ನು ಶಾಂತವಾಗಿಡಲು ಮತ್ತು ಆಯಾಸವನ್ನು ನಿವಾರಿಸಲು ಪಶ್ಚಿಮೋತ್ಥಾನಾಸನವನ್ನು ನಿಯಮಿತವಾಗಿ ಅಭ್ಯಾಸ ಮಾಡಬೇಕು.

ಪ್ರಾಣಾಯಾಮದ ಅಭ್ಯಾಸ

ಡೆಂಗ್ಯೂನಿಂದ ತ್ವರಿತವಾಗಿ ಚೇತರಿಸಿಕೊಳ್ಳಲು, ಉಸಿರಾಟದ ವ್ಯಾಯಾಮ ಮತ್ತು ಪ್ರಾಣಾಯಾಮವನ್ನು ಮಾಡಬೇಕು. ಇದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಒತ್ತಡವನ್ನು ನಿವಾರಿಸುವಲ್ಲಿಯೂ ಪರಿಣಾಮಕಾರಿಯಾಗಿದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು, ದೇಹವನ್ನು ವಿಶ್ರಾಂತಿಗೊಳಿಸಲು ಮತ್ತು ಉತ್ತಮ ನಿದ್ರೆಗೆ ಭ್ರಮರಿ ಪ್ರಾಣಾಯಾಮ ಮಾಡಿ. ಇದಲ್ಲದೆ, ಕಪಾಲಭಾತಿ ಅಭ್ಯಾಸವೂ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಶಿಶು ಆರೋಗ್ಯವಾಗಿ ಬೆಳೆಯಲು ಪ್ರಸವಪೂರ್ವ ಸಮಯದಲ್ಲಿ ಈ ಆಸನ ಮಾಡಿ

ವಜ್ರಾಸನ

ಈ ಆಸನವು ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಈ ಆಸನದಿಂದ ದೇಹಕ್ಕೆ ನೆಮ್ಮದಿ ಸಿಗುತ್ತದೆ. ಜೊತೆಗೆ ಮೊಣಕಾಲು ನೋವನ್ನು ನಿವಾರಿಸಲು, ತೊಡೆಯ ಸ್ನಾಯುಗಳನ್ನು ಬಲಪಡಿಸಲು ಮತ್ತು ಬೆನ್ನುನೋವನ್ನು ಕಡಿಮೆ ಮಾಡಲು ವಜ್ರಾಸನವನ್ನು ನಿಯಮಿತವಾಗಿ ಅಭ್ಯಾಸ ಮಾಡಿ. ಡೆಂಗ್ಯೂದಿಂದಾಗಿ, ದೇಹದ ಅನೇಕ ಭಾಗದಲ್ಲಿ ನೋವಿರುತ್ತದೆ ಈ ವಜ್ರಾಸನವು ಇದಕ್ಕೆಲ್ಲಾ ಪರಿಹಾರ ನೀಡುತ್ತದೆ.

ಸೂಚನೆ: ಯೋಗ ತಜ್ಞರ ಸಲಹೆಯ ಆಧಾರದ ಮೇಲೆ ಈ ಆಸನಗಳನ್ನು ಪ್ರಯತ್ನಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:13 am, Fri, 21 June 24

ತಾಜಾ ಸುದ್ದಿ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್