Health Tips: ಈ ಮೂರು ಸಮಯದಲ್ಲಿ ನೀರು ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಇಂದೇ ಅದನ್ನು ಬದಲಾಯಿಸಿ

Drinking Water: ಆಹಾರ ತಿನ್ನುವ ಅರ್ಧ ಗಂಟೆ ಮೊದಲು ಮತ್ತು ತಿಂದ ನಂತರ ಅರ್ಧ ಗಂಟೆ ನೀರು ಕುಡಿಯಬೇಡಿ ಎಂದು ವೈದ್ಯರು ಹೇಳುತ್ತಾರೆ. ಕುಡಿಯುವ ನೀರು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

Health Tips: ಈ ಮೂರು ಸಮಯದಲ್ಲಿ ನೀರು ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಇಂದೇ ಅದನ್ನು ಬದಲಾಯಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 07, 2021 | 7:49 AM

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವೈದ್ಯರು ಕೂಡ ಅದನ್ನೇ ಶಿಫಾರಸು ಮಾಡುತ್ತಾರೆ. ಆದರೆ, ಇದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳುವುದು ಎಷ್ಟು ನಿಜವೋ ಅದೇ ರೀತಿ ಸರಿಯಾದ ಸಮಯಕ್ಕೆ ಬದಲಾಗಿ ನೀರು (Water) ಕುಡಿದರೆ ದೇಹಕ್ಕೆ ಅಷ್ಟೇ ಹಾನಿಕಾರಕ. ಹೀಗಾಗಿ ನೀರು ಕುಡಿಯುವ ಸಮಯದ ಬಗ್ಗೆ ಗಮನಹರಿಸಿ.

ಮಲಗುವ ಮುನ್ನ ವೈದ್ಯಕೀಯ ತಜ್ಞರು ಮಲಗುವ ಮುನ್ನ ನೀರು ಕುಡಿಯಬೇಡಿ ಎಂದು ಸಲಹೆ ನೀಡುತ್ತಾರೆ. ಇದರ ಹಿಂದೆ ಎರಡು ಕಾರಣಗಳಿವೆ. ಒಂದು, ಇದು ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ನೀವು ಆಗಾಗ್ಗೆ ಶೌಚಾಲಯಕ್ಕೆ ಹೋಗಬೇಕಾಗುತ್ತದೆ. ಎರಡನೆಯದಾಗಿ ನಿಮ್ಮ ಮೂತ್ರಪಿಂಡದ ಕಾರ್ಯವು ರಾತ್ರಿಯಲ್ಲಿ ತುಂಬಾ ನಿಧಾನವಾಗಿರುತ್ತದೆ. ಪರಿಣಾಮವಾಗಿ ಇದು ಮುಖದ ಮೇಲೆ ಊತವನ್ನು ಉಂಟುಮಾಡಬಹುದು.

ಆಹಾರ ಸೇವನೆಯ ಮೊದಲು ಆಹಾರ ತಿನ್ನುವ ಅರ್ಧ ಗಂಟೆ ಮೊದಲು ಮತ್ತು ತಿಂದ ನಂತರ ಅರ್ಧ ಗಂಟೆ ನೀರು ಕುಡಿಯಬೇಡಿ ಎಂದು ವೈದ್ಯರು ಹೇಳುತ್ತಾರೆ. ಕುಡಿಯುವ ನೀರು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಕೆಲವು ಸಂಶೋಧನೆಗಳು ಅದನ್ನು ಸ್ಪಷ್ಟಪಡಿಸಿವೆ. ಆದರೆ ಊಟ ಮಾಡಿದ ಸ್ವಲ್ಪ ಹೊತ್ತಿನ ನಂತರ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ಊಟ ಮಾಡಿದ ಸ್ವಲ್ಪ ಸಮಯದ ನಂತರ ನೀರನ್ನು ಕುಡಿಯಲು ವೈದ್ಯರು ಶಿಫಾರಸು ಮಾಡುತ್ತಾರೆ.

ವ್ಯಾಯಾಮದ ನಡುವೆ ನೀರು ಕುಡಿಯಬೇಡಿ ನೀವು ವ್ಯಾಯಾಮ ಮಾಡುವಾಗ ನೀರನ್ನು ಕುಡಿಯಬೇಡಿ ಎಂದು ವೈದ್ಯರು ಹೇಳುತ್ತಾರೆ. ವ್ಯಾಯಾಮದ ಸಮಯದಲ್ಲಿ ದೇಹದ ಉಷ್ಣತೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆ ಸಮಯದಲ್ಲಿ ನೀರು ಕುಡಿಯುವುದರಿಂದ  ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತಲೆನೋವು ವಿವಿಧ ಆರೋಗ್ಯ ಸಮಸ್ಯೆಗಳನ್ನು ಇದು ಉಂಟುಮಾಡಬಹುದು. ಅದಕ್ಕಾಗಿಯೇ ವೈದ್ಯರು ವ್ಯಾಯಾಮದ ಸ್ವಲ್ಪ ಸಮಯದ ನಂತರ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ.

ತಿನ್ನುವಾಗ ನೀರು ಕುಡಿಯುವುದು ತಪ್ಪೇ? ಊಟಕ್ಕೆ ಅರ್ಧ ಘಂಟೆಯ ಮೊದಲು ನೀರು ಕುಡಿಯಬೇಡಿ ಎಂದು ವೈದ್ಯರು ಹೆಚ್ಚಾಗಿ ಹೇಳುತ್ತಾರೆ. ಅದರಂತೆ ಆಹಾರದೊಂದಿಗೆ ನೀರನ್ನು ಸೇವಿಸಿದರೆ, ಅದು ಬಾಯಿಯಲ್ಲಿ ಜೊಲ್ಲು ಉತ್ಪತ್ತಿಯಾಗುವುದನ್ನು ನಿಲ್ಲಿಸುತ್ತದೆ. ಆ ಮೂಲಕ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಆಹಾರ ಪೌಷ್ಟಿಕಾಂಶಗಳನ್ನು ಸರಿಯಾಗಿ ಸ್ವೀಕರಿಸುವುದಿಲ್ಲ. ಅದೇ ಸಮಯದಲ್ಲಿ, ಊಟದೊಂದಿಗೆ ನೀರು ಕುಡಿಯುವುದರಿಂದ ಅಸಿಡಿಟಿ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರಿಂದ ತೂಕ ಹೆಚ್ಚಾಗುವ ಅವಕಾಶವೂ ಇರುತ್ತದೆ.

ಆಹಾರದೊಂದಿಗೆ ನೀರು ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಕೆಲವು ಸಂಶೋಧನೆಗಳು ಮಾತ್ರ ತೋರಿಸುತ್ತವೆ. ಆದರೆ ಯಾವುದೇ ಸಂಶಯವಿಲ್ಲದೆ ಆಹಾರದ ಜೊತೆಗೆ ನೀರನ್ನು ಕುಡಿಯಬಹುದು ಎಂದು ಯುಎಸ್ ಸಂಶೋಧಕರು ಸ್ಪಷ್ಟಪಡಿಸಿದ್ದಾರೆ. ಅಮೇರಿಕನ್ ಕಾಲೇಜ್ ಆಫ್ ಮೆಡಿಸಿನ್‌ನ ಸಹಾಯಕ ಪ್ರಾಧ್ಯಾಪಕಿ ಮಿಶೆಲ್ ಪಿಕ್ಕೊ ಪ್ರಕಾರ ಆಹಾರದೊಂದಿಗೆ ನೀರು ಕುಡಿಯುವುದು ಜೀರ್ಣಕ್ರಿಯೆಗೆ ಸಮಸ್ಯೆಯಲ್ಲ.

ಇದನ್ನೂ ಓದಿ: Garam Masala Benefits: ಗರಂ ಮಸಾಲೆ ಪರಿಮಳ ಮತ್ತು ರುಚಿಗಷ್ಟೇ ಸಿಮಿತವಾಗಿಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿದೆ

Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್