AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hydrating Foods: ಬೇಸಿಗೆಯಲ್ಲಿ ನಿರ್ಜಲೀಕರಣದಿಂದ ದೂರ ಇರಲು ಈ 6 ಆಹಾರಗಳನ್ನು ಸೇವಿಸಿ

ನೀವು ನೀರಿನಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸಹ ಸೇವಿಸಬಹುದು. ಇದು ಕಲ್ಲಂಗಡಿ, ಟೊಮೆಟೊ, ಸೌತೆಕಾಯಿ, ಸ್ಟ್ರಾಬೆರಿ ಮುಂತಾದ ಆಹಾರಗಳು ಅಥವಾ ಹಣ್ನು- ತರಕಾರಿಯನ್ನು ಒಳಗೊಂಡಿರುತ್ತದೆ. ನೀರಿನಂಶವಿರುವ ಇತರ ಯಾವ ಆಹಾರಗಳನ್ನು ಸೇವಿಸಬಹುದು ಎಂಬುದಕ್ಕೆ ಇಲ್ಲಿದೆ ಉತ್ತರ.

Hydrating Foods: ಬೇಸಿಗೆಯಲ್ಲಿ ನಿರ್ಜಲೀಕರಣದಿಂದ ದೂರ ಇರಲು ಈ 6 ಆಹಾರಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Mar 25, 2022 | 7:08 AM

Share

ಬೇಸಿಗೆ ಕಾಲದಲ್ಲಿ ನಿಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅವಶ್ಯಕತೆಯಿದೆ. ಈ ಋತುವಿನಲ್ಲಿ ಹೀಟ್​ ಸ್ಟ್ರೋಕ್ (​Heat stroke) ಮತ್ತು ನಿರ್ಜಲೀಕರಣದ ಸಮಸ್ಯೆ ಸಾಮಾನ್ಯವಾಗಿರುತ್ತದೆ. ಹೈಡ್ರೇಟೆಡ್(Hydrate) ಆಗಿರಲು ಸಾಕಷ್ಟು ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ದಿನಕ್ಕೆ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಸೂಚಿಸಲಾಗುತ್ತದೆ. ಕೆಲವೊಮ್ಮೆ ನೀರು (Water) ಕುಡಿಯುವುದು ಸಾಕಾಗುವುದಿಲ್ಲ. ಆದರೆ ನೀರು ಸಮೃದ್ಧವಾಗಿರುವ ಆಹಾರಗಳು ಆರೋಗ್ಯಕ್ಕೆ ಬಹಳ ಮುಖ್ಯ. ನೀವು ನೀರಿನಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸಹ ಸೇವಿಸಬಹುದು. ಇದು ಕಲ್ಲಂಗಡಿ, ಟೊಮೆಟೊ, ಸೌತೆಕಾಯಿ, ಸ್ಟ್ರಾಬೆರಿ ಮುಂತಾದ ಆಹಾರಗಳು ಅಥವಾ ಹಣ್ನು- ತರಕಾರಿಯನ್ನು ಒಳಗೊಂಡಿರುತ್ತದೆ. ನೀರಿನಂಶವಿರುವ ಇತರ ಯಾವ ಆಹಾರಗಳನ್ನು ಸೇವಿಸಬಹುದು ಎಂಬುದಕ್ಕೆ ಇಲ್ಲಿದೆ ಉತ್ತರ.

ಸೇಬು

ಸೇಬು ಸುಮಾರು 80 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಇದು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಟೊಮೆಟೋ

ಟೊಮ್ಯಾಟೋ ಸುಮಾರು 90 ಪ್ರತಿಶತದಷ್ಟು ನೀರು ಹೊಂದಿದೆ. ಇದನ್ನು ಸಾಮಾನ್ಯವಾಗಿ ಮೇಲೋಗರದಲ್ಲಿ ಬಳಸಲಾಗುತ್ತದೆ. ಟೊಮೆಟೋದಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ದೃಷ್ಟಿ ಸುಧಾರಿಸುತ್ತದೆ. ಟೊಮ್ಯಾಟೋ ಚರ್ಮವನ್ನು ಆರೋಗ್ಯಕರವಾಗಿಡಲು ಕೆಲಸ ಮಾಡುತ್ತದೆ.

ಸೌತೆಕಾಯಿ

ಸೌತೆಕಾಯಿಯಲ್ಲಿ ನೀರಿನಂಶ ಸಮೃದ್ಧವಾಗಿದೆ. ಇದು ಸುಮಾರು 90 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಇದು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇದು ಹೀಟ್ ಸ್ಟ್ರೋಕ್​ ಅನ್ನು​ ತಡೆಯುತ್ತದೆ. ಸೌತೆಕಾಯಿ ಮೆದುಳಿಗೆ ಸಹ ಪ್ರಯೋಜನಕಾರಿಯಾಗಿದೆ. ವಾಸ್ತವವಾಗಿ, ಸೌತೆಕಾಯಿಯು ಫಿಸೆಟಿನ್ ಎಂಬ ಉರಿಯೂತದ ಅಂಶವನ್ನು ಹೊಂದಿರುತ್ತದೆ. ಇದು ಮೆದುಳಿನ ಉತ್ತಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.

ಕಲ್ಲಂಗಡಿ

ಇದು ತುಂಬಾ ರುಚಿ ಮತ್ತು ಬೇಸಿಗೆಯಲ್ಲಿ ಹೆಚ್ಚು ಇಷ್ಟಪಡುವ ಹಣ್ಣುಗಳಲ್ಲಿ ಒಂದಾಗಿದೆ. ಕಲ್ಲಂಗಡಿ 90 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಇದು ಹೀಟ್ ಸ್ಟ್ರೋಕ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಸಹ ಸಹಾಯ ಮಾಡುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ಹಣ್ಣುಗಳು ನೀರಿನಿಂದ ಸಮೃದ್ಧವಾಗಿವೆ. ಇದು ಸುಮಾರು 90 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಇದು ಫೈಬರ್, ವಿಟಮಿನ್ ಸಿ, ಫೋಲೇಟ್ ಮತ್ತು ಮ್ಯಾಂಗನೀಸ್‌ನಲ್ಲಿ ಸಮೃದ್ಧವಾಗಿವೆ. ಇದು ಉತ್ಕರ್ಷಣ ನಿರೋಧಕ ಗುಣಗಳನ್ನು ಸಹ ಹೊಂದಿದೆ. ಈ ಎಲ್ಲಾ ಪೋಷಕಾಂಶಗಳು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಂತಹ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಅಣಬೆ

ಅಣಬೆಗಳು ವಿಟಮಿನ್ ಬಿ 2 ಮತ್ತು ಡಿ ನಂತಹ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಇದು ಸುಮಾರು 90 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ನೀವು ಈ ತರಕಾರಿಯನ್ನು ನಿಯಮಿತವಾಗಿ ಸೇವಿಸಬಹುದು. ಇದು ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Health Tips: ಸೆಲರಿ ತಿನ್ನುವ ಅಭ್ಯಾಸ ಇದೆಯೇ? ಇಲ್ಲಿದೆ ಇದರ ಆರೋಗ್ಯಯುತ ಗುಣಗಳ ಮಾಹಿತಿ

ಬೇವಿನ ಎಲೆ ಕಹಿ ಎಂದು ಮೂಗು ಮುರಿಯುವ ಬದಲು ಆರೋಗ್ಯ ಪ್ರಯೋಜನ ತಿಳಿದುಕೊಳ್ಳಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು