Health Tips: ಹಲ್ಲುಜ್ಜುವಾಗ ನೀವು ಮಾಡುವ ಈ ತಪ್ಪುಗಳು ನಿಮ್ಮನ್ನು ಅಪಾಯಕ್ಕೆ ಸಿಲುಕುವಂತೆ ಮಾಡುತ್ತದೆ; ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಹಲ್ಲುಜ್ಜುವಾಗ ಅನೇಕ ಜನರು ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದು ನಿಮ್ಮ ಹಲ್ಲು ಮತ್ತು ಒಸಡುಗಳ ಮೇಲೆ ಪರಿಣಾಮ ಬೀರುತ್ತದೆ. ಈ ಸಾಮಾನ್ಯ ತಪ್ಪುಗಳು ಯಾವುದು ಮತ್ತು ಅದನ್ನು ಸರಿಪಡಿಸಿಕೊಳ್ಳುವ ಕ್ರಮ ಹೇಗೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ.

Health Tips: ಹಲ್ಲುಜ್ಜುವಾಗ ನೀವು ಮಾಡುವ ಈ ತಪ್ಪುಗಳು ನಿಮ್ಮನ್ನು ಅಪಾಯಕ್ಕೆ ಸಿಲುಕುವಂತೆ ಮಾಡುತ್ತದೆ; ಆರೋಗ್ಯದ ಬಗ್ಗೆ ಕಾಳಜಿ ಇರಲಿ
ಪ್ರಾತಿನಿಧಿಕ ಚಿತ್ರ
Follow us
| Updated By: sandhya thejappa

Updated on: Jul 13, 2021 | 8:56 AM

ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛವಾಗಿಡಲು ನಿಯಮಿತವಾಗಿ ಹಲ್ಲುಜ್ಜುವುದು ( Brushing) ಅಗತ್ಯ ಎಂದು ಎಲ್ಲರಿಗೂ ತಿಳಿದಿದೆ. ಅದರಲ್ಲೂ ಕೊರೊನಾ ಸೋಂಕು ( coronavirus) ಮತ್ತು ಬ್ಲಾಕ್​ ಫಂಗಸ್​ನಂತಹ ಕಾಯಿಲೆ ನಮ್ಮನ್ನು ಕಾಡುತ್ತಿರುವ ಈ ಸಮಯದಲ್ಲಿ, ನಾವು ಮಾಡುವ ಒಂದು ತಪ್ಪು ನಮ್ಮನ್ನು ಅನಾರೋಗ್ಯಕ್ಕೆ ಗುರಿಯಾಗಿಸಬಹುದು. ಹೀಗಾಗಿ ದೇಹವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಅದರಲ್ಲೂ ಬಾಯಿ ಮತ್ತು ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಬಾಯಿ ಮತ್ತು ಹಲ್ಲುಗಳನ್ನು ಸ್ವಚ್ಛವಾಗಿರಿಸುವುದರಿಂದ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಅದಕ್ಕಾಗಿಯೇ ಪ್ರತಿದಿನ ಬ್ರಷ್ ಮಾಡುವುದು ಮುಖ್ಯ. ಆದಾಗ್ಯೂ ಹಲ್ಲುಜ್ಜುವಾಗ ಅನೇಕ ಜನರು ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದು ನಿಮ್ಮ ಹಲ್ಲು ಮತ್ತು ಒಸಡುಗಳ ಮೇಲೆ ಪರಿಣಾಮ ಬೀರುತ್ತದೆ. ಈ ಸಾಮಾನ್ಯ ತಪ್ಪುಗಳು ಯಾವುದು ಮತ್ತು ಅದನ್ನು ಸರಿಪಡಿಸಿಕೊಳ್ಳುವ ಕ್ರಮ ಹೇಗೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ.

1. ವೇಗವಾಗಿ ಹಲ್ಲುಜ್ಜುವುದು ತುಂಬಾ ವೇಗವಾಗಿ ಹಲ್ಲುಜ್ಜುವುದು ದಂತ ಕವಚವನ್ನು ಹಾನಿಗೊಳಿಸುತ್ತದೆ. ಕಾಲಾನಂತರದಲ್ಲಿ ಒಸಡುಗಳಲ್ಲಿ ನೋವು ಕಾಣಿಸಿಕೊಳ್ಳುವುದು, ರಕ್ತಸ್ರಾವ ಸಂಭವಿಸುವುದು, ಊರಿಯೂತದಂತಹ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ಮೃದುವಾದ ಬ್ರಷ್​ ಅನ್ನು ಬಳಸುವುದು ಮತ್ತು ನಿಧಾನವಾಗಿ ಹಲ್ಲುಜ್ಜುವುದು ಉತ್ತಮ.

2. ಹಲ್ಲುಜ್ಜುವ ಬ್ರಷ್​ನ ಬದಲಾವಣೆ ಹಲ್ಲುಜ್ಜುವ ಬ್ರಷ್ ಅನ್ನು ಮೂರು ತಿಂಗಳಿಗೊಮ್ಮೆ ಬದಲಾಯಿಸುವುದು ಸೂಕ್ತ. ದಂತ ವೈದ್ಯರು ಕೂಡ ಇದನ್ನೇ ಸೂಚಿಸುತ್ತಾರೆ. ಹೆಚ್ಚು ಕಾಲ ಒಂದೇ ಬ್ರಷ್​ ಬಳಸಿದರೆ ಒಸಡಿಗೆ ತೊಂದರೆ ಆಗುವ ಸಾಧ್ಯತೆ ಇದೆ. ಗಡುಸಾದ ಬ್ರಷ್​ನಿಂದ ಹಲ್ಲುಜ್ಜುವ ಬದಲು ಮೃದುವಾದ ಬ್ರಷ್​ ಬಳಸಿ.

3. ದೀರ್ಘಕಾಲದವರೆಗೆ ಹಲ್ಲುಜ್ಜುವುದು 2 ರಿಂದ 3 ನಿಮಿಷಗಳ ಕಾಲ ಬ್ರಷ್ ಮಾಡುವುದು ಉತ್ತಮ. ದೀರ್ಘಕಾಲದವರೆಗೆ ಹಲ್ಲುಜ್ಜುವುದು ಹಲ್ಲುಗಳನ್ನು ಹಾನಿಗೊಳಿಸುತ್ತದೆ ಎಂದು ದಂತ ವೈದ್ಯರು ತಿಳಿಸಿದ್ದಾರೆ

4. ಆಗಾಗ್ಗೆ ಹಲ್ಲುಜ್ಜುವುದು ದಿನಕ್ಕೆ ಎರಡು ಬಾರಿ ಬ್ರಷ್ ಮಾಡಿದರೆ ಸಾಕು. ರಾತ್ರಿ ಮಲಗುವ ಮೊದಲು ಮತ್ತು ಬೆಳಿಗ್ಗೆ ಎದ್ದ ಕೂಡಲೇ ಬ್ರಷ್​ ಮಾಡಬೇಕು. ಇದು ನಿಮ್ಮ ಹಲ್ಲುಗಳನ್ನು ಸ್ವಚ್ಛಗೊಳಿಸುತ್ತದೆ ಎಂದು ದಂತ ವೈದ್ಯರು ತಿಳಿಸಿದ್ದಾರೆ. ಹಲವು ಬಾರಿ ಹಲ್ಲುಜ್ಜುವುದು ಹಲ್ಲು ಮತ್ತು ಒಸಡುಗಳನ್ನು ದುರ್ಬಲಗೊಳಿಸುತ್ತದೆ ಎಂಬುವುದನ್ನು ಮರೆಯದಿರಿ.

5. ಬಾಯಿಯ ಎಲ್ಲಾ ಭಾಗಕ್ಕೂ ತಾಗುವಂತೆ ಹಲ್ಲುಜ್ಜಿ ಸಾಮಾನ್ಯವಾಗಿ ಹಲವರು ಹಲ್ಲುಗಳನ್ನು ಮೇಲಿಂದ ಮೇಲೆ ಉಜ್ಜುತ್ತಾರೆ. ಆದರೆ ಹಲ್ಲುಗಳ ಒಳಭಾಗವನ್ನು ಕೂಡ ಸ್ವಚ್ಛವಾಗಿಟ್ಟುಕೊಳ್ಳಬೇಕು. ಏಕೆಂದರೆ ರೋಗಾಣುಗಳು ಹಲ್ಲುಗಳಲ್ಲಿ ಅಡಗಿರುತ್ತದೆ. ಬಾಯಿಯ ಎಲ್ಲಾ ಕಡೆಯೂ ತಾಗುವಂತೆ ಹಲ್ಲುಜ್ಜುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ: Aloe Vera Juice: ವಸಡು ಸವೆತ, ಹಲ್ಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಲೋಳೇಸರ ಜ್ಯೂಸ್​ ಉತ್ತಮ ಪರಿಹಾರ

Health Benefits: ಗ್ಯಾಸ್ಟಿಕ್​ನಿಂದಲೇ ಎದೆ ನೋವು ಕಾಣಿಸಿಕೊಂಡಿದೆ ಎಂದು ನಿರ್ಲಕ್ಷ್ಯ ವಹಿಸುವ ಮುನ್ನ, ನೋವಿನ ಲಕ್ಷಣಗಳ ಬಗ್ಗೆ ತಿಳಿಯುವುದು ಸೂಕ್ತ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ