Diabetic Diet: ಮಧುಮೇಹ ಸಮಸ್ಯೆಗೆ ಔಷಧಿ ಜತೆಗೆ ಆಹಾರ ಕ್ರಮ ಮುಖ್ಯ; ಈ ಐದು ಪದಾರ್ಥಗಳ ಬಗ್ಗೆ ಗಮನಹರಿಸಿ
ಜ್ಯೂಸ್ ಕುಡಿಯುವ ಅಭ್ಯಾಸವನ್ನು ಕೈ ಬಿಡುವುದು ಉತ್ತಮ. ಏಕೆಂದರೆ ಇದು ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯಕವಾದ ಮಾರ್ಗವಾಗಿದೆ. ಹಾಗಿದ್ದರೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಯಾವೆಲ್ಲಾ ಆಹಾರಗಳನ್ನು ಸೇವಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.
ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ಬಹಳ ಜಾಗರೂಕರಾಗಿರಬೇಕು. ದೈನಂದಿನ ಆಹಾರದ ವಿಷಯದಲ್ಲಿ ಮಾಡುವ ಸಣ್ಣ ತಪ್ಪುಗಳು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಮಧುಮೇಹ ರೋಗಿಗಳು ವಾಸ್ತವವಾಗಿ ಕೆಲವು ಆಹಾರಗಳಿಂದ ದೂರವಿರುವುದೇ ಉತ್ತಮ. ಸಿಹಿ ತಿಂಡಿಗಳನ್ನು ಸೇವಿಸುವುದರ ಜತೆಗೆ ಕೆಲವು ಪದಾರ್ಥಗಳಿಂದಲೂ ದೂರ ಇರುವುದು ಮುಖ್ಯ. ಇನ್ನು ಜ್ಯೂಸ್ ಕುಡಿಯುವ ಅಭ್ಯಾಸವನ್ನು ಕೈ ಬಿಡುವುದು ಉತ್ತಮ. ಏಕೆಂದರೆ ಇದು ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯಕವಾದ ಮಾರ್ಗವಾಗಿದೆ. ಹಾಗಿದ್ದರೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಯಾವೆಲ್ಲಾ ಆಹಾರಗಳನ್ನು ಸೇವಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.
ಬೇಳೆಕಾಳು ದ್ವಿದಳ ಧಾನ್ಯಗಳು ಗ್ಲೈಸೆಮಿಕ್ ಪದಾರ್ಥಗಳಾಗಿವೆ. ಅವುಗಳು ಕಾರ್ಬೋಹೈಡ್ರೇಟ್‌ಗಳನ್ನು ಕ್ರಮೇಣ ಬಿಡುಗಡೆ ಮಾಡುತ್ತವೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ ಬೀನ್ಸ್‌ನಂತಹ ಕಡಿಮೆ ಗ್ಲೈಸೆಮಿಕ್ ಆಹಾರವನ್ನು ಸುಮಾರು ಮೂರು ತಿಂಗಳ ಕಾಲ ಸೇವಿಸುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಎ 1 ಮತ್ತು ಸಿ ಮಟ್ಟ ಕಡಿಮೆಯಾಗುತ್ತದೆ.
ಸೇಬು ಇದು ಕಡಿಮೆ ಗ್ಲೈಸೆಮಿಕ್ ಆಗಿದೆ. ಇದರಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ದಿನಕ್ಕೆ ಒಂದು ಅಥವಾ 2 ಸೇಬನ್ನು ತಿನ್ನುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬಾದಾಮಿ ಬಾದಾಮಿಯಲ್ಲಿ ಮೆಗ್ನೀಸಿಯಮ್ ಅಧಿಕವಾಗಿರುತ್ತದೆ. ಇದು ಇನ್ಸುಲಿನ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಉತ್ಪಾದಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ಪ್ರೋಟೀನ್ ಮತ್ತು ಫೈಬರ್ ಕೂಡ ಅಧಿಕವಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಾದಾಮಿ ಸಹಾಯ ಮಾಡುತ್ತದೆ.
ಸೊಪ್ಪು ಸೊಪ್ಪು 21 ಕ್ಯಾಲೊರಿಗಳನ್ನು ಹೊಂದಿರುತ್ತದೆ. ಇದರಲ್ಲಿ ಮೆಗ್ನೀಸಿಯಮ್ ಮತ್ತು ಫೈಬರ್ ಕೂಡ ಇದೆ. ಪಾಲಕ್ನಂತಹ ಸೊಪ್ಪುಗಳನ್ನು ಎಣ್ಣೆಯಲ್ಲಿ ಹುರಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಓಟ್ಸ್ ಓಟ್ಸ್ ಹೃದಯಕ್ಕೆ ಒಳ್ಳೆಯದು ಎನ್ನುವ ವಿಚಾರ ನಮಗೆ ತಿಳಿದಿದೆ. ಅಂತೆಯೇ ಓಟ್ಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ. ಇವು ಕಡಿಮೆ ಗ್ಲೈಸೆಮಿಕ್ ಅನ್ನು ಹೊಂದಿದ್ದು, ಆ ಮೂಲಕ ಮಧುಮೇಹವನ್ನು ದೂರ ಮಾಡುತ್ತದೆ.
ಇದನ್ನೂ ಓದಿ: Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ
ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ