AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಗುಪ್ತಾಂಗದಲ್ಲಿನ ತುರಿಕೆ ಮತ್ತು ಸೋಂಕು ಕಡಿಮೆ ಮಾಡಲು ಈ ಮನೆಮದ್ದುಗಳನ್ನು ಬಳಸಿ

ತುರಿಕೆ ಸಮಸ್ಯೆಗೆ ಕಾರಣ ಬ್ಯಾಕ್ಟೀರಿಯಾ, ಶಿಲೀಂಧ್ರಗಳ ಸೋಂಕು ಮತ್ತು ಎಸ್ಜಿಮಾ. ಮುಖ್ಯವಾಗಿ ದೇಹದಲ್ಲಿ ತುರಿಕೆ ಕಾಣಿಸಿಕೊಳ್ಳಲು ಸ್ವಚ್ಛತೆಯ ಕೊರತೆಯೇ ಕಾರಣವಾಗಿದೆ. ಆದಾಗ್ಯೂ, ಈ ಕೆಲವು ಮನೆಮದ್ದುಗಳನ್ನು ಬಳಸಿಕೊಂಡು ನೀವು  ಸಮಸ್ಯೆಯಿಂದ ದೂರವಿರಬಹುದು.

Women Health: ಗುಪ್ತಾಂಗದಲ್ಲಿನ ತುರಿಕೆ ಮತ್ತು ಸೋಂಕು ಕಡಿಮೆ ಮಾಡಲು ಈ ಮನೆಮದ್ದುಗಳನ್ನು ಬಳಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 23, 2021 | 10:07 PM

Share

ಮಳೆಗಾಲದಲ್ಲಿ ಅನೇಕ ಮಹಿಳೆಯರು ತಮ್ಮ ಖಾಸಗಿ ಭಾಗದಲ್ಲಿ ಅಥವಾ ಗುಪ್ತಾಂಗದಲ್ಲಿ ತುರಿಕೆ ಮತ್ತು ಉರಿಯಂತಹ ಸಮಸ್ಯೆಯನ್ನು ಎದುರಿಸುತ್ತಾರೆ. ಈ ರೋಗಲಕ್ಷಣಗಳು ಗಂಭೀರ ಕಾಯಿಲೆಯ ಸಂಕೇತವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತುರಿಕೆ ಸಮಸ್ಯೆಗೆ ಕಾರಣ ಬ್ಯಾಕ್ಟೀರಿಯಾ, ಶಿಲೀಂಧ್ರಗಳ ಸೋಂಕು ಮತ್ತು ಎಸ್ಜಿಮಾ. ಮುಖ್ಯವಾಗಿ ದೇಹದಲ್ಲಿ ತುರಿಕೆ ಕಾಣಿಸಿಕೊಳ್ಳಲು ಸ್ವಚ್ಛತೆಯ ಕೊರತೆಯೇ ಕಾರಣವಾಗಿದೆ. ಆದಾಗ್ಯೂ, ಈ ಕೆಲವು ಮನೆಮದ್ದುಗಳನ್ನು ಬಳಸಿಕೊಂಡು ನೀವು  ಸಮಸ್ಯೆಯಿಂದ ದೂರವಿರಬಹುದು.

ಮೊಸರು ಮತ್ತು ಜೇನುತುಪ್ಪ ಮೊಸರು ಪ್ರಿಬಯಾಟಿಕ್‌ಗಳನ್ನು ಹೊಂದಿರುತ್ತದೆ. ಇದು ಖಾಸಗಿ ಭಾಗದಲ್ಲಿ ತುರಿಕೆ ಮತ್ತು ಉರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೇನುತುಪ್ಪವನ್ನು ಮೊಸರಿನೊಂದಿಗೆ ಬೆರೆಸಿದಾಗ ಅದು ಎರಡು ರೀತಿಯಲ್ಲಿ ಕೆಲಸ ಮಾಡುತ್ತದೆ. ಮೊದಲನೆಯದಾಗಿ, ಜೇನುತುಪ್ಪವು ಉರಿಯೂತದ ಗುಣಗಳನ್ನು ಕಡಿಮೆ ಮಾಡುತ್ತದೆ. ಅದು ನೋವನ್ನು ನಿವಾರಿಸುತ್ತದೆ. ಅದೇ ಸಮಯದಲ್ಲಿ, ಮೊಸರು ಪ್ರಿಬಯಾಟಿಕ್‌ಗಳನ್ನು ಹೊಂದಿರುತ್ತದೆ ಅದು ತುರಿಕೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ನೀವು ಯೀಸ್ಟ್ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳಿಗೆ ಗುರಿಯಾಗದಂತೆ ಬ್ಯಾಕ್ಟೀರಿಯಾದ ಅಸಮತೋಲನವನ್ನು ಸರಿಪಡಿಸಲು ಇದು ಸಹಾಯ ಮಾಡುತ್ತದೆ. ಮೊಸರು ಮತ್ತು ಜೇನುತುಪ್ಪದ ಮಿಶ್ರಣವನ್ನು ತಯಾರಿಸಿ ಕುಡಿಯುವುದರಿಂದ ಈ ಸಮಸ್ಯೆಗಳಿಂದ ದೂರ ಇರಬಹುದು ಅಥವಾ ಈ ಎರಡು ಪದಾರ್ಥಗಳನ್ನು ಒಟ್ಟಿಗೆ ಕಲಸಿ ತುರಿಕೆ ಉಂಟಾದ ಜಾಗಕ್ಕೆ ಹಚ್ಚಿಕೊಳ್ಳುವುದರಿಂದ ಕೂಡ ಸಮಸ್ಯೆಗೆ ತ್ವರಿತ ಪರಿಹಾರ ಸಿಗುತ್ತದೆ.

ಆ್ಯಪಲ್​ ಸೈಡರ್ ವಿನೆಗರ್ ಆ್ಯಪಲ್​ ಸೈಡರ್ ವಿನೆಗರ್ ತುರಿಕೆಯಂತಹ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ. ಇದು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ಗುಣಗಳನ್ನು ದೂರ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಖಾಸಗಿ ಭಾಗದ ತುರಿಕೆ ಮತ್ತು ಉರಿಯನ್ನು ಕಡಿಮೆ ಮಾಡಲು ಆ್ಯಪಲ್​ ಸೈಡರ್ ವಿನೆಗರ್ ಸಹಾಯ ಮಾಡುತ್ತದೆ. ನೀರಿಗೆ ಒಂದು ಚಮಚ ಆ್ಯಪಲ್ ಸೈಡರ್ ವಿನೆಗರ್ ಬೆರೆಸಿ ಕುಡಿಯುವುದು ಉತ್ತಮ. ಇಲ್ಲವಾದಲ್ಲಿ ಸ್ನಾನದ ನೀರಿಗೆ ಕೂಡ ಇದನ್ನು ಸೇರಿಸಬಹುದು. ಆದರೆ ಆ್ಯಪಲ್​ ಸೈಡರ್ ವಿನೆಗರ್ ಅನ್ನು ನೇರವಾಗಿ ಬಳಸಬೇಡಿ. ಏಕೆಂದರೆ ಅದರ ಸ್ವಭಾವವು ಆಮ್ಲೀಯವಾಗಿರುತ್ತದೆ, ಇದು ತೀವ್ರವಾದ ಉರಿಯೂತಕ್ಕೆ ಕಾರಣವಾಗಬಹುದು.

ಚಹಾ ಮರದ ಎಣ್ಣೆ ಚಹಾ ಮರದ ಎಣ್ಣೆಯಲ್ಲಿ ಆ್ಯಂಟಿ ಫಂಗಲ್, ಆ್ಯಂಟಿ ಬ್ಯಾಕ್ಟೀರಿಯಾ ಮತ್ತು ಆ್ಯಂಟಿ ವೈರಲ್ ಗುಣಗಳಿವೆ. ಇದು ತುರಿಕೆ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 4 ರಿಂದ 6 ಹನಿ ಚಹಾ ಮರದ ಎಣ್ಣೆಯನ್ನು ತೆಗೆದುಕೊಂಡು, ತುರಿಕೆ ಉಂಟಾದ ಭಾಗದ ಮೇಲೆ  ಹಚ್ಚಿ ಸ್ವಲ್ಪ ಸಮಯದ ನಂತರ ತೊಳೆಯಬೇಕು. ಇದರಿಂದ ತ್ವರಿತ ಪರಿಹಾರ ದೊರೆಯುತ್ತದೆ.

ಇನ್ನು ಹೆಚ್ಚು ತುರಿಕೆ ಉಂಟಾದಾಗ ವೈದ್ಯರನ್ನು ಭೇಟಿ ಮಾಡಿ ಮತ್ತು ಇಂತಹ ಸಮಸ್ಯೆಗಳು ಉಂಟಾಗದಂತೆ ಈ ಕೆಲವು ಮುನ್ನೆಚ್ಚರಿಕೆಯನ್ನು ಪಾಲಿಸಿ

1. ಮುಟ್ಟಿನ ಕಾಲದಲ್ಲಿ ಹೆಚ್ಚು ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ. ಪ್ರತಿ ಆರು ಗಂಟೆಗಳಿಗೊಮ್ಮೆ ಪ್ಯಾಡ್‌ಗಳನ್ನು ಬದಲಾಯಿಸಿ.

2. ಸಾಕಷ್ಟು ನೀರು ಕುಡಿಯಿರಿ.

3. ಜಿಮ್​ನಿಂದ ಬಂದ ಮೇಲೆ ಮತ್ತು ಈಜಿದ ತಕ್ಷಣ ಬಟ್ಟೆಗಳನ್ನು ಬದಲಾಯಿಸಿ.

ಇದನ್ನೂ ಓದಿ: Kidney Stone: ಮೂತ್ರಪಿಂಡದಲ್ಲಿ ಕಲ್ಲು ಇದೆ ಎಂದು ತಿಳಿಯುವುದು ಹೇಗೆ? ಈ ಲಕ್ಷಣಗಳೇ ಸಮಸ್ಯೆಗೆ ಮುನ್ನೆಚ್ಚರಿಕೆ

Women Health: ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಅನಿಯಮಿತ ಮುಟ್ಟಿನ ಸಮಸ್ಯೆಗೆ ಆಳ್ವಿ ಬೀಜ ಉತ್ತಮ ಪರಿಹಾರವಾಗಿದೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?