AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ

Kidney: ಮೂತ್ರಪಿಂಡ ಕೆಲವೊಮ್ಮೆ ವಿಷದಿಂದ ಹಾನಿಗೊಳಗಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಹೀಗಾಗಿ ನೀವು ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸುವುದು ಸೂಕ್ತ. ಹೀಗಾಗಿ ಮೂತ್ರಪಿಂಡದ ಆರೋಗ್ಯ ಸದಾ ಕಾಪಾಡಿಕೊಳ್ಳಲು ಡಿಟಾಕ್ಸ್​ ಮಾಡಿ ಕುಡಿಯಿರಿ.

Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 18, 2021 | 7:30 AM

ಮೂತ್ರಪಿಂಡ ಅಥವಾ ಕಿಡ್ನಿಯು ಮಾನವನ ದೇಹ ಸರಿಯಾಗಿ ಕಾರ್ಯನಿರ್ವಹಿಸಲು ಉಪಯುಕ್ತವಾಗಿದೆ. ದೇಹದಿಂದ ವಿಷ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಕಿಡ್ನಿ ಸಹಾಯ ಮಾಡುತ್ತವೆ. ಮೂತ್ರಪಿಂಡ (Kidney) ತನ್ನ ಕೆಲಸವನ್ನು ಸರಿಯಾಗಿ ಮಾಡಲು ಹೆಚ್ಚು ನೀರು ಕುಡಿಯಬೇಕು. ಮೂತ್ರಪಿಂಡ ಕೆಲವೊಮ್ಮೆ ವಿಷದಿಂದ ಹಾನಿಗೊಳಗಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಹೀಗಾಗಿ ನೀವು ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸುವುದು ಸೂಕ್ತ. ಹೀಗಾಗಿ ಮೂತ್ರಪಿಂಡದ ಆರೋಗ್ಯ ಸದಾ ಕಾಪಾಡಿಕೊಳ್ಳಲು ಡಿಟಾಕ್ಸ್​ ಮಾಡಿ ಕುಡಿಯಿರಿ. ಯಾವೆಲ್ಲಾ ಡಿಟಾಕ್ಸ್​ ಮೂತ್ರಪಿಂಡದ ಆರೋಗ್ಯಕ್ಕೆ ಒಳ್ಳೆಯದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

1. ಚಹಾ ಮೂತ್ರಪಿಂಡವನ್ನು ಶುದ್ಧೀಕರಿಸಲು ಚಹಾ ಸಹಾಯ ಮಾಡುತ್ತದೆ. ಹಲವರಿಗೆ ದಿನಕ್ಕೆ 1ರಿಂದ 2 ಕಪ್​ ಟೀ ಅಥವಾ ಚಹಾ ಕುಡಿದು ಅಭ್ಯಾಸ ಇರುತ್ತದೆ. ಇದು ಒಳ್ಳೆಯದು. ಮೂತ್ರಪಿಂಡ ಸದಾ ಆರೋಗ್ಯವಾಗಿರಲು ಮತ್ತು ನಿರ್ವಿಷಗೊಳಿಸಲು ಚಹಾ ಸಹಾಯ ಮಾಡುತ್ತದೆ. ನೀವು ಪ್ರತಿದಿನ ವಿವಿಧ ಚಹಾಗಳನ್ನು ಕುಡಿಯಬಹುದು. ಆದರೆ ಹೆಚ್ಚು ಕುಡಿಯುವುದು ಒಳ್ಳೆಯದಲ್ಲ.

2. ಚೆರ್ರಿ ಮತ್ತು ಕ್ರ್ಯಾನ್ಬೆರಿ ಪ್ರತಿಯೊಬ್ಬರೂ ಚೆರ್ರಿ ಮತ್ತು ಕ್ರ್ಯಾನ್ಬೆರಿಗಳ ರುಚಿಯನ್ನು ಇಷ್ಟಪಡುತ್ತಾರೆ. ಆದರೆ ಇದನ್ನು ತಿನ್ನುವುದರಿಂದ ಏನು ಉಪಯೋಗವಿದೆ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಆಹಾರದಲ್ಲಿ ನೀವು ಚೆರ್ರಿ ಮತ್ತು ಕ್ರ್ಯಾನ್ಬೆರಿಗಳನ್ನು ಸೇರಿಸಿಕೊಳ್ಳಬಹುದು. ಎರಡು ವಾರಗಳವರೆಗೆ ಚೆರ್ರಿ ಮತ್ತು ಕ್ರ್ಯಾನ್‌ಬೆರಿಗಳನ್ನು ಸೇವಿಸುವುದರಿಂದ ಯುಟಿಐ ಲಕ್ಷಣಗಳು ಕಡಿಮೆಯಾಗುತ್ತವೆ. ಚೆರ್ರಿ ಮತ್ತು ಕ್ರ್ಯಾನ್ಬೆರಿಗಳನ್ನು ವಿವಿಧ ಪ್ರಕಾರವಾಗಿ ಸೇವಿಸಬಹುದು ಅಂದರೆ ಸಲಾಡ್​, ಜ್ಯೂಸ್​ ರೂಪದಲ್ಲಿ ತೆಗೆದುಕೊಳ್ಳಬಹುದು. ಇವುಗಳು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

3. ಹಣ್ಣಿನ ಜ್ಯೂಸ್ ಸಕ್ಕರೆ ಅಥವಾ ಉಪ್ಪು ಇಲ್ಲದೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳಲು ಜ್ಯೂಸ್ ಸಹಾಯ ಮಾಡುತ್ತದೆ. ಜ್ಯೂಸ್ ಮೂತ್ರಪಿಂಡವನ್ನು ಶುದ್ಧಗೊಳಿಸುತ್ತದೆ. ನಿಂಬೆ, ಕಿತ್ತಳೆ, ಕಲ್ಲಂಗಡಿ ಜ್ಯೂಸ್ ಅನ್ನು ಕುಡಿಯಬಹುದು. ಇದು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಈ ರಸವು ಮೂತ್ರಪಿಂಡದಲ್ಲಿನ ಕಲ್ಲುಗಳ ಬೆಳವಣಿಗೆಯನ್ನು ತಡೆಯುತ್ತದೆ.

4. ಪಾಲಕ್​ ಸೊಪ್ಪು ಪಾಲಕ್ ಸೊಪ್ಪು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಸಿರು ಎಲೆಗಳ ತರಕಾರಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಒಳ್ಳೆಯದು. ಪಾಲಕ್​ನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳಿವೆ. ಮೂತ್ರಪಿಂಡಗಳನ್ನು ನಿರ್ವಿಷಗೊಳಿಸಲು ಇವು ಸಹಾಯ ಮಾಡುತ್ತವೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಪಾಲಕ್ ಸೊಪ್ಪನ್ನು ಮಿತವಾಗಿ ತೆಗೆದುಕೊಳ್ಳಬೇಕು. ಹೆಚ್ಚು ಪಾಲಕ್​ ಅನ್ನು ತಿನ್ನುವುದರಿಂದ ಮೂತ್ರಪಿಂಡದ ಕಲ್ಲುಗಳ ಅಪಾಯ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

Health Tips: ನಾಲಿಗೆಯ ಮೇಲಿನ ಈ ಲಕ್ಷಣಗಳು, ದೇಹದ ಆರೋಗ್ಯ ಸ್ಥಿತಿಯ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತವೆ

Kidney Stone: ಕಿಡ್ನಿ ಸ್ಟೋನ್ ಸಮಸ್ಯೆ ಏಕೆ ಕಂಡುಬರುತ್ತದೆ? ಅದರಿಂದ ರಕ್ಷಣೆ ಹೇಗೆ? ಇಲ್ಲಿದೆ ವಿವರ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ