ಆಹಾರವನ್ನು ನುಂಗಲು ತೊಂದರೆಯಾಗುವುದು ಕೂಡ ಶ್ವಾಸಕೋಶದ ಕ್ಯಾನ್ಸರ್​ ಲಕ್ಷಣವಾಗಿರಬಹುದು; ಇಲ್ಲಿದೆ ತಜ್ಞರ ಸಲಹೆ

ವೈದ್ಯರು ಆಹಾರವನ್ನು ನುಂಗಲು ಕಷ್ಟವಾಗುವುದು ಸಹ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಹೇಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ್ಯ ಮಾಡದೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸುವ ಅವಶ್ಯಕತೆಯಿದೆ.

ಆಹಾರವನ್ನು ನುಂಗಲು ತೊಂದರೆಯಾಗುವುದು ಕೂಡ ಶ್ವಾಸಕೋಶದ ಕ್ಯಾನ್ಸರ್​ ಲಕ್ಷಣವಾಗಿರಬಹುದು; ಇಲ್ಲಿದೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Feb 24, 2022 | 9:46 AM

ಪ್ರತಿ ವರ್ಷ ಲಕ್ಷಾಂತರ ಜನರು ಕ್ಯಾನ್ಸರ್​ನಿಂದ ಸಾಯುತ್ತಾರೆ. ಈ ರೋಗದ ವ್ಯಾಪ್ತಿಯು ನಿರಂತರವಾಗಿ ಹೆಚ್ಚುತ್ತಿದೆ. ಜನರಿಗೆ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ಅರಿವಿನ ಕೊರತೆ ಇರುವುದು ಕೂಡ ಇದಕ್ಕೆ ಕಾರಣ. ದೇಹದಲ್ಲಿ ಸಂಭವಿಸುವ ಸಮಸ್ಯೆಗಳನ್ನು ಜನರು ನಿರ್ಲಕ್ಷಿಸುತ್ತಲೇ ಇರುತ್ತಾರೆ. ಅದು ನಂತರ ಕ್ಯಾನ್ಸರ್‌ನಂತಹ(Cancer) ಮಾರಣಾಂತಿಕ ಕಾಯಿಲೆಯಾಗುತ್ತದೆ. ಶ್ವಾಸಕೋಶದ ಕ್ಯಾನ್ಸರ್(Lung Cancer) ಎಲ್ಲಾ ರೀತಿಯ ಕ್ಯಾನ್ಸರ್​ಗಳಂತಹ ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಇದು ಆರಂಭದಲ್ಲಿ ಪತ್ತೆಯಾಗದ ರೋಗ. ಸಾಮಾನ್ಯವಾಗಿ ಜನರು ಉಸಿರಾಟದ ತೊಂದರೆ ಅಥವಾ ಶ್ವಾಸಕೋಶದಲ್ಲಿ ಸೋಂಕು ಶ್ವಾಸಕೋಶದ ಕ್ಯಾನ್ಸರ್​ನಂತಹ ಲಕ್ಷಣ ಎಂದು ಭಾವಿಸುತ್ತಾರೆ. ಆದರೆ ವೈದ್ಯರು ಆಹಾರವನ್ನು ನುಂಗಲು ಕಷ್ಟವಾಗುವುದು ಸಹ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಹೇಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನಿರ್ಲಕ್ಷ್ಯ ಮಾಡದೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು(Doctor) ಸಂಪರ್ಕಿಸುವ ಅವಶ್ಯಕತೆಯಿದೆ.

ಉಸಿರಾಟಕ್ಕೆ ತೊಂದರೆಯಾದರೆ ಮತ್ತು ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ ಅದು ಶ್ವಾಸಕೋಶದ ಕ್ಯಾನ್ಸರ್​ನ ದೊಡ್ಡ ಲಕ್ಷಣವಾಗಿದೆ ಎಂದು ರಾಜೀವ್ ಗಾಂಧಿ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ವಿನೀತ್ ಹೇಳುತ್ತಾರೆ. ಶ್ವಾಸಕೋಶದ ಕ್ಯಾನ್ಸರ್​ ಕೆಮ್ಮು, ಉಸಿರಾಟದ ತೊಂದರೆ, ಎದೆ ನೋವು, ಹಠಾತ್ ತೂಕ ನಷ್ಟ ಮತ್ತು ವಿವರಿಸಲಾಗದ ಆಯಾಸವನ್ನು ಒಳಗೊಂಡಿರುತ್ತದೆ. ಕೆಲವು ರೋಗಿಗಳು ಕಣ್ಣುಗಳ ಹಳದಿ ಮತ್ತು ಹಸಿವಿನ ನಷ್ಟವನ್ನು ಸಹ ಅನುಭವಿಸಬಹುದು.

ಡಾ.ತಲ್ವಾರ್ ಪ್ರಕಾರ, ಆಹಾರದ ಪೈಪ್‌ನಲ್ಲಿನ ಯಾವುದೇ ಸಮಸ್ಯೆಯಿಂದ ಆಹಾರವನ್ನು ನುಂಗಲು ಕಷ್ಟವಾಗುತ್ತದೆ. ಇದನ್ನು ಡಿಸ್ಫೇಜಿಯಾ ಕಾಯಿಲೆ ಎಂದು ಕರೆಯಲಾಗುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್​ನಿಂದ ಉಂಟಾಗುವ ಗಡ್ಡೆಯು ಆಹಾರದ ಪೈಪ್​ನ ಮೇಲೆ ಸಹ ಪರಿಣಾಮ ಬೀರಬಹುದು. ಆಹಾರದ ಪೈಪ್‌ನಲ್ಲಿ ಗಡ್ಡೆ ಉಂಟಾಗಿದ್ದರೆ, ಆಹಾರವನ್ನು ನುಂಗಲು ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಈ ಸಮಸ್ಯೆಯನ್ನು ಡಿಸ್ಫೇಜಿಯಾ ಕಾಯಿಲೆ ಎಂದು ಮಾತ್ರ ಪರಿಗಣಿಸಬಾರದು. ಇದು ಕ್ಯಾನ್ಸರ್‌ಗೆ ಕಾರಣವೂ ಆಗಿರಬಹುದು.

ನಿರಂತರ ಬೆನ್ನು ನೋವು

ಒಬ್ಬ ವ್ಯಕ್ತಿಯು ಎದೆ ಅಥವಾ ಬೆನ್ನಿನಲ್ಲಿ ನಿರಂತರ ನೋವನ್ನು ಅನುಭವಿಸುತ್ತಿದ್ದರೆ, ಅದನ್ನು ನಿರ್ಲಕ್ಷಿಸಬಾರದು ಎಂದು ಡಾ.ವಿನೀತ್ ಹೇಳುತ್ತಾರೆ. ಏಕೆಂದರೆ ಇದು ಶ್ವಾಸಕೋಶದ ಕ್ಯಾನ್ಸರ್‌ನ ಲಕ್ಷಣವಾಗಿರಬಹುದು. ಈ ಪರಿಸ್ಥಿತಿಯಲ್ಲಿ ವೈದ್ಯರ ಸಲಹೆಯನ್ನು ತಕ್ಷಣವೇ ತೆಗೆದುಕೊಳ್ಳಬೇಕು. ಹೆಚ್ಚು ಧೂಮಪಾನ ಮಾಡುವವರಲ್ಲಿ ಬೆನ್ನು ಮತ್ತು ಎದೆ ನೋವಿನ ಸಮಸ್ಯೆ ಕಂಡುಬರುತ್ತವೆ. ಶ್ವಾಸಕೋಶದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಗುರುತಿಸಲು ಉತ್ತಮ ಮಾರ್ಗವೆಂದರೆ, ಕೆಮ್ಮು ಯಾವುದೇ ವೈರಲ್ ಅಥವಾ ಜ್ವರವಿಲ್ಲದೆ ದೀರ್ಘಕಾಲದವರೆಗೆ ಮುಂದುವರಿದರೆ ಸಿಟಿ ಸ್ಕ್ಯಾನ್ ಮಾಡುವುದು. ಇದರಿಂದ ಕ್ಯಾನ್ಸರ್ ಅನ್ನು ಸುಲಭವಾಗಿ ಪತ್ತೆ ಹಚ್ಚಬಹುದು.

ಶ್ವಾಸಕೋಶದ ಕ್ಯಾನ್ಸರ್​ನಿಂದ ದೂರ ಇರಲು ಈ ಮಾರ್ಗಗಳನ್ನು ಅನುಸರಿಸಿ

  • ಆಹಾರ ಕ್ರಮದ ಬಗ್ಗೆ ಎಚ್ಚರ ವಹಿಸಿ.
  • ಪ್ರತಿದಿನ ಕನಿಷ್ಠ ಅರ್ಧ ಗಂಟೆ ಪ್ರಾಣಾಯಾಮ ಮಾಡಿ.
  • ಧೂಮಪಾನ ಮಾಡಬೇಡಿ.
  • ಧೂಳು, ಮಣ್ಣು ಮತ್ತು ವಾಯು ಮಾಲಿನ್ಯದಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ.

ಇದನ್ನೂ ಓದಿ:

Bone Cancer: ಮೂಳೆಗಳ ಕ್ಯಾನ್ಸರ್​ನ ಲಕ್ಷಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

Bone Cancer: ಮೂಳೆಗಳ ಕ್ಯಾನ್ಸರ್​ನ ಲಕ್ಷಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ