Women Health: ಹೆರಿಗೆಯ ನಂತರ ತಲೆ ಕೂದಲು ಉದುರುವ ಸಮಸ್ಯೆ ಎದುರಾಗಿದೆಯೇ; ಇಲ್ಲಿದೆ ಸೂಕ್ತ ಪರಿಹಾರ

Postpartum Hair Loss: ಹೆರಿಗೆಯ ನಂತರ ಈಸ್ಟ್ರೊಜೆನ್ ಹಾರ್ಮೋನ್ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ. ಕೂದಲು ಉದುರುವ ಪ್ರಕ್ರಿಯೆಯು ಸುಮಾರು 6 ರಿಂದ 8 ತಿಂಗಳವರೆಗೆ ಇರುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ದೂರ ಮಾಡಲು ಮನೆಮದ್ದಿನ ಮೊರೆ ಹೋಗುವುದು ಉತ್ತಮ ಪರಿಹಾರವಾಗಿದೆ.

Women Health: ಹೆರಿಗೆಯ ನಂತರ ತಲೆ ಕೂದಲು ಉದುರುವ ಸಮಸ್ಯೆ ಎದುರಾಗಿದೆಯೇ; ಇಲ್ಲಿದೆ ಸೂಕ್ತ ಪರಿಹಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Dec 13, 2021 | 7:30 AM

ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಆಗುವ ಬದಲಾವಣೆಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇದೆಲ್ಲವೂ ಹಾರ್ಮೋನುಗಳ ಏರಿಳಿತದಿಂದ ಸಂಭವಿಸುತ್ತದೆ. ಈ ಸಮಯದಲ್ಲಿ, ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಸಹ ಮುಂಚೂಣಿಗೆ ಬರುತ್ತವೆ. ತ್ವರಿತ ಕೂದಲು ಉದುರುವಿಕೆ (Hair loss) ಕೂಡ ಇದರ ಒಂದು ಭಾಗವಾಗಿದೆ. ಹೆರಿಗೆಯ ನಂತರ (Postpartum) ಈ ಸಮಸ್ಯೆ ದೂರವಾಗುತ್ತದೆ ಎಂದು ಹೆಚ್ಚಿನ ಮಹಿಳೆಯರು ಭಾವಿಸುತ್ತಾರೆ. ಆದರೆ ಕೆಲವು ಸಮಸ್ಯೆಗಳು ಹೆರಿಗೆಯ ನಂತರವೂ ಸ್ವಲ್ಪ ಸಮಯದವರೆಗೆ ಇರುತ್ತದೆ. ಹೆರಿಗೆಯ ನಂತರವೂ ಮಹಿಳೆಯರ ತಲೆ ಕೂದಲು ಉದುರುವಿಕೆಯ ಪ್ರಕ್ರಿಯೆ ಮುಂದುವರಿದಿದ್ದರೆ ಚಿಂತಿಸುವ ಅಗತ್ಯ ಇಲ್ಲ. ಇದಕ್ಕೆ ಪರಿಹಾರ ಇದೆ.

ಹೆರಿಗೆಯ ನಂತರ ಈಸ್ಟ್ರೊಜೆನ್ ಹಾರ್ಮೋನ್ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ. ಕೂದಲು ಉದುರುವ ಪ್ರಕ್ರಿಯೆಯು ಸುಮಾರು 6 ರಿಂದ 8 ತಿಂಗಳವರೆಗೆ ಇರುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ದೂರ ಮಾಡಲು ಮನೆಮದ್ದಿನ ಮೊರೆ ಹೋಗುವುದು ಉತ್ತಮ ಪರಿಹಾರವಾಗಿದೆ.

ನೆಲ್ಲಿಕಾಯಿ ನೆಲ್ಲಿಕಾಯಿಯು ಕಣ್ಣು, ಕೂದಲು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆಯುರ್ವೇದದಲ್ಲಿ ನೆಲ್ಲಿಕಾಯಿಯನ್ನು ವರವೆಂದು ವಿವರಿಸಲಾಗಿದೆ. ನೀವು ಪ್ರತಿದಿನ ನೆಲ್ಲಿಕಾಯಿ ರಸವನ್ನು ಸೇವಿಸಬಹುದು ಅಥವಾ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜಾಮ್ ಅನ್ನು ಸೇವಿಸಬಹುದು. ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ. ಇದಲ್ಲದೆ ನೀವು ಕೂದಲಿಗೆ ನೆಲ್ಲಿಕಾಯಿ, ಸೀಗೆಕಾಯಿಯನ್ನು ಮಿಶ್ರಣ ಮಾಡಿ ಹಚ್ಚಿ ಸ್ನಾನ ಮಾಡಿದರೆ ಉತ್ತಮ ಪರಿಹಾರ ಸಿಗುತ್ತದೆ.

ಮೊಸರು ಮೊಸರು ಕೂದಲಿಗೆ ಕಂಡೀಷನರ್ ಆಗಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಕೂದಲನ್ನು ಬಲಪಡಿಸುತ್ತದೆ. ನೀವು ನೇರವಾಗಿ ಕೂದಲಿಗೆ ಮೊಸರನ್ನು ಅನ್ವಯಿಸಬಹುದು. ಸುಮಾರು 15 ನಿಮಿಷಗಳ ಕಾಲ ಅದನ್ನು ಇರಿಸಿ. ಅದರ ನಂತರ ನೀರಿನಿಂದ ಸ್ವಚ್ಛ ಮಾಡಿ. ಇದು ನಿಮ್ಮ ಕೂದಲು ಉದುರುವಿಕೆಯನ್ನು ನಿಯಂತ್ರಿಸುತ್ತದೆ. ಜೊತೆಗೆ ಕೂದಲಿನಲ್ಲಿ ತೇವಾಂಶವನ್ನು ಉಳಿಸಿಕೊಳ್ಳುತ್ತದೆ.

ಮೆಂತೆ ಮೆಂತೆಯನ್ನು ಕೂದಲಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದನ್ನು ಬಳಸಲು ಎರಡು ಮೂರು ಚಮಚೆ ಮೆಂತೆ ಬೀಜಗಳನ್ನು ರಾತ್ರಿಯಿಡೀ ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಸೋಸಿಕೊಳ್ಳಿ ಮತ್ತು ಅದನ್ನು ನಿಮ್ಮ ಕೂದಲಿಗೆ ಹಚ್ಚಿ, ಸ್ವಲ್ಪ ಹೊತ್ತು ಬಿಡಿ. ಬಳಿಕ ಮೈಲ್ಡ್ ಶಾಂಪೂವಿನಿಂದ ಕೂದಲನ್ನು ತೊಳೆಯಿರಿ. ಇದು ಉತ್ತಮ ಪರಿಹಾರ ನೀಡುತ್ತದೆ.

ಮೊಟ್ಟೆ ಮೊಟ್ಟೆಯಲ್ಲಿರುವ ಪ್ರೋಟೀನ್ ಕೂದಲಿಗೆ ತುಂಬಾ ಪ್ರಯೋಜನಕಾರಿ. ಇದು ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಕೂದಲನ್ನು ಬಲಗೊಳಿಸುತ್ತದೆ. ಮೊಟ್ಟೆಯ ಬಿಳಿ ಭಾಗವನ್ನು ಹೊರತೆಗೆದು, ಅದರಲ್ಲಿ ಎರಡು ಚಮಚ ಆಲಿವ್ ಎಣ್ಣೆಯನ್ನು ಬೆರೆಸಿ ಮತ್ತು ಕೂದಲಿಗೆ ಕೈಗಳಿಂದ ಮಸಾಜ್ ಮಾಡಿ. ಇದು ನಿಮ್ಮ ಕೂದಲು ಉದುರುವುದನ್ನು ನಿಲ್ಲಿಸುತ್ತದೆ. ಜತೆಗೆ ಕೂದಲ ಬೆಳವಣಿಗೆಯನ್ನು ಸುಧಾರಿಸುತ್ತದೆ ಮತ್ತು ಕೂದಲು ಮೃದುವಾಗುವಂತೆ ಮಾಡುತ್ತದೆ.

ಇದನ್ನೂ ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ರನ್ನಿಂಗ್​ ಮಾಡಬಹುದೇ? ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

Women Health: ಒಂದೇ ತಿಂಗಳಲ್ಲಿ ಎರಡು ಬಾರಿ ಮುಟ್ಟಾಗುತ್ತಿದೆಯೇ? ಅಪಾಯದ ಬಗ್ಗೆ ಇರಲಿ ಎಚ್ಚರ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್