Dry Amla: ಪ್ರತಿದಿನ ಎರಡು ತುಂಡು ಒಣಗಿದ ನೆಲ್ಲಿಕಾಯಿ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

ನೆಲ್ಲಿಕಾಯಿಯನ್ನು ಒಣಗಿಸಿ ಚಿಕ್ಕ ತುಂಡುಗಳನ್ನಾಗಿ ಮಾಡಿ ಅಥವಾ ಪುಡಿಯಾಗಿ ತೆಗೆದುಕೊಳ್ಳಬಹುದು. ಊಟದ ನಂತರ ಎರಡು ತುಂಡು ಒಣ ನೆಲ್ಲಿಕಾಯಿ ತೆಗೆದುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲು ಈ ವರದಿಯನ್ನು ಒಮ್ಮೆ ಓದಿ.

Dry Amla: ಪ್ರತಿದಿನ ಎರಡು ತುಂಡು ಒಣಗಿದ ನೆಲ್ಲಿಕಾಯಿ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ
ಒಣ ನೆಲ್ಲಿಕಾಯಿ
Follow us
TV9 Web
| Updated By: preethi shettigar

Updated on: Sep 05, 2021 | 7:53 AM

ನೆಲ್ಲಿಕಾಯಿಯನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಇದು ಆಂಬ್ಯುಲೇಟರಿ ಔಷಧಗಳ ಗಣಿಯಾಗಿದೆ. ಆಯುರ್ವೇದ ಔಷಧದಲ್ಲಿ ನೆಲ್ಲಿಕಾಯಿಯು ಅತ್ಯಂತ ಮಹತ್ವದ್ದಾಗಿದೆ. ಇದು ದಾಳಿಂಬೆ ಹಣ್ಣಿಗಿಂತ 17 ಪಟ್ಟು ಹೆಚ್ಚು ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿದೆ. ವಿಶೇಷವಾಗಿ ಚಳಿಗಾಲದಲ್ಲಿ ಆರೋಗ್ಯವಾಗಿರಲು ಈ ಅಗ್ಗದ ಅದ್ಭುತ ಆಹಾರವು ಅತ್ಯಗತ್ಯ. ಈ ನೆಲ್ಲಿಕಾಯಿಯನ್ನು ಹಾಗೆಯೇ ತಿನ್ನಬಹುದು. ಆದಾಗ್ಯೂ, ಒಣಗಿದ ನೆಲ್ಲಿಕಾಯಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ವಿಶೇಷವಾಗಿ ನೆಲ್ಲಿಕಾಯಿಯನ್ನು ಒಣಗಿಸಿ ಚಿಕ್ಕ ತುಂಡುಗಳನ್ನಾಗಿ ಮಾಡಿ ಅಥವಾ ಪುಡಿಯಾಗಿ ತೆಗೆದುಕೊಳ್ಳಬಹುದು. ಊಟದ ನಂತರ ಎರಡು ತುಂಡು ಒಣ ನೆಲ್ಲಿಕಾಯಿ ತೆಗೆದುಕೊಳ್ಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲು ಈ ವರದಿಯನ್ನು ಒಮ್ಮೆ ಓದಿ.

ಗಂಟಲು ನೋವು ಮತ್ತು ಶೀತವನ್ನು ಗುಣಪಡಿಸುತ್ತದೆ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಶೀತ ಮತ್ತು ಗಂಟಲು ನೋವಿನಂತಹ ಕಾಯಿಲೆಗಳಿದ್ದಲ್ಲಿ, ಎರಡು ಚಮಚ ಜೇನುತುಪ್ಪದೊಂದಿಗೆ ಎರಡು ಚಮಚ ನೆಲ್ಲಿಕಾಯಿ ಪುಡಿಯನ್ನು ಮಿಶ್ರಣ ಮಾಡಿ. ಈ ಮಿಶ್ರಣವನ್ನು ದಿನಕ್ಕೆ ಮೂರು ಬಾರಿ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಗಂಟಲು ನೋವು ಮತ್ತು ಶೀತವನ್ನು ಇದು ನಿವಾರಿಸುತ್ತದೆ.

ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ ಫೈಬರ್ ಅಧಿಕವಾಗಿರುವುದರಿಂದ ಮಲಬದ್ಧತೆ ಸಮಸ್ಯೆಗಳನ್ನು ತಡೆಯುತ್ತದೆ. ತಿಂದ ಆಹಾರ ಜೀರ್ಣವಾಗಲು ಒಣ ನೆಲ್ಲಿಕಾಯಿ ಸೇವಿಸಿ.

ಬಾಯಿಯ ಹುಣ್ಣು ಗುಣಪಡಿಸುತ್ತದೆ ನೆಲ್ಲಿಕಾಯಿ ಪುಡಿಯನ್ನು ನೀರಿನೊಂದಿಗೆ ಬೆರೆಸಬಹುದು ಅಥವಾ ನೆಲ್ಲಿಕಾಯಿ ರಸವನ್ನು ಅರ್ಧ ಕಪ್ ನೀರಿನಲ್ಲಿ ನೆನೆಸಿ ಕುಡಿಯಬೇಕು ಇದು ಬಾಯಿಯ ಹುಣ್ಣು ಕಡಿಮೆ ಮಾಡುತ್ತದೆ.

ಸಂಧಿವಾತದ ನೋವನ್ನು ತಡೆಯುತ್ತದೆ ಸಂಧಿವಾತ ಸಂಬಂಧಿತ ನೋವನ್ನು ಕಡಿಮೆ ಮಾಡಲು ಒಣ ನೆಲ್ಲಿಕಾಯಿ ಉತ್ತಮ ಸಹಾಯಕವಾಗಿದೆ. ಒಣಗಿದ ನೆಲ್ಲಿಕಾಯಿಯನ್ನು ದಿನಕ್ಕೆ ಎರಡು ಬಾರಿ ತಿನ್ನಿರಿ.  ಇದು ಆರೋಗ್ಯ ರಕ್ಷಣೆಯಲ್ಲಿ ಅದ್ಭುತವಾಗಿ ಕೆಲಸ ಮಾಡುತ್ತದೆ.

ಕಫ ಕಡಿಮೆ ಮಾಡುತ್ತದೆ ಜೇನುತುಪ್ಪ ಮತ್ತು ಒಣಗಿದ ನೆಲ್ಲಿಕಾಯಿ ಸೇವಿಸುವುದರಿಂದ ದೇಹದಲ್ಲಿನ ಕಫ ದೋಷಗಳನ್ನು ಕಡಿಮೆ ಮಾಡಬಹುದು.

ಕೂದಲಿನ ಆರೋಗ್ಯ ಕಾಪಾಡುತ್ತದೆ ನೆಲ್ಲಿಕಾಯಿ ಕೂದಲಿಗೆ ಆರೋಗ್ಯ ಒದಗಿಸುವ ಅತ್ಯಂತ ಪೌಷ್ಟಿಕ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ಆರೋಗ್ಯಕರ, ಹೊಳೆಯುವ ಕೂದಲಿಗೆ ನೈಸರ್ಗಿಕ ಕಂಡೀಶನರ್ ಆಗಿ ಇದು ಕೆಲಸ ಮಾಡುತ್ತದೆ. ನೆಲ್ಲಿಕಾಯಿ ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ. ತಲೆಯಲ್ಲಿ ರಕ್ತ ಪರಿಚಲನೆ ಹೆಚ್ಚಿಸುತ್ತದೆ. ಇದರಿಂದ ಕೂದಲು ದಪ್ಪವಾಗಿ ಬೆಳೆಯುತ್ತದೆ.

ಹೊಳೆಯುವ ಚರ್ಮಕ್ಕಾಗಿ ಆಯುರ್ವೇದದಲ್ಲಿ ನೆಲ್ಲಿಕಾಯಿಗೆ ವಿಶೇಷ ಸ್ಥಾನವಿದೆ. ಒಣಗಿದ ನೆಲ್ಲಿಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ  ಹೊಳೆಯುವ ಚರ್ಮವು ನಿಮ್ಮದಾಗುತ್ತದೆ. ಇದು ದೃಷ್ಟಿ ಸುಧಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ನೆಲ್ಲಿಕಾಯಿಯನ್ನು ಉಪ್ಪಿನಕಾಯಿ ಅಥವಾ ಮಿಠಾಯಿಯಂತೆ ಸೇವಿಸಿ.

ಇದನ್ನೂ ಓದಿ: Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

Custard Apple: ಸೀತಾಫಲ ಹಣ್ಣು ಸೇವಿಸುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!