Black Pepper Benefits: ನಾಲ್ಕು ಕಾಳು ಕರಿಮೆಣಸನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ

ಕರಿಮೆಣಸು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು, ಅದನ್ನು ಅನೇಕ ರೋಗಗಳು ಮತ್ತು ದೈಹಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

Black Pepper Benefits: ನಾಲ್ಕು ಕಾಳು ಕರಿಮೆಣಸನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ
ಕರಿಮೆಣಸು
Follow us
| Updated By: preethi shettigar

Updated on: Jul 31, 2021 | 7:42 AM

ಇತ್ತೀಚಿನ ದಿನಗಳಲ್ಲಿ ವಿವಿಧ ಕಾಯಿಲೆಗಳಿಂದ ಬಳಲುವುದು ದಿನಚರಿಯಾಗಿದೆ. ವಯಸ್ಕರಿಂದ ಹಿಡಿದು ಯುವಕರ ವರೆಗೆ ಎಲ್ಲರೂ ಒಂದಿಲ್ಲಾ ಒಂದು ಆರೋಗ್ಯ ಸಮಸ್ಯೆಗೆ ಗುರಿಯಾಗುತ್ತಾರೆ. ಆದಾಗ್ಯೂ ಅನೇಕ ಕಾಯಿಲೆಗಳನ್ನು ಕಡಿಮೆ ಮಾಡಲು ನಮ್ಮ ಮನೆಯಲ್ಲಿಯೇ ನೈಸರ್ಗಿಕ ಔಷಧಿಗಳಿವೆ. ಆದರೆ ಅವುಗಳ ಉಪಯೋಗಗಳ ಬಗ್ಗೆ ಯಾರಿಗೂ ತಿಳಿದಿಲ್ಲ. ಕರಿಮೆಣಸು ಅಂತಹ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ಭಾರತೀಯರು ಅನಾದಿ ಕಾಲದಿಂದಲೂ ಕರಿಮೆಣಸನ್ನು ಮಸಾಲೆ ಪದಾರ್ಥವಾಗಿ ಬಳಸುತ್ತಿದ್ದಾರೆ. ಕರಿ ಮೆಣಸನ್ನು ಆಯುರ್ವೇದದಲ್ಲಿಯೂ ಬಳಸಲಾಗುತ್ತದೆ. ಕರಿಮೆಣಸು ಅಡುಗೆಗೆ ಉತ್ತಮ ರುಚಿ ನೀಡುವುದಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣವನ್ನು ಹೊಂದಿದೆ.

ಕರಿಮೆಣಸು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು, ಅದನ್ನು ಅನೇಕ ರೋಗಗಳು ಮತ್ತು ದೈಹಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

ತೂಕ ನಷ್ಟಕ್ಕೆ ಸಹಕಾರಿ ಕರಿಮೆಣಸು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೂರ ಮಾಡುತ್ತದೆ. ಕರಿಮೆಣಸು ಕೊಬ್ಬನ್ನು ಕರಗಿಸುವ ಗುಣಗಳನ್ನು ಹೊಂದಿದೆ. ವಿಶೇಷವಾಗಿ ಪ್ರತಿದಿನ ನಾಲ್ಕು ಕರಿಮೆಣಸಿನಕಾಯಿಗಳನ್ನು ಅಗಿದು ನುಂಗುವುದರಿಂದ ಅಧಿಕ ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು ಎಂದು ವೈದ್ಯಕೀಯ ತಜ್ಞರು ಸೂಚಿಸುತ್ತಾರೆ. ಇನ್ನು ಪ್ರತಿದಿನ ಬೆಳಿಗ್ಗೆ ಒಂದು ಲೋಟ ನೀರಿಗೆ ಕರಿಮೆಣಸು, ಪುದೀನಾವನ್ನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿನ ಕಲ್ಮಶಗಳ ಜತೆಗೆ ಕೊಬ್ಬು ಕರಗುತ್ತದೆ. ಇದು ಅಧಿಕ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ ಊಟದ ನಂತರ ಕೆಲವರಿಗೆ ಗ್ಯಾಸ್ಟಿಕ್ ಸಮಸ್ಯೆಗಳು ಉಂಟಾಗುತ್ತದೆ. ಅಂತವರು ತಮ್ಮ ಆಹಾರದಲ್ಲಿ ಹಸಿ ಮೆಣಸಿನಕಾಯಿಗಿಂತ ಕರಿಮೆಣಸು ಬಳಸುವುದು ಸೂಕ್ತ. ಇದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಕಡಿಮೆಯಾಗುತ್ತದೆ.

ಶೀತ ನಿವಾರಕ ಶೀತ ಮತ್ತು ಕೆಮ್ಮಿನಿಂದ ಬಳಲುವವರು ಕರಿಮೆಣಸಿನ ಕಷಾಯ ಮಾಡಿ ಕುಡಿಯುವುದು ಸೂಕ್ತ. ಇದು ಗಂಟಲು ನೋವನ್ನು ಕೂಡ ದೂರ ಮಾಡುತ್ತದೆ. ಕರಿಮೆಣಸು, ಶುಂಠಿ ರಸ, ತುಳಸಿ ಎಲೆಗಳು, ದಾಲ್ಚಿನ್ನಿ ಪುಡಿಯನ್ನು ಸೇರಿಸಿ ಚಹಾದಂತೆ ಮಾಡಿ ಕುಡಿಯಿರಿ ಇದು ಕೆಮ್ಮು ದೂರ ಮಾಡುತ್ತದೆ.

ಹಲ್ಲುಗಳ ರಕ್ಷಕ ಹಲ್ಲಿನ ಆರೋಗ್ಯ ಕಾಪಾಡಲು ಕರಿಮೆಣಸನ್ನು ಬಳಸಿ. ಮುಖ್ಯವಾಗಿ ಹಲ್ಲುಜ್ಜುವಾಗ ಕರಿಮೆಣಸಿನ ಪುಡಿಯನ್ನು ಹಾಕಿ ಉಜ್ಜುವುದರಿಂದ ಹಲ್ಲು ಬಲಗೊಳ್ಳುತ್ತದೆ ಮತ್ತು ಬಣ್ಣ ಕೂಡ ಬಿಳಿಯಾಗುತ್ತದೆ. ಅಲ್ಲದೆ ವಸಡಿಗೆ ಸಂಬಂಧಿಸಿದ ಕಾಯಿಲೆ ಕೂಡ ದೂರವಾಗುತ್ತದೆ.

ಅಧಿಕ ರಕ್ತದೊತ್ತಡ ನಿವಾರಕ ಬಿಪಿಯನ್ನು ನಿಯಂತ್ರಿಸಲು ಕರಿಮೆಣಸನ್ನು ಸೇವಿಸಿ. ಹಾಗೆ ಸೇವಿಸಲು ಕಷ್ಟವಾದರೆ ಉಗುರು ಬೆಚ್ಚಗಿನ ನೀರಿಗೆ ಕರಿಮೆಣಸಿನ ಪುಡಿ ಹಾಕಿ ಕುಡಿಯಿರಿ. ಇದು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ದೂರ ಮಾಡುತ್ತದೆ.

ಇದನ್ನೂ ಓದಿ: ಮನೆಯೊಳಗೆ ಗಿಡ ನೆಡುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಹರಿಸಿ

Kadamba Tree: ಕದಂಬ ಮರದ ವಿಶೇಷತೆ ಮತ್ತು ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಲು, ಒಂದು ಗಿಡ ನೆಟ್ಟು ನೋಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ