AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carom Seeds: ಓಂ ಕಾಳು ರುಚಿಯ ಜತೆಗೆ ಹಲವು ಆರೋಗ್ಯಕರ ಗುಣಗಳನ್ನು ಹೊಂದಿದೆ

Health benefits: ಆಯುರ್ವೇದದಲ್ಲಿ ಓಂ ಕಾಳು ಪ್ರಮುಖ ಪಾತ್ರವನ್ನು ಹೊಂದಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ.

Carom Seeds: ಓಂ ಕಾಳು ರುಚಿಯ ಜತೆಗೆ ಹಲವು ಆರೋಗ್ಯಕರ ಗುಣಗಳನ್ನು ಹೊಂದಿದೆ
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 15, 2021 | 7:33 AM

ಓಂ ಕಾಳು ಅಥವಾ ಅಜ್ವಾನ (Ajwain) ಭಾರತೀಯ ಪಾಕಪದ್ಧತಿಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಗಳಲ್ಲಿ ಒಂದಾಗಿದೆ. ಇದನ್ನು ಮಸಾಲೆ ಮತ್ತು ಉಪ್ಪಿನಕಾಯಿಗಳಲ್ಲಿ ಬಳಸಲಾಗುತ್ತದೆ. ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸಲು ಈ ಬೀಜಗಳು ಸಹಾಯ ಮಾಡುತ್ತವೆ. ಓಂ ಕಾಳನ್ನು(Carom Seeds) ಸುಗಂಧಕ್ಕಾಗಿ ಬಳಸಲಾಗುತ್ತದೆ. ಆಯುರ್ವೇದದಲ್ಲಿ ಓಂ ಕಾಳು ಪ್ರಮುಖ ಪಾತ್ರವನ್ನು ಹೊಂದಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ.

ಜೀರ್ಣಾಂಗ ಸಮಸ್ಯೆಯನ್ನು ನಿವಾರಿಸುತ್ತದೆ ಓಂ ಕಾಳು ನಮ್ಮ ದೇಹದ ಜೀರ್ಣಕಾರಿ ಅಂಗಗಳಾದ ಹೊಟ್ಟೆ, ಕರುಳು ಮತ್ತು ಹುಣ್ಣಿನಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಓಂ ಕಾಳು ಹೆಚ್ಚಾಗಿ ಆಮ್ಲೀಯತೆ, ಗ್ಯಾಸ್ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ನೀವು ಅರ್ಧ ಟೀ ಚಮಚ ಓಂ ಕಾಳು ಜಗಿದು ರಸ ನುಂಗಬೇಕು ಅಥವಾ ನೀರಿನೊಂದಿಗೆ ಈ ಕಾಳನ್ನು ಕುದಿಸಿ ಕೂಡ ಕುಡಿಯಬಹುದು.

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ ಓಂ ಕಾಳಿನಲ್ಲಿ ಥೈಮೋಲ್ ಇರುತ್ತದೆ. ಇದು ರೋಗಾಣುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಸಣ್ಣ ಚರ್ಮದ ಕಿರಿಕಿರಿಯನ್ನು ನಿಮಿಷಗಳಲ್ಲಿ ಗುಣಪಡಿಸಲು ಓಂ ಕಾಳನ್ನು ಬಳಸಬಹುದು. ಈ ಬೀಜಗಳನ್ನು ಪುಡಿಮಾಡಿ ಪೇಸ್ಟ್ ರೀತಿಯಾಗಿ ಕೂಡ ಬಳಸಬಹುದು. ಈ ಬೀಜಗಳನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ತಯಾರಿಸಿ, ಮೊಡವೆ ಕಲೆಗಳ ಮೇಲೆ ಕನಿಷ್ಠ 15 ನಿಮಿಷಗಳ ಕಾಲ ಹಚ್ಚಿ ನಂತರ ತೊಳೆಯಿರಿ. ಓಂ ಕಾಳು ಕೂದಲಿನಲ್ಲಿನ ಬಿಳಿ ಬಣ್ಣವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಕೂದಲು ಉದುರುವಿಕೆಯನ್ನು ಸಹ ನಿವಾರಿಸುತ್ತದೆ. ಕೂದಲಿನ ಬೂದು ಬಣ್ಣವನ್ನು ಗುಣಪಡಿಸಲು ನೀವು ಓಂ ಕಾಳು ಸೇವಿಸಲು ಬಯಸಿದರೆ, ರಾತ್ರಿ ಇಡೀ ಈ ಕಾಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕಾಲಿ ಹೊಟ್ಟೆಗೆ ಈ ನೀರನ್ನು ಕುಡಿಯಿರಿ.

ಇತರ ಆರೋಗ್ಯ ಪ್ರಯೋಜನಗಳು ಓಂ ಕಾಳಿನಲ್ಲಿ ನಾರಿನಾಂಶ ಅಧಿಕವಾಗಿದೆ. ಇದು ಹಸಿವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ದೇಹದಿಂದ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ. ಇದರಲ್ಲಿರುವ ಮೊನೊ ಮತ್ತು ಪಾಲಿ ಅಪರ್ಯಾಪ್ತ ಕೊಬ್ಬುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಓಂ ಕಾಳು ಸಂಧಿವಾತ, ಕೀಲುಗಳ ಸುತ್ತಲಿನ ಕೆಂಪು ಬಣ್ಣವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಏಕೆಂದರೆ ಇದು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಇದು ನೋವನ್ನು ಶಮನಗೊಳಿಸಲು ಮತ್ತು ಸಂಧಿವಾತದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆಹಾರದ ರುಚಿ ಹೆಚ್ಚಿಸುತ್ತದೆ ಓಂ ಕಾಳಿನಲ್ಲಿ ಪೋಷಕಾಂಶಗಳಿವೆ. ಇದು ಆಹಾರದ ಪರಿಮಳ ಮತ್ತು ರುಚಿಯನ್ನು ಹೆಚ್ಚಿಸುತ್ತದೆ. ನೀವು ಓಂ ಕಾಳನ್ನು ಹಲವು ವಿಧಗಳಲ್ಲಿ ಬಳಸಬಹುದು. ದಾಲ್, ಕರಿ ಅಥವಾ ಸಾಂಬಾರು ಮಾಡುವಾಗ ನೀವು ಓಂ ಕಾಳಿನ ಪುಡಿಯನ್ನು ಬಳಸಬಹುದು. ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ಜೀರಿಗೆ ಬದಲು ಓಂ ಕಾಳು ಬಳಸಬಹುದು. ಇದನ್ನು ಮೌತ್ ಫ್ರೆಶ್ನರ್ ಆಗಿ ಕೂಡ ಬಳಸಬಹುದು.

ಇದನ್ನೂ ಓದಿ: Weight Loss Tips: ತೂಕ ಇಳಿಕೆಗೆ ಕಲ್ಲಂಗಡಿ ಬೀಜದಿಂದ ತಯಾರಿಸಿದ ಲಡ್ಡು ಸೇವಿಸಿ

Guava Side Effect: ಪೇರಲೆ ಹಣ್ಣಿನ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ!

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ