ಕ್ಯಾರೆಟ್ ಅನ್ನು ಸಾಮಾನ್ಯವಾಗಿ ಎಲ್ಲರೂ ಹಸಿಯಾಗಿ ತಿನ್ನಲು ಇಷ್ಟಪಡುತ್ತಾರೆ. ಅಂತೆಯೇ ಪುಲಾವ್ ಮತ್ತು ಇನ್ನಿತರ ಆಹಾರ ಪದಾರ್ಥಗಳಲ್ಲಿ ಕೂಡ ಕ್ಯಾರೆಟ್ ಅನ್ನು ಬಳಸಲಾಗುತ್ತದೆ. ಆದರೆ ಕ್ಯಾರೆಟ್ ಅನ್ನು ಹಾಗೇ ತಿನ್ನುವ ಬದಲು ಜ್ಯೂಸ್ ರೂಪದಲ್ಲಿ ತೆಗೆದುಕೊಳ್ಳುವುದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಕ್ಯಾರೆಟ್ ಅನ್ನು ಈ ರೀತಿಯಾಗಿ ಸೇವಿಸುವುದರಿಂದ ಕಣ್ಣಿನ ಆರೋಗ್ಯಕ್ಕೆ ರಕ್ಷಣೆ ದೊರೆತಂತಾಗುತ್ತದೆ. ಕ್ಯಾರೆಟ್ನಲ್ಲಿ ಅನೇಕ ಜೀವಸತ್ವಗಳು ಮತ್ತು ಖನಿಜಗಳು ಇದ್ದು, ಪ್ರತಿ ದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರ ಬದಲಾವಣೆಗಳು ನಮ್ಮ ದೇಹದಲ್ಲಾಗುತ್ತವೆ.
ಸ್ತನ ಕ್ಯಾನ್ಸರ್ ನಿವಾರಣೆ
ಕ್ಯಾರೆಟ್ ಜ್ಯೂಸ್ ಮಹಿಳೆಯರಿಗೆ ತುಂಬಾ ಒಳ್ಳೆಯದು. ಪ್ರತಿದಿನ ಒಂದು ಲೋಟ ಕ್ಯಾರೆಟ್ ಜ್ಯೂಸ್ ಸೇವಿಸಿದರೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ತುಂಬಾ ಕಡಿಮೆ. ಕ್ಯಾರೆಟ್‌ನಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತದೆ. ಗರ್ಭಿಣಿಯರಿಗೂ ಕೂಡ ಕ್ಯಾರೆಟ್ ಜ್ಯೂಸ್ ತುಂಬಾ ಒಳ್ಳೆಯದು.
ಕಣ್ಣಿನ ಆರೋಗ್ಯ ಸುಧಾರಿಸುತ್ತದೆ
ಕ್ಯಾರೆಟ್‌ನಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ದೃಷ್ಟಿಯಲ್ಲಿನ ದೋಷವನ್ನು ದೂರ ಮಾಡಲು ನರಗಳಿಗೆ ಸಹಾಯಕವಾಗಿದೆ. ಸದಾ ಕಾಲ ಕಂಪ್ಯೂಟರ್ ನೋಡುವವರು ಕ್ಯಾರೆಟ್ನಿಂದ ತಯಾರಿಸಿದ ಜ್ಯೂಸ್ ಕುಡಿಯುವುದು ಉತ್ತಮ ಅಭ್ಯಾಸ.
ಮುಖದ ಸೌಂದರ್ಯ ಹೆಚ್ಚಿಸುತ್ತದೆ
ಮುಖದ ಸೌಂದರ್ಯವನ್ನು ಸುಧಾರಿಸುತ್ತದೆ. ದೇಹದ ಚರ್ಮ ಮೃದುವಾಗಿಸುವಲ್ಲಿ ಕ್ಯಾರೆಟ್ ಜ್ಯೂಸ್ ಪ್ರಮುಖ ಪಾತ್ರ ವಹಿಸುತ್ತದೆ. ಸುಕ್ಕುಗಳನ್ನು ದೂರ ಮಾಡುವ ಮೂಲಕ ಮುಖಕ್ಕೆ ಮತ್ತು ಚರ್ಮಕ್ಕೆ ಕಾಂತಿಯನ್ನು ನೀಡುವಲ್ಲಿಯೂ ಇದು ಸಹಾಯಕವಾಗಿದೆ.
ಹೃದಯಕ್ಕೆ ಒಳ್ಳೆಯದು
ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಕ್ಯಾರೆಟ್ ಜ್ಯೂಸ್ ದೂರವಿಡುತ್ತದೆ. ಇದರಲ್ಲಿರುವ ಪೋಷಕಾಂಶ, ಕ್ಯಾಲ್ಸಿಯಂ ಹೃದಯಕ್ಕೆ ಹೆಚ್ಚು ಶಕ್ತಿ ನೀಡುತ್ತದೆ.
ಮಧುಮೇಹ ನಿವಾರಕ
ಮಧುಮೇಹಿಗಳಿಗೆ ಕ್ಯಾರೆಟ್ ಜ್ಯೂಸ್ ತುಂಬಾ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕ್ಯಾರೆಟ್ನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸಣ್ಣಪುಟ್ಟ ಕಾಯಿಲೆಗಳನ್ನು ತಡೆದುಕೊಳ್ಳುವ ಶಕ್ತಿಯನ್ನು ಕೂಡ ಕ್ಯಾರೆಟ್ ಜ್ಯೂಸ್ ನೀಡುತ್ತದೆ. ಸಾಕಷ್ಟು ಕಬ್ಬಿಣಾಂಶವನ್ನು ಇದು ಹೊಂದಿದ್ದು, ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಚೆನ್ನಾಗಿ ಉತ್ಪತ್ತಿಯಾಗಲು ಸಹಕಾರಿಯಾಗಿದೆ.
ಜೀರ್ಣಕ್ರಿಯೆಗೆ ಸಹಕಾರಿ
ಜೀರ್ಣಕ್ರಿಯೆಗೆ ಸಂಬಂಧಿಸಿದ ಕಾಯಿಲೆಯನ್ನು ಕ್ಯಾರೆಟ್ ಜ್ಯೂಸ್ ದೂರ ಮಾಡುತ್ತದೆ. ಇದರ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ನರ ದೌರ್ಬಲ್ಯ ಕಡಿಮೆಯಾಗುತ್ತದೆ. ಕ್ಯಾರೆಟ್ ಜ್ಯೂಸ್ ಅನ್ನು ಪ್ರತಿದಿನ ಸೇವಿಸುವುದರಿಂದ ಅಪೌಷ್ಟಿಕತೆ ಸಮಸ್ಯೆ ಕಡಿಮೆಯಾಗುತ್ತದೆ.
ಇದನ್ನೂ ಓದಿ:
Health Tips: ಬೀಟ್ರೂಟ್ ಡಿಟಾಕ್ಸ್ ಜ್ಯೂಸ್; ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ
Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ