Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಬಿಸಿ ಅಥವಾ ತಣ್ಣಗಿನ ಹಾಲಿನಲ್ಲಿ ಯಾವುದು ಒಳ್ಳೆಯದು ಎಂದು ತಿಳಿಯಿರಿ

ಸಾಮಾನ್ಯವಾಗಿ ಹಾಲು ಕುಡಿಯುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ. ಅದಾಗ್ಯೂ ತಣ್ಣನೆಯ ಹಾಲು ದೇಹಕ್ಕೆ ಒಳ್ಳೆಯದೋ ಅಥವಾ ಬಿಸಿ ಹಾಲು ಕುಡಿದರೆ ಒಳ್ಳೆಯದೋ ಎಂಬ ಗೊಂದಲ ಹಲವರಲ್ಲಿ ಇದೆ. ಹೀಗಾಗಿ ಮೊದಲು ಈ ಗೊಂದಲವನ್ನು ನಿವಾರಿಸಿಕೊಳ್ಳುವುದು ಸೂಕ್ತ.

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಬಿಸಿ ಅಥವಾ ತಣ್ಣಗಿನ ಹಾಲಿನಲ್ಲಿ ಯಾವುದು ಒಳ್ಳೆಯದು ಎಂದು ತಿಳಿಯಿರಿ
ಹಾಲು
Follow us
TV9 Web
| Updated By: preethi shettigar

Updated on: Jul 10, 2021 | 7:50 AM

ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಹಾಲು ಎಲ್ಲಾ ವಯಸ್ಸಿನವರಿಗೂ ಉಪಯುಕ್ತವಾಗಿದೆ. ಅನಾರೋಗ್ಯದ ವ್ಯಕ್ತಿಯಿಂದ ಆರೋಗ್ಯವಂತ ವ್ಯಕ್ತಿಯ ವರೆಗೆ ಎಲ್ಲರೂ ಹಾಲು ಕುಡಿಯುವುದು ಒಳ್ಳೆಯದು. ಆದರೆ ಕೆಲವರು ಬಿಸಿ ಹಾಲು ಕುಡಿಯಲು ಇಷ್ಟಪಡುತ್ತಾರೆ. ಇನ್ನು ಕೆಲವರು ತಣ್ಣನೆಯ ಹಾಲು ಕುಡಿಯಲು ಬಯಸುತ್ತಾರೆ. ಸಾಮಾನ್ಯವಾಗಿ ಹಾಲು ಕುಡಿಯುವುದು ಉತ್ತಮ ಎಂದು ವೈದ್ಯರು ಹೇಳುತ್ತಾರೆ. ಅದಾಗ್ಯೂ ತಣ್ಣನೆಯ ಹಾಲು ದೇಹಕ್ಕೆ ಒಳ್ಳೆಯದೋ ಅಥವಾ ಬಿಸಿ ಹಾಲು ಕುಡಿದರೆ ಒಳ್ಳೆಯದೋ ಎಂಬ ಗೊಂದಲ ಹಲವರಲ್ಲಿ ಇದೆ. ಹೀಗಾಗಿ ಮೊದಲು ಈ ಗೊಂದಲವನ್ನು ನಿವಾರಿಸಿಕೊಳ್ಳುವುದು ಸೂಕ್ತ.

ಹಾಲಿನ ಪ್ರಯೋಜನಗಳೇನು? ಹಾಲು ಒಂದು ಪಾನೀಯವಾಗಿರಬಹುದು. ಆದರೆ ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಭಾರತೀಯ ಆಹಾರದಲ್ಲಿ ಹಾಲು ಒಂದು ಪ್ರಮುಖ ಭಾಗವಾಗಿದೆ. ಇದನ್ನು ಹಾಗೇ ಸೇವಿಸಬಹುದು ಮತ್ತು ಅದರಿಂದ ವಿವಿಧ ಉತ್ಪನ್ನಗಳನ್ನು ಸಹ ತಯಾರಿಸಬಹುದು. ಹಾಲಿನಲ್ಲಿ ಕ್ಯಾಲ್ಸಿಯಂ ಮಾತ್ರವಲ್ಲ, ಪ್ರೋಟೀನ್, ವಿಟಮಿನ್ ಎ, ಬಿ 1, ಬಿ 2, ಬಿ 12, ಡಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಮುಂತಾದ ಅನೇಕ ಪೋಷಕಾಂಶಗಳಿವೆ. ಈ ಪೌಷ್ಠಿಕಾಂಶದ ಗುಣಗಳಿಗಾಗಿ ಆಯುರ್ವೇದದಲ್ಲಿ ಹಾಲಿಗೆ ವಿಶೇಷ ಸ್ಥಾನವಿದೆ.

ತಣ್ಣನೆಯ ಹಾಲು ಕುಡಿಯುವುದರಿಂದಾಗುವ ಪ್ರಯೋಜನಗಳು ಬೇಸಿಗೆಯಲ್ಲಿ ತಣ್ಣನೆಯ ಹಾಲು ಕುಡಿಯುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ತಣ್ಣನೆಯ ಹಾಲಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಆದ್ದರಿಂದ ತಣ್ಣಗಿನ ಹಾಲು ಕುಡಿಯುವುದರಿಂದ ಆಮ್ಲೀಯತೆ ಮತ್ತು ಹೊಟ್ಟೆ ನೋವು ಮುಂತಾದ ತೊಂದರೆಗಳು ದೂರವಾಗುತ್ತವೆ. ಆದರೆ ರಾತ್ರಿ ಮಲಗುವಾಗ ತಣ್ಣನೆಯ ಹಾಲು ಕುಡಿಯುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ, ತಣ್ಣನೆಯ ಹಾಲನ್ನು ಮಲಗುವ ಕಾಲಕ್ಕೆ ತೆಗೆದುಕೊಳ್ಳುವುದರಿಂದ ಕೆಲವೊಮ್ಮೆ ಜೀರ್ಣಕಾರಿ ಸಮಸ್ಯೆಗಳಾಗುತ್ತದೆ. ಕೆಮ್ಮು ಮತ್ತು ಸೀನುವಿಕೆಯಂತಹ ಸಮಸ್ಯೆಗಳೂ ಸಂಭವಿಸಬಹುದು. ಆದ್ದರಿಂದ ರಾತ್ರಿಯಲ್ಲಿ ತಣ್ಣನೆಯ ಹಾಲು ಕುಡಿಯದಿರುವುದು ಉತ್ತಮ.

ಬಿಸಿ ಹಾಲು ಕುಡಿಯುವುದರಿಂದಾಗುವ ಪ್ರಯೋಜನಗಳು ಮಳೆಗಾಲ ಮತ್ತು ಚಳಿಗಾಲದಲ್ಲಿ ನೀವು ರಾತ್ರಿಯಲ್ಲಿ ಬಿಸಿ ಹಾಲು ಕುಡಿದು ಮಲಗುವುದು ಉತ್ತಮ. ಇದು ಹೆಚ್ಚು ಚಳಿಯಿಂದ ನಡುಕ ಉಂಟಾಗುವ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಬೇಗ ನಿದ್ರೆ ಬರುವಂತೆ ಮಾಡುತ್ತದೆ. ಬಿಸಿ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್-ಡಿ ಮತ್ತು ಪೊಟ್ಯಾಸಿಯಮ್ ಕೂಡ ಇರುತ್ತದೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಿಸಿ ಹಾಲು ಯಾವುದೇ ಸಮಯದಲ್ಲಿ ಸುಲಭವಾಗಿ ಜೀರ್ಣವಾಗುತ್ತದೆ.

ಇದನ್ನೂ ಓದಿ: Health Benefits: ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ಮತ್ತು ಆರೋಗ್ಯದಲ್ಲಿನ ಬದಲಾವಣೆಯ ಬಗ್ಗೆ ಗಮನಹರಿಸಿ

Ragi Ambali: ರಾಗಿ ಅಂಬಲಿ ತಯಾರಿಸುವ ವಿಧಾನದ ಜತೆ ಇದನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್