Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ

ಡ್ರ್ಯಾಗಪ್ ಫ್ರೂಟ್ ತಿನ್ನುವುದರಿಂದ ದೇಹಕ್ಕೆ ಎಲ್ಲಾ ರೀತಿಯ ಜೀವಸತ್ವಗಳು ಮತ್ತು ಖನಿಜಗಳು ದೊರೆಯುತ್ತವೆ. ಡ್ರ್ಯಾಗಪ್ ಫ್ರೂಟ್ ಗುಲಾಬಿ ಬಣ್ಣದ್ದಾಗಿದ್ದು, ಒಳಗೆ ಬಿಳಿ ತಿರುಳು ಇರುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ಕಪ್ಪು ಬೀಜಗಳಿವೆ. ಈ ಹಣ್ಣು ಸೇವಿಸುವುದರಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು.

Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ
ಡ್ರ್ಯಾಗನ್​ ಫ್ರೂಟ್
Follow us
| Updated By: preethi shettigar

Updated on: Jul 17, 2021 | 7:47 AM

ನಮ್ಮ ದೇಹವನ್ನು ಆರೋಗ್ಯವಾಗಿಡಲು ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದರಲ್ಲೂ ಇತ್ತೀಚೆಗೆ ಆಹಾರ, ಮಾನಸಿಕ ಒತ್ತಡ, ಖಿನ್ನತೆ, ಇನ್ನಿತರ ತೊಂದರೆಗಳಿಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲವು ಪದಾರ್ಥಗಳನ್ನು, ಹಣ್ಣು- ತರಕಾರಿಗಳನ್ನು ಸೇವಿಸುವುದು ಉತ್ತಮ. ತಜ್ಞರ ಪ್ರಕಾರ ಆರೋಗ್ಯವನ್ನು ಸುಧಾರಿಸಲು ವಿವಿಧ ಹಣ್ಣುಗಳನ್ನು ಸೇವಿಸಬೇಕು. ಅದರಲ್ಲೂ ಡ್ರ್ಯಾಗಪ್ ಫ್ರೂಟ್ (Dragon fruit) ತಿನ್ನುವುದರಿಂದ ದೇಹಕ್ಕೆ ಎಲ್ಲಾ ರೀತಿಯ ಜೀವಸತ್ವಗಳು ಮತ್ತು ಖನಿಜಗಳು ದೊರೆಯುತ್ತವೆ. ಡ್ರ್ಯಾಗಪ್ ಫ್ರೂಟ್ ಗುಲಾಬಿ ಬಣ್ಣದ್ದಾಗಿದ್ದು, ಒಳಗೆ ಬಿಳಿ ತಿರುಳು ಇರುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ಕಪ್ಪು ಬೀಜಗಳಿವೆ. ಈ ಹಣ್ಣು ಸೇವಿಸುವುದರಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು.

ಡ್ರ್ಯಾಗನ್​ ಫ್ರೂಟ್ ಎಂಬ ಹೆಸರು ಹೇಗೆ ಬಂತು? ಡ್ರ್ಯಾಗನ್ ಚೀನಾದಲ್ಲಿ ಇರುವ ಒಂದು ಪವಿತ್ರ ಪ್ರಾಣಿ. ತನ್ನ ಬಾಯಿಯ ಮೂಲಕ ಅಗ್ನಿಯನ್ನು ಹೊತ್ತಿಸುವ ಮತ್ತು ಶತ್ರುಗಳನ್ನು ಕೊಲ್ಲುವ ಪ್ರಾಣಿಯನ್ನು ಚೀನಿಯರು ಡ್ರ್ಯಾಗನ್​ ಎಂದು ಕರೆಯುತ್ತಿದ್ದರು ಮತ್ತು ಈಗಲೂ ಈ ಪ್ರಾಣಿ ಜೀವಂತವಾಗಿದೆ ಎಂದು ನಂಬುತ್ತಾರೆ. ಆದರೆ ಈ ಹಣ್ಣನ್ನು ಡ್ರ್ಯಾಗನ್​ ಫ್ರೂಟ್ ಎಂದು ಹೆಸರಿಸಲು ಕಾರಣ ಅದರ ಆಕರ್ಷಕ ಬಣ್ಣ ಮತ್ತು ನೋಟ. ಗುಲಾಬಿ ಬಣ್ಣದಲ್ಲಿರುವ ಈ ಹಣ್ಣಿನ ಸುತ್ತಲಿನ ದಳಗಳು ಹಳದಿ ಮತ್ತು ಹಸಿರುಯುತವಾಗಿರುತ್ತದೆ. ಇದು ದಕ್ಷಿಣ ಅಮೆರಿಕಾದಲ್ಲಿ ಈ ಹಣ್ಣನ್ನು ಮೊದಲಿಗೆ ಬೆಳೆಯಲು ಆರಂಭಿಸಿದರು. ನಂತರದಲ್ಲಿ ಪೂರ್ವ ಏಷ್ಯಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಜನರು ಈ ಹಣ್ಣನ್ನು ಬೆಳೆಯಲಾರಂಭಿದರು. ಇತ್ತೀಚೆಗೆ ಭಾರತದಲ್ಲಿ ಕೂಡ ಈ ಹಣ್ಣನ್ನು ಬೆಳೆಯುತ್ತಾರೆ.

ಡ್ರ್ಯಾಗನ್ ಹಣ್ಣಿನ ಉಪಯೋಗಗಳು ಈ ಡ್ರ್ಯಾಗನ್ ಹಣ್ಣು ಕಡಿಮೆ ಕ್ಯಾಲೊರಿಯನ್ನು ಹೊಂದಿದೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದ್ದು, ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಕ್ಯಾರೊಟಿನಾಯ್ಡ್​ಗಳು, ಪಾಲಿಫಿನಾಲ್​ಗಳಂತಹ ಅಮೂಲ್ಯ ಪೋಷಕಾಂಶಗಳು ಲಭ್ಯವಿದೆ. ಡ್ರ್ಯಾಗನ್ ಹಣ್ಣಿನ ಬೆಲೆ ಸ್ವಲ್ಪ ಹೆಚ್ಚಾಗಿದ್ದರೂ, ಇದು ದೇಹಕ್ಕೆ ಶಕ್ತಿ ಹೆಚ್ಚಿಸುವ ಪೋಷಕಾಂಶಗಳನ್ನು ಒದಗಿಸುತ್ತದೆ. ಅದಕ್ಕಾಗಿಯೇ ಈ ಹಣ್ಣನ್ನು ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ.

ರೋಗಗಳನ್ನು ದೂರವಿಡುವ ಹಣ್ಣು ಪ್ರಸ್ತುತ ಯುಗದಲ್ಲಿ ಮಾನವರು ಒಂದಿಲ್ಲಾ ಒಂದು ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ವಿವಿಧ ಸೋಂಕುಗಳು ಮತ್ತು ರೋಗಗಳಿಂದ ದೂರ ಇರಲು ಈ ಹಣ್ಣು ಸೇವಿಸಿ. ಡ್ರ್ಯಾಗನ್ ಹಣ್ಣು ತಿನ್ನುವುದು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಡ್ರ್ಯಾಗನ್ ಹಣ್ಣಿನಲ್ಲಿ ನೈಸರ್ಗಿಕವಾಗಿ ಕಂಡುಬರುವ ಉತ್ಕರ್ಷಣ ನಿರೋಧಕಗಳು, ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವ ಅಂಶಗಳಿದೆ. ಡ್ರ್ಯಾಗನ್‌ನ ಹೆಚ್ಚಿನ ಫೈಬರ್ ಅಂಶವು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ ತುಂಬಾ ಉಪಯುಕ್ತವಾಗಿದ್ದು, ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಡ್ರ್ಯಾಗನ್ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ.

ಪ್ರತಿರಕ್ಷಣಾ ಅಂಶವನ್ನು ಹೊಂದಿದೆ ಈ ಡ್ರ್ಯಾಗನ್ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಕ್ಯಾರೊಟಿನಾಯ್ಡ್​ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಿಳಿ ರಕ್ತ ಕಣಗಳನ್ನು ರಕ್ಷಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ದೇಹದಲ್ಲಿ ಹೆಚ್ಚಿಸುತ್ತದೆ. ಇದು ಸೋಂಕು ಅಥವಾ ಇತರೆ ಯಾವುದೇ ಕಾಯಿಲೆಗಳು ನಮ್ಮನ್ನು ಹಾನಿ ಮಾಡದಂತೆ ತಡೆಯುತ್ತದೆ. ಸೇವಿಸಿದ ಆಹಾರವನ್ನು ಜೀರ್ಣಿಸಿಕೊಳ್ಳಲು ಆಮ್ಲಜನಕದ ಅಗತ್ಯವಿದೆ. ಶಿಟ್ ತುಂಬಿದ ಆಮ್ಲಜನಕವನ್ನು ಪಡೆಯಬೇಕಾದರೆ ಕಬ್ಬಿಣವು ಹೇರಳವಾಗಿರಬೇಕು. ಡ್ರ್ಯಾಗನ್ ಹಣ್ಣು ತಿನ್ನುವುದರಿಂದ ಕಬ್ಬಿಣದ ಕೊರತೆಯನ್ನು ನಿವಾರಿಸಬಹುದು. ಇತರ ಎಲ್ಲಾ ಹಣ್ಣುಗಳಿಗೆ ಹೋಲಿಸಿದರೆ ಡ್ರ್ಯಾಗನ್ ಹಣ್ಣಿನಲ್ಲಿ ಮೆಗ್ನೀಸಿಯಮ್ ಅಧಿಕವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಡ್ರ್ಯಾಗನ್ ಹಣ್ಣುಗಳು ಅತ್ಯುತ್ತಮವಾಗಿದೆ. ಏಕೆಂದರೆ ಇದು ಹೆಚ್ಚು ಕ್ಯಾಲೊರಿಗಳನ್ನು ಹೊಂದಿರುವುದಿಲ್ಲ. ಈ ಹಣ್ಣಿನಲ್ಲಿನ ಬೀಜಗಳನ್ನು ಕೂಡ ಸೇವಿಸುವುದು ಉತ್ತಮ.

ಡ್ರ್ಯಾಗನ್ ಹಣ್ಣು ಹೆಚ್ಚು ದುಬಾರಿಯಾಗಿದೆ ಈ ಹಣ್ಣುಗಳು ಪ್ರಸ್ತುತ ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಪ್ರತಿ ಹಣ್ಣಿನ ಬೆಲೆ (ಸುಮಾರು 400 ಗ್ರಾಂ ತೂಕಕ್ಕೆ) 70 ರಿಂದ100 ರೂಪಾಯಿ ಇರುತ್ತದೆ. ಈ ಹಣ್ಣು ಸ್ವಲ್ಪ ಹುಳಿ ಮತ್ತು ಸ್ವಲ್ಪ ಸಿಹಿಯಾದ ರುಚಿಯನ್ನು ನೀಡುತ್ತದೆ.

ಇದನ್ನೂ ಓದಿ: Health Benefits: ಚೀನಿಕಾಯಿಯ ಆರೋಗ್ಯಕರ ಗುಣಗಳ ಬಗ್ಗೆ ತಿಳಿದರೆ, ಇದನ್ನು ದಿನನಿತ್ಯ ತಿನ್ನುವ ಅಭ್ಯಾಸ ಮಾಡಿಕೊಳ್ಳುತ್ತೀರಿ

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ