Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

Gram water: ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿಟಮಿನ್​ಗಳಿಂದ ಸಮೃದ್ಧವಾಗಿದೆ. ಇದನ್ನು ನೇರವಾಗಿ ನೀರಿನಲ್ಲಿ ನೆನೆಸಿ ಕುಡಿಯಬಹುದು ಅಥವಾ ಈ ಕಡಲೆಕಾಳನ್ನು ಕುದಿಸಿ ಜೀರಿಗೆ, ಉಪ್ಪು ಮತ್ತು ನಿಂಬೆ ರಸ ಸೇರಿಸಿ ತಿನ್ನಬಹುದು.

Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
ನೆನೆಸಿದ ಕಡಲೆಕಾಳು
Follow us
TV9 Web
| Updated By: preethi shettigar

Updated on:Aug 04, 2021 | 9:30 AM

ಬೇಳೆಕಾಳುಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಅದರಲ್ಲೂ ರಾತ್ರಿ ನೆನೆಸಿಟ್ಟು ಬೆಳಿಗ್ಗೆ ತಿನ್ನುವ ಕಡಲೆಕಾಳು ದೇಹಕ್ಕೆ ಹಲವು ರೀತಿಯಲ್ಲಿ ಒಳ್ಳೆಯದು. ಇದು ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿಟಮಿನ್​ಗಳಿಂದ ಸಮೃದ್ಧವಾಗಿದೆ. ಇದನ್ನು ನೇರವಾಗಿ ನೀರಿನಲ್ಲಿ ನೆನೆಸಿ ಕುಡಿಯಬಹುದು ಅಥವಾ ಈ ಕಡಲೆಕಾಳನ್ನು ಕುದಿಸಿ ಜೀರಿಗೆ, ಉಪ್ಪು ಮತ್ತು ನಿಂಬೆ ರಸ ಸೇರಿಸಿ ತಿನ್ನಬಹುದು. ಇನ್ನು ನೆನೆಸಿದ ಕಡಲೆಕಾಳಿನ ನೀರಿನಿಂದ (Gram Water) ಆನೇಕ ಆರೋಗ್ಯಕರ ಪ್ರಯೋಜನಗಳಿವೆ. ಅವುಗಳು ಯಾವುದು ಎಂಬುವುದಕ್ಕೆ ಇಲ್ಲಿದೆ ಉತ್ತರ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಡಲೆಕಾಳು ನೆನೆಸಿದ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಎಲ್ಲಾ ರೀತಿಯ ರೋಗಗಳಿಂದಲೂ ನಿಮ್ಮನ್ನು ಇದು ರಕ್ಷಿಸುತ್ತದೆ. ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ನೆನೆಸಿದ ಕಡಲೆಕಾಳು ನೀರು ಸಹಾಯಕವಾಗಿದೆ.

ಮಧುಮೇಹವನ್ನು ನಿಯಂತ್ರಿಸುತ್ತದೆ ನೆನೆಸಿದ ಕಡಲೆಕಾಳು ನೀರು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಈ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.

ತೂಕ ಇಳಿಕೆ ತೂಕ ಇಳಿಸಿಕೊಳ್ಳಲು ಪ್ರತಿದಿನ ಬೆಳಿಗ್ಗೆ ನೆನೆಸಿದ ಕಡಲೆಕಾಳು ನೀರನ್ನು ಕುಡಿಯುವುದು ಒಳ್ಳೆಯದು. ಇದು ಆಯಾಸವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ದುರ್ಬಲವಾಗಿರುವ ದೇಹವನ್ನು ಶಕ್ತಿಯುತವನ್ನಾಗಿ ಮಾಡುತ್ತದೆ. ಹಾಗೆಯೇ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಇದರಿಂದ ಪದೇ ಪದೇ ತಿನ್ನುವ ಅಭ್ಯಾಸ ದೂರವಾಗಿ ದೇಹದ ತೂಕ ಕಡಿಮೆಯಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಡಲೆಕಾಳು ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಕೂಡ ಇದು ಕಡಿಮೆ ಮಾಡುತ್ತದೆ. ಗ್ಯಾಸ್ಟ್ರಿಕ್ ಮತ್ತು ಅಜೀರ್ಣವನ್ನು ಕಡಲೆಕಾಳು ನೀರು ನಿವಾರಿಸುತ್ತದೆ.

ಚರ್ಮದ ಕಾಂತಿ ಹೆಚ್ಚುತ್ತದೆ ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ಚರ್ಮ ಸ್ವಚ್ಛಗೊಳ್ಳುತ್ತದೆ. ಜೊತೆಗೆ ಚರ್ಮದ ಸಮಸ್ಯೆಗಳನ್ನು ಇದು ತಡೆಯುತ್ತದೆ. ನೈಸರ್ಗಿಕವಾಗಿ ಚರ್ಮದ ಹೊಳಪನ್ನು ಹೆಚ್ಚಿಸುವಲ್ಲಿಯೂ ನೆನೆಸಿದ ಕಡಲೆಕಾಳು ನೀರು ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: Garam Masala Benefits: ಗರಂ ಮಸಾಲೆ ಪರಿಮಳ ಮತ್ತು ರುಚಿಗಷ್ಟೇ ಸಿಮಿತವಾಗಿಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿದೆ

Salt: ಉಪ್ಪು ಕಡಿಮೆ ತಿನ್ನುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಎಚ್ಚರ ತಪ್ಪಬೇಡಿ

Published On - 8:22 am, Wed, 4 August 21

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್