Benefits Of Hing: ಇಂಗು ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ

Health Benefits: ಇಂಗಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳೂ ಇವೆ. ಹೊಟ್ಟೆ ಸಮಸ್ಯೆಗಳಿಗೆ ಇಂಗು ಉತ್ತಮ ಪರಿಹಾರವೆಂದು ಪರಿಗಣಿಸಲಾಗಿದೆ. ಇಂಗು ವೈರಸ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ.

Benefits Of Hing: ಇಂಗು ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Oct 25, 2021 | 7:35 AM

ಪ್ರತಿ ಮನೆಯ ಅಡುಗೆ ಮನೆಯಲ್ಲಿ ಇಂಗು ಇರುತ್ತದೆ. ಇದನ್ನು ಸಾಂಪ್ರದಾಯಿಕ ಮಸಾಲೆಯಾಗಿ ಬಳಸಲಾಗುತ್ತದೆ. ಎಲ್ಲಾ ಕರಿಗಳಲ್ಲಿ, ಸಾಂಬಾರ್​ಗಳಲ್ಲಿ ಮತ್ತು ಇತರ ಖಾದ್ಯಗಳ ತಯಾರಿಕೆಯಲ್ಲಿ ಇಂಗು ಬಳಸಲಾಗುತ್ತದೆ. ಸಾಮಾನ್ಯವಾಗಿ ಇತರ ಮಸಾಲೆಗಳನ್ನು ರುಚಿ ಮತ್ತು ಉತ್ತಮ ಬಣ್ಣಕ್ಕಾಗಿ, ಮಾಡುವ ಅಡುಗೆಯಲ್ಲಿ ಸೇರಿಸಲಾಗುತ್ತದೆ. ಆದರೆ ಇಂಗನ್ನು ರುಚಿಯನ್ನು ಹೆಚ್ಚಿಸಲು ಮಾತ್ರವಲ್ಲ ಸುಗಂಧಕ್ಕಾಗಿ ಬಳಸಲಾಗುತ್ತದೆ. ಇಂಗಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳೂ ಇವೆ. ಹೊಟ್ಟೆ ಸಮಸ್ಯೆಗಳಿಗೆ ಇಂಗು ಉತ್ತಮ ಪರಿಹಾರವೆಂದು ಪರಿಗಣಿಸಲಾಗಿದೆ. ಇಂಗು ವೈರಸ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿದೆ. ದೇಹದಲ್ಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಲು ಇವು ಉಪಯುಕ್ತವಾಗಿವೆ. ಅಲ್ಲದೇ ಇನ್ನಿತರ ಸಮಸ್ಯೆಗಳಿಗೂ ಇಂಗು ರಾಮಬಾಣವಾಗಿದೆ. ಹಾಗಿದ್ದರೆ ಇಂಗು ಹೊಂದಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಲೇಬೇಕು.

ಬಿಪಿಯನ್ನು ನಿಯಂತ್ರಿಸುತ್ತದೆ ಇಂಗಿನಲ್ಲಿ ಇರುವ ಪೋಷಕಾಂಶಗಳು ಬಿಪಿಯನ್ನು ನಿಯಂತ್ರಿಸಲು ಕೆಲಸ ಮಾಡುತ್ತವೆ. ಇವು ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ರಕ್ತವನ್ನು ತೆಳುಗೊಳಿಸುತ್ತದೆ ಹಾಗೂ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಜೀರ್ಣಕ್ರಿಯೆ, ಗ್ಯಾಸ್, ಅಸಿಡಿಟಿ, ಮಲಬದ್ಧತೆ ಇತ್ಯಾದಿಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ನೀವು ಹೊಂದಿದ್ದರೆ, ಇಂಗನ್ನು ನಿಯಮಿತವಾಗಿ ಅಡುಗೆಯಲ್ಲಿ ಸೇರಿಸಿ. ಅಲ್ಲದೆ, ಇಂಗನ್ನು ಒಂದು ಚಮಚ ನೀರಿನಲ್ಲಿ ಕದಡಿ ಹೊಟ್ಟೆಯ ಸುತ್ತಲೂ ಉಜ್ಜಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

ಉಸಿರಾಟದ ತೊಂದರೆಗಳಿಗೆ ಪರಿಹಾರ ಇದು ಆಂಟಿ-ವೈರಲ್ ಮತ್ತು ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿದೆ. ಇದರಿಂದ ಕೆಮ್ಮು, ಆಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ವಿವಿಧ ಉಸಿರಾಟದ ಸಮಸ್ಯೆಗಳು ದೂರವಾಗುತ್ತದೆ. ಇಂಗು ಎದೆಯ ಬಿಗಿತವನ್ನು ನಿವಾರಿಸುವ ಕೆಲಸ ಮಾಡುತ್ತದೆ.

ಹಲ್ಲು ನೋವಿಗೆ ಪರಿಹಾರ ಇಂಗು ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಹಲ್ಲು ನೋವಿಗೆ ಸಾಕಷ್ಟು ಪರಿಹಾರ ನೀಡುತ್ತದೆ.

ಇಂಗು ಬಳಸುವುದು ಹೇಗೆ? ವಿವಿಧ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಲು ಪ್ರತಿದಿನ ರಾತ್ರಿ ಮಲಗುವ ಮುನ್ನ ಇಂಗು ಪುಡಿ ಬೆರೆಸಿದ ನೀರನ್ನು ಕುಡಿಯಿರಿ. ಅರ್ಧ ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ 2 ಚಿಟಿಕೆ ಇಂಗು ಪುಡಿಯನ್ನು ಬೆರೆಸಿ ಕುಡಿಯಿರಿ.

ಇದನ್ನೂ ಓದಿ: Black Garlic Benefits: ಕಪ್ಪು ಬೆಳ್ಳುಳ್ಳಿ ಸೇವಿಸಿದ್ದೀರಾ? ಆರೋಗ್ಯಕರ ಬದಲಾವಣೆಯ ಬಗ್ಗೆ ಒಮ್ಮೆ ತಿಳಿಯಿರಿ

Black Pepper Water: ಬಿಸಿ ನೀರಿನ ಜತೆಗೆ ಕರಿಮೆಣಸಿನ ಕಾಳು ಸೇರಿಸಿ; ಆರೋಗ್ಯದಲ್ಲಾಗುವ ಬದಲಾವಣೆ ಬಗ್ಗೆ ಗಮನಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ