Jackfruit: ಹಲಸಿನ ಹಣ್ಣಿನ ಆರೋಗ್ಯಯುತ ಗುಣಗಳ ಬಗ್ಗೆ ತಿಳಿದರೆ ಒಂದು ಹಣ್ಣನ್ನೂ ಹಾಳು ಮಾಡುವುದಿಲ್ಲ

ಹಲಸಿನ ಹಣ್ಣಿನಲ್ಲಿ ಹೇರಳವಾಗಿರುವ ಜೀವಸತ್ವಗಳು ದೇಹಕ್ಕೆ ತುಂಬಾ ಒಳ್ಳೆಯದು. ಈ ಹಿಂದೆ ಕೆಲವು ಪ್ರದೇಶಗಳಿಗೆ ಸೀಮಿತವಾಗಿದ್ದ ಹಲಸಿನ ಹಣ್ಣುಗಳು ಈಗ ಸಿಟಿಗಳಲ್ಲಿನ ಸೂಪರ್​ ಮಾರ್ಕೆಟ್​ನಲ್ಲಿ ಕೂಡ ಸಿಗುತ್ತದೆ.

Jackfruit: ಹಲಸಿನ ಹಣ್ಣಿನ ಆರೋಗ್ಯಯುತ ಗುಣಗಳ ಬಗ್ಗೆ ತಿಳಿದರೆ ಒಂದು ಹಣ್ಣನ್ನೂ ಹಾಳು ಮಾಡುವುದಿಲ್ಲ
ಹಲಸು (ಸಂಗ್ರಹ ಚಿತ್ರ)
Follow us
| Updated By: preethi shettigar

Updated on:Jun 18, 2021 | 9:27 AM

ಪ್ರಕೃತಿ ನೈಸರ್ಗಿಕವಾಗಿ ನಮಗೆ ನೀಡುವ ಹಣ್ಣುಗಳಲ್ಲಿ ಹಲಸಿನ ಹಣ್ಣು ಕೂಡ ಒಂದು. ಈ ಹಣ್ಣು ಅನೇಕ ಉತ್ತಮ ಪೌಷ್ಠಿಕಾಂಶವನ್ನು ಹೊಂದಿದೆ ಮತ್ತು ಆರೋಗ್ಯಯುತವಾದ ಜೀವನಕ್ಕಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಹಲಸಿನ ಹಣ್ಣನ್ನು ಸೇರಿಸಬಹುದು. ಹಲಸಿನ ಹಣ್ಣಿನಲ್ಲಿ ಹೇರಳವಾಗಿರುವ ಜೀವಸತ್ವಗಳು ದೇಹಕ್ಕೆ ತುಂಬಾ ಒಳ್ಳೆಯದು. ಈ ಹಿಂದೆ ಕೆಲವು ಪ್ರದೇಶಗಳಿಗೆ ಸೀಮಿತವಾಗಿದ್ದ, ಹಲಸಿನ ಹಣ್ಣುಗಳು ಈಗ ಸಿಟಿಗಳಲ್ಲಿನ ಸೂಪರ್​ ಮಾರ್ಕೆಟ್​ನಲ್ಲಿ ಕೂಡ ಸಿಗುತ್ತದೆ. ಆದರೆ ಮನೆಯ ಸುತ್ತಮುತ್ತ ಇರುವ ಈ ಹಣ್ಣಿನ ಪ್ರಯೋಜನಗಳ ಬಗ್ಗೆ ಇನ್ನು ಸಾಕಷ್ಟು ಜನರು ತಿಳಿದುಕೊಳ್ಳುವ ಅವಶ್ಯಕತೆ ಇದೆ.

* ಬಾಯಿಯಲ್ಲಿನ ಹುಣ್ಣು ಸಮಸ್ಯೆಯನ್ನು ಕಡಿಮೆ ಮಾಡಲು ಹಲಸಿನ ಹಣ್ಣು ತುಂಬಾ ಉಪಯುಕ್ತವಾಗಿದೆ. ವಿಶೇಷವಾಗಿ ಹಲಸಿನ ಹಣ್ಣಿನ ಅಲ್ಸರೇಟಿವ್, ಆಂಟಿ-ಸೆಪ್ಟಿಕ್, ಉರಿಯೂತ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

* ಹಲಸಿನ ಹಣ್ಣಿನಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಈ ಕಾರಣದಿಂದಾಗಿ, ಹಲಸಿನ ಹಣ್ಣು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ವಿಶೇಷವಾಗಿ ಕಣ್ಣಿನ ಪೊರೆಯಂತಹ ಸಮಸ್ಯೆಗಳಿಗೆ ಈ ಹಣ್ಣನ್ನು ಸೇವಿಸುವುದು ಉತ್ತಮ.

* ಹಲಸಿನ ಹಣ್ಣು ಚರ್ಮದ ಆರೈಕೆಗೆ ಉತ್ತಮ ಔಷಧವಾಗಿಯೂ ಕಾರ್ಯನಿರ್ವಹಿಸುತ್ತದೆ. ಚರ್ಮದ ಸುಕ್ಕುಗಳಂತಹ ಅಥವಾ ವಯಸ್ಸಾದ ಛಾಯೆಗಳನ್ನು ಕಡಿಮೆ ಮಾಡುತ್ತದೆ. ಈ ಹಣ್ಣಿನ ಸೇವನೆಯಿಂದ ಚರ್ಮವು ಯಾವಾಗಲೂ ತಾರುಣ್ಯ ಮತ್ತು ಕಾಂತಿಯುಕ್ತವಾಗಿರುತ್ತದೆ.

* ಕಡಿಮೆ ಕೊಬ್ಬು, ಹೆಚ್ಚಿನ ಕ್ಯಾಲೋರಿ ಹೊಂದಿರುವ ಆಹಾರಗಳು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಹಲಸಿನ ಹಣ್ಣನ್ನು ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು.

* ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಪೊಟ್ಯಾಸಿಯಮ್ ಭರಿತ ಹಲಸಿನ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಬಿಪಿಯನ್ನು ನಿಯಂತ್ರಣದಲ್ಲಿಡುವುದು ಮತ್ತು ಹೃದಯ ಸಂಬಂಧಿತ ಕಾಯಿಲೆಗಳನ್ನು ತಡೆಯುವುವಲ್ಲಿಯೂ ಈ ಹಣ್ಣು ನೆರವಾಗುತ್ತದೆ.

* ಹಲಸಿನ ಹಣ್ಣಿನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಹೀಗಾಗಿ, ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಈ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಅಪೌಷ್ಟಿಕತೆಯ ಸಮಸ್ಯೆ ಮತ್ತು ದೊಡ್ಡ ಕರುಳಿನಲ್ಲಿ ಸಂಗ್ರಹವಾಗುವ ಕ್ಯಾನ್ಸರ್ ರಾಸಾಯನಿಕಗಳನ್ನು ದೂರ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ:

Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

Gourd Juice Side Effects: ಸೋರೆಕಾಯಿ ಜ್ಯೂಸ್​ ಸೇವಿಸುವ ಮೊದಲು ಅದರಿಂದ ಉಂಟಾಗುವ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

Published On - 9:20 am, Fri, 18 June 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ