AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lady Finger: ಆಹಾರದಲ್ಲಿ ಬೆಂಡೆಕಾಯಿಯನ್ನು ಹೆಚ್ಚು ಸೇವಿಸಿ, ಇದು ಮಧುಮೇಹದಿಂದ ಮುಕ್ತಿ ನೀಡುತ್ತದೆ

Health Tips: ವಿಟಮಿನ್ ಬಿ, ವಿಟಮಿನ್ ಸಿ, ಫೋಲಿಕ್ ಆಸಿಡ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಅಧಿಕ ಫೈಬರ್ ಹೊಂದಿದೆ. ಬೆಂಡೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.

Lady Finger: ಆಹಾರದಲ್ಲಿ ಬೆಂಡೆಕಾಯಿಯನ್ನು ಹೆಚ್ಚು ಸೇವಿಸಿ, ಇದು ಮಧುಮೇಹದಿಂದ ಮುಕ್ತಿ ನೀಡುತ್ತದೆ
ಬೆಂಡೆಕಾಯಿ
TV9 Web
| Updated By: ಆಯೇಷಾ ಬಾನು|

Updated on: Aug 05, 2021 | 8:15 AM

Share

ಎಲ್ಲರೂ ಬೆಂಡೆಕಾಯಿ ತಿನ್ನಲು ಇಷ್ಟಪಡುತ್ತಾರೆ. ಬೆಂಡೆಕಾಯಿಯಿಂದ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಬಹುದು. ಇದು ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಂಡೆಕಾಯಿ (Lady Finger) ಮಧುಮೇಹಿಗಳಿಗೆ ಮತ್ತು ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಆಹಾರವಾಗಿದೆ. ಇದರಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ಫೋಲಿಕ್ ಆಸಿಡ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಅಧಿಕ ಫೈಬರ್ ಹೊಂದಿದೆ. ಬೆಂಡೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.

1. ಮಧುಮೇಹಿಗಳಿಗೆ ಪ್ರಯೋಜನಕಾರಿ ಮಧುಮೇಹಿ ಕಾಯಿಲೆಯಿಂದ ಬಳಲುತ್ತಿರುವವರು ಬೆಂಡೆಕಾಯಿ ತಿನ್ನುವುದು ಪ್ರಯೋಜನಕಾರಿಯಾಗಿದೆ. ಅಧ್ಯಯನದ ಪ್ರಕಾರ ಬೆಂಡೆಕಾಯಿ ತಿನ್ನುವವರು ಕಡಿಮೆ ಸಕ್ಕರೆ ಮಟ್ಟವನ್ನು ಹೊಂದಿರುತ್ತಾರೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಮಧುಮೇಹ ಚಿಕಿತ್ಸೆಯಲ್ಲಿ ಬೆಂಡೆಕಾಯಿ ಬೀಜಗಳನ್ನು ಬಳಸಲಾಗುತ್ತಿದೆ.

2. ಫೈಬರ್ ಅಧಿಕವಾಗಿದೆ ಬೆಂಡೆಕಾಯಿಯಲ್ಲಿ ನಾರಿನಂಶ ಅಧಿಕವಾಗಿದೆ. ಇದು ಮಧುಮೇಹವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಗ್ಲೈಸೆಮಿಕ್ ನಿಯಂತ್ರಣವನ್ನು ಉತ್ತೇಜಿಸುತ್ತದೆ ಮತ್ತು ಇನ್ಸುಲಿನ್ ಅನ್ನು ಸುಧಾರಿಸುತ್ತದೆ. ಫೈಬರ್ ಇರುವಿಕೆಯು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತೆ ಮಾಡುತ್ತದೆ. ಹಸಿವು ಬೇಗನೆ ಬರುವುದಿಲ್ಲ. ಆ ಮೂಲಕ ತೂಕ ಇಳಿಕೆಗೂ ಸಹಕಾರಿಯಾಗಿದೆ. ಇದು ಹೊಟ್ಟೆಗೆ ಸಂಬಂಧಿಸಿದ ಇನ್ನಿತರ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.

3. ಉತ್ಕರ್ಷಣ ನಿರೋಧಕವಾಗಿದೆ ಬೆಂಡೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಜೀವನಶೈಲಿಯಲ್ಲಿನ ಬದಲಾವಣೆಗಳ ಮೂಲಕ ಮಧುಮೇಹವನ್ನು ಸಹ ನಿಯಂತ್ರಿಸಬಹುದು. ಒತ್ತಡವನ್ನು ಕಡಿಮೆ ಮಾಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು.

4. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮಧುಮೇಹ ಇರುವವರು ಅಧಿಕ ಕೊಲೆಸ್ಟ್ರಾಲ್ ಹೊಂದಿರುತ್ತಾರೆ ಎಂದು ಸಂಶೋಧನೆಗಳು ತಿಳಿಸಿವೆ. ಆದ್ದರಿಂದ, ನಾವು ನಮ್ಮ ಆಹಾರದಲ್ಲಿ ಆಂಟಿಆಕ್ಸಿಡೆಂಟ್ ಮತ್ತು ಫೈಬರ್ ಅಧಿಕವಾಗಿರುವ ಆಹಾರವನ್ನು ಸೇವಿಸಬೇಕು. ಹೀಗಾಗಿ ಬೆಂಡೆಕಾಯಿ ಸೇವನೆ ಅತ್ಯಗತ್ಯ. ಇದರಿಂದ ಕೊಲೆಸ್ಟ್ರಾಲ್ ಮಟ್ಟವೂ ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ: Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

Garam Masala Benefits: ಗರಂ ಮಸಾಲೆ ಪರಿಮಳ ಮತ್ತು ರುಚಿಗಷ್ಟೇ ಸಿಮಿತವಾಗಿಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿದೆ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ