Health Benefits: ಕಿತ್ತಳೆ ಹಣ್ಣಿನಲ್ಲಿ ಅಡಗಿದ ಅನೇಕ ಆರೋಗ್ಯಕರ ಗುಣ; ಅನಾರೋಗ್ಯದಿಂದ ದೂರ ಇರಲು ದಿನನಿತ್ಯ ಒಂದು ಹಣ್ಣು ಸೇವಿಸಿ

TV9 Digital Desk

| Edited By: Ayesha Banu

Updated on: Jul 11, 2021 | 6:57 AM

ಕಿತ್ತಳೆ ಹಣ್ಣಿನಲ್ಲಿ ಆಂಟಿವೈರಲ್, ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುವ ಶಕ್ತಿ ಇದೆ. ಅಲ್ಲದೆ ದೀರ್ಘಕಾಲದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಕಿತ್ತಳೆ ಹಣ್ಣು ಸಹಾಯ ಮಾಡುತ್ತದೆ.

Health Benefits: ಕಿತ್ತಳೆ ಹಣ್ಣಿನಲ್ಲಿ ಅಡಗಿದ ಅನೇಕ ಆರೋಗ್ಯಕರ ಗುಣ; ಅನಾರೋಗ್ಯದಿಂದ ದೂರ ಇರಲು ದಿನನಿತ್ಯ ಒಂದು ಹಣ್ಣು ಸೇವಿಸಿ
ಸಾಂದರ್ಭಿಕ ಚಿತ್ರ

ಕಿತ್ತಳೆ ಹಣ್ಣು ರಸಭರಿತವಾಗಿದ್ದು, ಅನೇಕ ಪೋಷಕಾಂಶಗಳನ್ನು ಹೊಂದಿದೆ. ಕಿತ್ತಳೆ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು, ಬೀಟಾ-ಕ್ಯಾರೋಟಿನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಇರುತ್ತದೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುವುದರ ಜತೆಗೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಿತ್ತಳೆ ಹಣ್ಣಿನಲ್ಲಿ ಆಂಟಿವೈರಲ್, ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುವ ಶಕ್ತಿ ಇದೆ. ಅಲ್ಲದೆ ದೀರ್ಘಕಾಲದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಕಿತ್ತಳೆ ಹಣ್ಣು ಸಹಾಯ ಮಾಡುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಕಿತ್ತಳೆ ಹಣ್ಣು ಫೈಬರ್ ಅನ್ನು ಹೊಂದಿರುತ್ತದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣಿನಲ್ಲಿರುವ ಫೈಬರ್ ಹೊಟ್ಟೆಯ ಹಸಿವನ್ನು ನೀಗಿಸುತ್ತದೆ ಮತ್ತು ಕಡಿಮೆ ಆಹಾರವನ್ನು ಸೇವಿಸುವಂತೆ ಮಾಡುತ್ತದೆ. ಈ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ. ಕಿತ್ತಳೆ ಹಣ್ಣನ್ನು ಜ್ಯೂಸ್​ ರೂಪದಲ್ಲಿ ಕುಡಿಯುವುದು ಕೂಡ ದೇಹಕ್ಕೆ ಒಳ್ಳೆಯದು.

ಚರ್ಮದ ಕಾಂತಿ ಹೆಚ್ಚಿಸುತ್ತದೆ ಕಿತ್ತಳೆ ಸಾವಯವ ಆಮ್ಲಗಳು, ಜೀವಸತ್ವಗಳು, ಖನಿಜಗಳು, ವಿಟಮಿನ್ ಸಿ ಮತ್ತು ಫ್ಲೇವನಾಯ್ಡ್​ಗಳನ್ನು ಹೊಂದಿರುತ್ತದೆ. ಇದು ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣು ಚರ್ಮವನ್ನು ಹೈಡ್ರೀಕರಿಸುತ್ತದೆ ಮತ್ತು ಕಾಲಜನ್ ಉತ್ಪಾದನೆಯನ್ನು ವೇಗಗೊಳಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಪೊಟ್ಯಾಸಿಯಮ್ ಕಿತ್ತಳೆಯಲ್ಲಿ ಅಧಿಕವಾಗಿರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಕಿತ್ತಳೆ ರಸವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಕಿತ್ತಳೆ ಹಣ್ಣಿನಲ್ಲಿ ಫೈಬರ್ (ಪೆಕ್ಟಿನ್) ಸಮೃದ್ಧವಾಗಿದೆ. ಫೈಬರ್ ಯಕೃತ್ತಿಗೆ ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಹೃದಯವನ್ನು ಆರೋಗ್ಯವಾಗಿರಿಸುತ್ತದೆ ವಿಟಮಿನ್ ಸಿ ಇದರಲ್ಲಿ ಸಮೃದ್ಧವಾಗಿದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಇರಿಸುವ ಮೂಲಕ ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಕಿತ್ತಳೆಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ರಕ್ಷಣೆ ನೀಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಲ್ಲಿನ ಪೋಷಕಾಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಹಣ್ಣುಗಳಲ್ಲಿ ಫೋಲೇಟ್ ನಂತಹ ಅನೇಕ ಅಗತ್ಯ ಪೋಷಕಾಂಶಗಳಿವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲುಗಳನ್ನು ತಡೆಯಬಹುದು ಸಿಟ್ರೇಸ್ ಕೊರತೆಯು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು. ಕಿತ್ತಳೆ ಸಿಟ್ರೇಸ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆಮಾಡಬಹುದು. ಕಿತ್ತಳೆ ಹಣ್ಣಿನಲ್ಲಿ ಕ್ಯಾಲ್ಸಿಯಂ ಇದ್ದು, ದೇಹಕ್ಕೆ ತುಂಬಾ ಒಳ್ಳೆಯದು.

ಇದನ್ನೂ ಓದಿ: Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada