AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Leaf Benefits: ಪಪ್ಪಾಯಿ ಹಣ್ಣು ಮಾತ್ರ ಅಲ್ಲ, ಇದರ ಎಲೆಯೂ ಕೂಡ ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ

ಪಪ್ಪಾಯಿ ಎಲೆಯ ಜ್ಯೂಸ್ ಫ್ಲೇವನಾಯ್ಡ್‌ಗಳು ಮತ್ತು ಕ್ಯಾರೋಟಿನ್ ಮಾತ್ರವಲ್ಲದೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಅನ್ನು ಹೊಂದಿರುತ್ತದೆ. ಪಪ್ಪಾಯಿ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ.

Papaya Leaf Benefits: ಪಪ್ಪಾಯಿ ಹಣ್ಣು ಮಾತ್ರ ಅಲ್ಲ, ಇದರ ಎಲೆಯೂ ಕೂಡ ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Oct 04, 2021 | 8:11 AM

Share

ಪಪ್ಪಾಯಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಇದು ಇತರ ಸಮಸ್ಯೆಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಂತೆ ಪಪ್ಪಾಯಿಯ ಎಲೆಗಳು ಕೂಡ ಅನೇಕ ಪ್ರಯೋಜನಗಳನ್ನು ಹೊಂದಿವೆ. ಪಪ್ಪಾಯಿ ಬೀಜಗಳು ಮತ್ತು ಎಲೆಗಳು ಆರೋಗ್ಯಕ್ಕೂ ಒಳ್ಳೆಯದು. ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ಪಪ್ಪಾಯಿ ಎಲೆಯ ಜ್ಯೂಸ್ ಉತ್ಕರ್ಷಣ ನಿರೋಧಕಗಳು, ಫ್ಲೇವನಾಯ್ಡ್‌ಗಳು ಮತ್ತು ಕ್ಯಾರೋಟಿನ್ ಮಾತ್ರವಲ್ಲದೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಅನ್ನು ಹೊಂದಿರುತ್ತದೆ. ಪಪ್ಪಾಯಿ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಡೆಂಗ್ಯೂ ತಡೆಗಟ್ಟಲು ಪಪ್ಪಾಯಿ ಎಲೆಗಳು ವಿಶೇಷವಾಗಿ ಉಪಯುಕ್ತವಾಗಿವೆ. ಇವುಗಳನ್ನು ತೆಗೆದುಕೊಳ್ಳುವುದರಿಂದ ರಕ್ತದಲ್ಲಿ ಪ್ಲೇಟ್ ಲೆಟ್ಸ್ ಹೆಚ್ಚಾಗುತ್ತದೆ.

ಡೆಂಗ್ಯೂ ವಿರುದ್ಧ ಹೋರಾಡಲು ಪಪ್ಪಾಯಿ ಎಲೆಯ ಜ್ಯೂಸ್ ಡೆಂಗ್ಯೂ ವಿರುದ್ಧ ಹೋರಾಡಲು ಪಪ್ಪಾಯಿ ಎಲೆಯ ಜ್ಯೂಸ್ ಸಹಾಯ ಮಾಡುತ್ತದೆ. ಡೆಂಗ್ಯೂ ಜ್ವರ ಕಾಣಿಸಿಕೊಂಡರೆ ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆ ವೇಗವಾಗಿ ಕುಸಿಯುತ್ತದೆ. ಪ್ಲೇಟ್‌ಲೆಟ್‌ಗಳ ಇಳಿಕೆ ಮತ್ತು ಅಧಿಕ ಜ್ವರದಿಂದಾಗಿ ದೇಹವು ನಿತ್ರಾಣಗೊಂಡಂತೆ ಭಾಸವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಪಪ್ಪಾಯಿ ಎಲೆಗಳನ್ನು ಸೇವಿಸಿದರೆ ಪ್ಲೇಟ್‌ಲೆಟ್‌ಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತದೆ.

ಮಲೇರಿಯಾಗೆ ರಾಮಬಾಣ ಪಪ್ಪಾಯಿ ಎಲೆಗಳ ರಸ ಅಥವಾ ಸಾರವನ್ನು ಮಲೇರಿಯಾ ಚಿಕಿತ್ಸೆಗೂ ಬಳಸಲಾಗುತ್ತದೆ. ಮಲೇರಿಯಾ ಜ್ವರವನ್ನು ನಿಯಂತ್ರಿಸಲು ಸಹಾಯ ಮಾಡುವ ಪ್ಲಾಜ್‌ಮೋಡಿಸ್ಟಾಟಿಕ್ ಗುಣಗಳು ಪಪ್ಪಾಯಿ ಎಲೆಗಳಲ್ಲಿ ಕಂಡು ಬರುತ್ತವೆ. ಹೀಗಾಗಿ ಮಲೇರಿಯಾ ಜ್ವರಕ್ಕೆ ಪಪ್ಪಾಯಿ ಎಲೆ ಅತ್ಯುತ್ತಮ ಮನೆಮದ್ದು ಎನ್ನಬಹುದು.

ಜೀರ್ಣಕಾರಿ ಸಮಸ್ಯೆಗೆ ಪರಿಹಾರ ಪಪ್ಪಾಯಿ ಎಲೆ ಕೈಮೋಪೆಪಿನ್‌ನ ಪೆಪಿನ್ ಅಂಶಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಬೇಕಾದ ಅಗತ್ಯ ಫೈಬರ್ ಅನ್ನು ಒಳಗೊಂಡಿರುತ್ತವೆ. ಇದನ್ನು ಸೇವಿಸುವುದರಿಂದ ಎದೆ ಉರಿ, ಹುಳಿ ತೇಗು, ಅಜೀರ್ಣ ಸಮಸ್ಯೆ ಮತ್ತು ಮಲಬದ್ಧತೆ ಮುಂತಾದ ಸಮಸ್ಯೆಗಳು ದೂರವಾಗುತ್ತದೆ.

ಪಿತ್ತಜನಕಾಂಗಕ್ಕೆ ಸಹಕಾರಿ ಪಪ್ಪಾಯಿ ಎಲೆಗಳ ಸೇವನೆಯು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇದು ರಕ್ತವನ್ನು ಶುದ್ಧೀಕರಿಸುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ, ಲಿಪಿಡ್​ಗಳು ಪೆರಾಕ್ಸಿಡೇಶನ್ ಕೂಡ ಕಡಿಮೆಯಾಗುತ್ತದೆ. ಇದೇ ಕಾರಣದಿಂದಾಗಿ ಕಾಮಾಲೆ, ಲಿವರ್ ಸಿರೋಸಿಸ್ ಮೊದಲಾದ ಪಿತ್ತಜನಕಾಂಗಕ್ಕೆ ಸಂಬಂಧಿಸಿದ ರೋಗಗಳು ದೂರವಾಗುತ್ತವೆ.

ಇನ್ನಿತರ ಸಮಸ್ಯೆಗೆ ಪರಿಹಾರ ಪಿರಿಯಡ್ಸ್ ನೋವನ್ನು ಕಡಿಮೆ ಮಾಡಲು ಈ ಜ್ಯೂಸ್ ತುಂಬಾ ಉಪಯುಕ್ತವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪಪ್ಪಾಯಿ ಎಲೆಯ ಜ್ಯೂಸ್ ತುಂಬಾ ಉಪಯುಕ್ತವಾಗಿದೆ. ಇದು ವೈರಲ್ ಸೋಂಕಿನಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಈ ರಸವನ್ನು ಕುಡಿಯುವುದರಿಂದ ರಕ್ತದಲ್ಲಿ ಬಿಳಿ ರಕ್ತ ಕಣಗಳು ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆ ಹೆಚ್ಚಾಗುತ್ತದೆ. ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಕಬ್ಬಿಣದ ಕೊರತೆಯು ಕಡಿಮೆಯಾಗುತ್ತದೆ.

ಇದನ್ನೂ ಓದಿ:

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Raisin Water Benefits: ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್